ದಕ್ಷಿಣ ಕನ್ನಡ

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ

ಸುಳ್ಯ : ಆರು ಬಾರಿ ಶಾಸಕರಾಗಿರುವ ಸಚಿವ ಎಸ್‌.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸಲು ಏ. 11 ರಂದು ನಿರ್ಧರಿಸಿದ್ದಾರೆ.ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಕ್ಷೇತ್ರವಾಗಿದ್ದು, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಅಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಹೊಳೆ […]

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ Read More »

ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಮುದಾಯ ಪ್ರಾತಿನಿಧ್ಯಕ್ಕೆ ಒತ್ತಾಯ | ಅವಕಾಶ ನೀಡಿದದ್ದರೆ ಜಿಲ್ಲೆಯ ಒಕ್ಕಲಿಗರು ಒಗ್ಗಟ್ಟಾಗಿ ಸೂಕ್ತ ತೀರ್ಮಾನ | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲೂ ವ್ಯತಿರಿಕ್ತ ಪರಿಣಾಮ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಕ್ಷೇತ್ರದಲ್ಲಿ ಶಾಸಕರಾಗಿರುವ ಸಂಜೀವ ಮಠಂದೂರು ಅವರು ಸಮರ್ಥ ನಾಯಕರು. ಆದರೆ ಅವರಿಗೆ ಟಿಕೇಟ್ ನಿರಾಕರಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಟಿಕೇಟ್ ನಿರಾಕರಿಸಲು ಕಾರಣವೇನು? ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ

ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಮುದಾಯ ಪ್ರಾತಿನಿಧ್ಯಕ್ಕೆ ಒತ್ತಾಯ | ಅವಕಾಶ ನೀಡಿದದ್ದರೆ ಜಿಲ್ಲೆಯ ಒಕ್ಕಲಿಗರು ಒಗ್ಗಟ್ಟಾಗಿ ಸೂಕ್ತ ತೀರ್ಮಾನ | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲೂ ವ್ಯತಿರಿಕ್ತ ಪರಿಣಾಮ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹ Read More »

ಇನ್ನೂ ಅಚ್ಚಳಿಯದೆ ಉಳಿದ ಕಹಿ ನೆನಪು ಪೆರ್ನೆಯ ಟ್ಯಾಂಕರ್‌ ದುರಂತ

ಉಪ್ಪಿನಂಗಡಿ : ಸಮೀಪದ ಪೆರ್ನೆಯಲ್ಲಿ 2013 ಎಪ್ರಿಲ್‌ 9ರಂದು ಅಡುಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಅಪಘಾತಕ್ಕೀಡಾಗಿ ಅನಿಲ ಸೋರಿಕೆಯೊಂದಿಗೆ ಅಗ್ನಿ ಅನಾಹುತ ಸಂಭವಿಸಿದ ಭೀಕರ ಘಟನೆಯಿಂದ ಹಲವು ಕುಟುಂಬಗಳಿಗೆ ಸೇರಿದ 13 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡ ಘಟನೆಗೆ 10 ವರ್ಷ ಸಂದರೂ ಅದರ ಕಹಿ ನೆನಪು ಇನ್ನೂ ಅಚ್ಚಳಿಯದೆ ಉಳಿದಿದೆ. ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್‌ ಪೆರ್ನೆ ತಿರುವಿನಲ್ಲಿ ಮಗುಚಿ ಬಿದ್ದಿದ್ದು, ಅನಿಲ ಸೋರಿಕೆ ಆರಂಭವಾಗಿ ಅಗ್ನಿ ಸ್ಪರ್ಶವಾಗಿತ್ತು. ಧಗಧಗಿಸಲಾರಂಭಿಸಿದ ಬೆಂಕಿಯ

ಇನ್ನೂ ಅಚ್ಚಳಿಯದೆ ಉಳಿದ ಕಹಿ ನೆನಪು ಪೆರ್ನೆಯ ಟ್ಯಾಂಕರ್‌ ದುರಂತ Read More »

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಎ. 8 ರಂದು ಸಂಭವಿಸಿದೆ. ಬೆಳ್ಯಪ್ಪ ಗೌಡ(75) ಎಂಬವರೇ ಮೃತ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಎ. 8 ರಂದು ದನದ ಕೊಟ್ಟಿಗೆಯ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ತೊಕ್ಕೊಟ್ಟು : ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ : ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರಂದು ಬೆಳಗ್ಗೆ ಸಂಭವಿಸಿರುತ್ತದೆ. ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಇವರು ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿದ್ದರು. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್‌ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ

ತೊಕ್ಕೊಟ್ಟು : ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ Read More »

1.999 ಕೆಜಿ ಗಾಂಜಾ ವಶ : ಯುವಕನ ಬಂಧನ

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಏ. 10 ರಂದು ಮರಕಡ್ಡದ ಪಡುಶೆಡ್ಡೆ ರಸ್ತೆ ಬದಿಯಲ್ಲಿ ಸಂಛವಿಸಿದೆ.ಬಂಧಿತ ಆರೋಪಿಯನ್ನು ಮಲ್ಪೆ ನಿವಾಸಿ ಸುಹಾನ್ ಎಸ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಸುಹಾನ್ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ್ಡದ ಪಡುಶೆಡ್ಡೆ ಬಳಿ ರಸ್ತೆ ಬದಿ ಸ್ಕೂಟರ್‌ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಆತನಿಂದ 1.999 ಕೆಜಿ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಅನ್ನು ಪೊಲೀಸರು ಜಪ್ತಿ

1.999 ಕೆಜಿ ಗಾಂಜಾ ವಶ : ಯುವಕನ ಬಂಧನ Read More »

ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು

ಬಂಟ್ವಾಳ : ಬೈಕ್ ಪ್ರಪಾತಕ್ಕೆ ಬಿದ್ದು, ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಏ. 10 ರ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.ಯಶೋಧರ(25) ಎಂಬವರೇ ಮೃತ ದುರ್ದೈವಿ. ಚಿಕ್ಕಮಗಳೂರು ನಿವಾಸಿಯಾದ ಇವರು ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬೈಕ್ ಚಲಾಯಿಸುತ್ತಿದ್ದ ಈತನ ಸ್ನೇಹಿತ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ. ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿ ಸ್ನೇಹಿತನ

ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು Read More »

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ

ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರಯಾಣಿಸುತ್ತಿದ್ದ ಕಾರು ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಕಾರು ಕಂದಕಕ್ಕೆ ಉರುಳಿ ಬಿದ್ದು ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆಯ ಸಂಬಂಧಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪುಷ್ಪಾವತಿ ಆರ್‌.ಶೆಟ್ಟಿಯವರು ಕುಟುಂಬದ ಜತೆ ಕೊಪ್ಪದಲ್ಲಿ ಅಂತ್ಯಕ್ರಿಯೆಯೊಂದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಚಾರ್ಮಾಡಿಯ ಎರಡನೇ ತಿರುವಿನಲ್ಲಿ ಕಾರು ಬ್ರೇಕ್‌ ಫೈಲ್‌ ಆಗಿ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ ಪುಷ್ಪಾವತಿ ಆರ್‌.

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ Read More »

ಬೆಳ್ತಂಗಡಿಯ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ – ಕರಾವಳಿಯಲ್ಲಿ ಮಳೆ ಸಾಧ್ಯತೆ

ಬೆಳ್ತಂಗಡಿ/ಮಂಗಳೂರು : ಮನೆಯ ಮೇಲೆ ತೆಂಗಿನಮರ ಬಿದ್ದು ಸಂಪೂರ್ಣ ಹಾನಿಗೀಡಾಗಿರುವ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಎಂಬಲ್ಲಿ ಎ.8 ರಂದು ಸಂಭವಿಸಿದೆ. ಪಡಂಗಡಿಯ ಜೊಬೆಲ್ಲಾ ಫೆಲಿಕ್ಸ್‌ ಅವರ ಮನೆಗೆ ಶುಕ್ರವಾರ ರಾತ್ರಿ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿದ್ದು, ಆ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ಕಾರಣ ಜೀವಹಾನಿ ತಪ್ಪಿದೆ.ಫೆಲಿಕ್ಸ್‌ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್‌ಗೆ

ಬೆಳ್ತಂಗಡಿಯ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ – ಕರಾವಳಿಯಲ್ಲಿ ಮಳೆ ಸಾಧ್ಯತೆ Read More »

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಎ. 7 ರಂದು ಸಂಭವಿಸಿದೆ. ಯಶವಂತ ಜಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಇವರು ಎ. 5 ರ ರಾತ್ರಿ ತನ್ನ ಅಣ್ಣನ ಮೊಬೈಲ್ ಗೆ ಕರೆ ಮಾಡಿ ಮಾತನಾಡಿದ್ದು, ಆ ಬಳಿಕ ಕರೆ ಮಾಡಿದರೂ ಸ್ವೀಕರಿಸದೇ, ತನ್ನ ಮನೆಗೂ ಬಾರದೇ, ಎ. 7 ರ ಸಂಜೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಮ್ಯಾಂಜಿಯಮ್ ಮರಕ್ಕೆ ನೈಲಾನ್

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top