ದಕ್ಷಿಣ ಕನ್ನಡ

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ

ಮಾಜಿ ಶಾಸಕ ಬಾವಾಗೆ ಕೊನೆಗೂ ಸಿಗಲಿಲ್ಲ ಟಿಕೆಟ್‌-ಬಂಡಾಯದ ಸುಳಿವು ಕಾರ್ಕಳ : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟನ್ನು ಕಾಂಗ್ರೆಸ್‌ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಯಮಿ ಇನಾಯತ್‌ ಅಲಿಗೆ ನೀಡಿದೆ. ಕೊನೆಯ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಹೆಸರನ್ನು ಕಾಂಗ್ರೆಸ್‌ ವರಿಷ್ಠರು ನಿನ್ನೆ ರಾತ್ರೋರಾತ್ರಿ ಘೋಷಿಸಿದ ಪಟ್ಟಿಯಲ್ಲಿ ಪ್ರಕಟಿಸಿದ್ದಾರೆ.ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಮತ್ತು ಇನಾಯತ್‌ ಅಲಿ ನಡುವೆ ತೀವ್ರ ಪೈಪೋಟಿಯಿದ್ದ ಕಾರಣ ಕೊನೆಯವರೆಗೂ ಕಾಂಗ್ರೆಸ್‌ ವರಿಷ್ಠರಿಗೆ ಅಭ್ಯರ್ಥಿ ಆಯ್ಕೆ […]

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ Read More »

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರನಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ನೀಡಿದರು. ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಿಕ್ಕಿರಿದ ಜನಸ್ತೋಮ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read More »

ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಕೆಲಸದ ಕುರಿತು 1.14 ಲಕ್ಷ ರೂ. ವಂಚನೆ – ದೂರು ದಾಖಲು

ಮಂಗಳೂರು : ಪಾರ್ಟ್‌ಟೈಂ ಕೆಲಸದ ಕುರಿತು ಟೆಲಿಗ್ರಾಂ ಖಾತೆಯಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 1,14,901 ರೂ. ಮೋಸ ಹೋಗಿರುವ ಕುರಿತು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಫಲ್ಗುಣಿ ಎಂಬ ಹೆಸರಿನಿಂದ ಪಾರ್ಟ್‌ ಟೈಂ ಕೆಲಸದ ಬಗ್ಗೆ ಸಂದೇಶ ಬಂದಿದ್ದು, ಈ ಕುರಿತು ವಿಚಾರಿಸಿದಾಗ, ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಉದ್ಯೋಗ ಎಂದು ತಿಳಿಸಿದ್ದಾರೆ. ಇನ್ನು ಲಿಂಕ್‌ ಕಳುಹಿಸಿ ಆ್ಯಪ್‌ ಇನ್‌ಸ್ಟಾಲ್‌ ಮಾಡಿ ಖಾತೆ ತೆರೆದು ಅದರಲ್ಲಿ ಪ್ರಸಾರವಾಗುವ ವೀಡಿಯೋ ನೋಡಿ ರೇಟಿಂಗ್‌ ಹಾಕಿ ಕಮೀಷನ್‌ ಹಣ

ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಕೆಲಸದ ಕುರಿತು 1.14 ಲಕ್ಷ ರೂ. ವಂಚನೆ – ದೂರು ದಾಖಲು Read More »

ಪುಟ್ಟ ಬಾಲಕನ ಚಿಕಿತ್ಸೆಗೆ ನೇರವಾದ ವಿಶ್ವಹಿಂದೂ ಪರಿಷದ್, ಭಜರಂಗದಳ

ಬಂಟ್ವಾಳ: ಕಂಬ್ಳ ಪೋಡಿಕಲ ಹನುಮಾನ್ ನಗರ ಶ್ರೀ ರಾಮ ಭಕ್ತ ಆಂಜನೇಯ ಟ್ರಸ್ಟ್ ಸದಸ್ಯರು  ಒಟ್ಟು ಸೇರಿ ವಿಶ್ವಹಿಂದೂ ಪರಿಷದ್, ಭಜರಂಗದಳ ಹನುಮಾನ್ ಶಾಖೆ ನೇತೃತ್ವದಲ್ಲಿ ಕಾರಣಿಕ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಿಯ ಜಾತ್ರೋತ್ಸವದ ಸಂದರ್ಭದಲ್ಲಿ ಭವತಿ ಬಿಕ್ಷಾಂದೇಹಿ ಸಹಾಯ ಯೋಜನೆಯ0ತೆ ಪುಟ್ಟ ಬಾಲಕನಿಗೆ ಧನ ಸಹಾಯ ಮಾಡಿದರು. ಮಂಗಳೂರು ತಾಲೂಕಿನ ಕುಪ್ಪೆಪದವು ಸಮೀಪದ ಕೊಳವೂರು ಗ್ರಾಮದ ಜಯಶೀಲಾ ಸದಾಶಿವ ಆಚಾರ್ಯ ದಂಪತಿ 2ವರ್ಷ 3ತಿಂಗಳ ಶಮಿತ್  ಎಂಬ ಮಗುವಿಗೆ ಹುಟ್ಟುವಾಗಲೇ ಮಲ ವಿಸರ್ಜನೆ ಮಾಡುವ ಅಂಗವಿರಲಿಲ್ಲ

ಪುಟ್ಟ ಬಾಲಕನ ಚಿಕಿತ್ಸೆಗೆ ನೇರವಾದ ವಿಶ್ವಹಿಂದೂ ಪರಿಷದ್, ಭಜರಂಗದಳ Read More »

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಸುಳ್ಯ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿ ಏ.13 ರಂದು ಸಂಭವಿಸಿದೆ. ವಸಂತ್‌ ಕುಮಾರ್‌ ಎಂಬವರೇ ಮೃತಪಟ್ಟ ವ್ಯಕ್ತಿ. ಮದ್ಯಪಾನ ದುಶ್ಚಟ ಹೊಂದಿದ್ದ ಇವರು ಏ.13 ರಂದು ಕ್ರಿಮಿನಾಶಕ ಸೇವಿಸಿದ್ದು, ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿರುತ್ತಾರೆ. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು Read More »

ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ

ಉಡುಪಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸುತ್ತಿವೆ. ಸಭೆ-ಸಮಾರಂಭಗಳನ್ನು ಏರ್ಪಡಿಸುವುದು, ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರುತ್ತಿದ್ದಾರೆ. ಈಗ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಕೋರಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುಕಮಾರ ಶೆಟ್ಟಿ ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗುರುರಾಜ್ ಗಂಟಿಹೊಳೆ ಅವರು ಈಗ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ

ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ Read More »

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು

ಸಂಪಾಜೆ : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ನಡುವೆ ಭೀಕರ ಅಪಘಾತವು ಮಾಣಿ-ಮೈಸೂರು ರಾ.ಹೆದ್ದಾರಿಯ ಸಂಪಾಜೆ ಎಂಬಲ್ಲಿ ಸಂಭವಿಸಿದೆ. ರಾಜ್ಯ ರಸ್ತೆ ಸಾರಿಗೆ ಬಸ್ಸು ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದು, ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು Read More »

ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ

ಸುಳ್ಯ : ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಅವರು ಎ.14 ರಂದು ಸುಳ್ಯ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಹೇಳಿಕೆ ನೀಡಿದರು. ನಾನೆಂದೂ ಟಿಕೆಟ್ ಕೊಡಿ

ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ Read More »

ಸುಳ್ಯ ವಿಧಾನಸಭಾ ಕ್ಷೇತ್ರ : ನಂದಕುಮಾರ್ ಮತ್ತು ಕೃಷ್ಣಪ್ಪ ಬಣಗಳ ಸಭೆ ಕರೆದ ಡಿ.ಕೆ.ಶಿ

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಎ. 14 ರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಈಗಾಗಲೇ ಸುಳ್ಯದಲ್ಲಿ ಜಿ. ಕೃಷ್ಣಪ್ಪ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದ್ದು, ಇದರಿಂದ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಅಲ್ಲದೇ ನಂದಕುಮಾರ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವ ಸಿದ್ಧತೆ ಕೂಡ ನಡೆಸಿದ್ದಾರೆ.‌ ಕಾಂಗ್ರೆಸ್ ಬಿಫಾರಂ ನೀಡಬೇಕು ಇಲ್ಲದಿದ್ದರೆ ಪಕ್ಷೇತರರಾಗಿ‌ ಸ್ಪರ್ಧೆ

ಸುಳ್ಯ ವಿಧಾನಸಭಾ ಕ್ಷೇತ್ರ : ನಂದಕುಮಾರ್ ಮತ್ತು ಕೃಷ್ಣಪ್ಪ ಬಣಗಳ ಸಭೆ ಕರೆದ ಡಿ.ಕೆ.ಶಿ Read More »

error: Content is protected !!
Scroll to Top