ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ
ಸುಳ್ಯ: ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂ ತಾಲೂಕು ಆರೋಗ್ಯ ಇಲಾಖೆಯವರು ಜಂಟಿಯಾಗಿ ಹಮ್ಮಿಕೊಂಡ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ” ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ […]