ದಕ್ಷಿಣ ಕನ್ನಡ

ಕೆಂಪು ಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ಅವಘಡ ತಪ್ಪಿಸಿದ ಮಹಿಳೆ

ಮಂಗಳೂರು : ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ – ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ಏ 04 ರಂದು ನಡೆದಿದೆ. ಚಂದ್ರಾವತಿ (70) ಎಂಬವರೇ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ […]

ಕೆಂಪು ಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ಅವಘಡ ತಪ್ಪಿಸಿದ ಮಹಿಳೆ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲು ಎಂಬಲ್ಲಿ ಏ. 3 ರಂದು ಸಂಭವಿಸಿದೆ. ಶಿವಪ್ಪ ಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 4 ವರ್ಷಗಳ ಹಿಂದೆ ದಂಪತ್ಯದಲ್ಲಿ ಮನಸ್ಧಾಪ ಉಂಟಾಗಿ ಆತನ ಪತ್ನಿ ತವರು ಮನೆಯಲ್ಲಿ ನೆಲೆಸಿದ ಕಾರಣ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಏ. 1 ರಂದು ಶಿವಪ್ಪ ಗೌಡ ಕಾಣೆಯಾದ ಬಗ್ಗೆ ಅಣ್ಣ ತಿಮ್ಮಪ್ಪ ಗೌಡ ಪುತ್ತೂರು ನಗರ ಪೊಲೀಸ್‌

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಇಚ್ಚೆ ಎಂಬಲ್ಲಿ ಏ.2 ರಂದು ಸಂಭವಿಸಿದೆ. ಅಂಗಾರ(80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಇವರು ಏ.2 ರಂದು ಮನೆಯಿಂದ ಸ್ವಲ್ಪ ದೂರದಲ್ಲಿ ಗೇರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಜಿಲ್ಲಾಧಿಕಾರಿಯಿಂದ ರೈತರಿಗೆ ಸಿಹಿಸುದ್ದಿ : ಕೋವಿ ಠೇವಣಿಯಿಂದ ವಿನಾಯಿತಿ

ಮಂಗಳೂರು : ಚುನಾವಣೆ ಸಮಯದಲ್ಲಿ ರೈತರು ಸೇರಿದಂತೆ ಎಲ್ಲರೂ ತಮ್ಮ ಪರವಾನಗಿಯುಳ್ಳ ಕೋವಿ/ಆಯುಧಗಳನ್ನು ಸಮೀಪದ ಠಾಣೆಯಲ್ಲಿ ಠೇವಣಿ ಇಡಬೇಕಾಗುತ್ತದೆ. ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದೆಲ್ಲೆಡೆ ಈ ಆದೇಶ ಜಾರಿಯಲ್ಲಿದೆ. ಆದರೆ, ದಕ್ಷಿಣಕನ್ನಡ ಜಿಲ್ಲೆಯ ರೈತರಿಗೆ ಮಾತ್ರ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಏ.3 ರಂದು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರೈತರು ಠೇವಣಿ ಇಡುವ ವಿಚಾರದಲ್ಲಿ ಕೆಲ ಸಡಿಲಿಕೆಗಳನ್ನು ಮಾಡಿದ್ದಾರೆ. ಚುನಾವಣೆ ಬಂದಾಗ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲಾನ ಮುಂಜಾಗ್ರತ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ರಾಜ್ಯದಲ್ಲಿ

ಜಿಲ್ಲಾಧಿಕಾರಿಯಿಂದ ರೈತರಿಗೆ ಸಿಹಿಸುದ್ದಿ : ಕೋವಿ ಠೇವಣಿಯಿಂದ ವಿನಾಯಿತಿ Read More »

ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚಿಸಿದ ಆರೋಪಿಯ ಬಂಧನ

ಮಂಗಳೂರು : ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಏ. 2 ರಂದು ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು

ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚಿಸಿದ ಆರೋಪಿಯ ಬಂಧನ Read More »

ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ

ಬೆಳ್ತಂಗಡಿ : ಪಡಂಗಡಿಯಲ್ಲಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾದ ಘಟನೆ ಮಾ. 30 ರಂದು ಸಂಭವಿಸಿದೆ.ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ್ದಾರೆ. ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಎಂಬವರೇ ಹಣ ಎಗರಿಸಿದ ಆರೋಪಿಗಳು. ಜುವಾಮ್‌ ಗೋವಿಯಸ್‌ ಅವರು ತನ್ನ ಮಗನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಮನೆಯಲ್ಲಿ ಈ ಹಿಂದೆ ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದ

ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು

ಮಂಗಳೂರು : ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು Read More »

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ ಮಂಗಳೂರು : ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್​​ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಎ. 2 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಬೀಡಿ, ಸಿಗರೇಟ್​​, ಪಾನ್​​ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ.

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ Read More »

ಆಯಿಲ್‌ ಫಿಲ್ಲಿಂಗ್ ವೇಳೆ ಪೈಪ್ ಸ್ಪೋಟ : ನಾಲ್ವರಿಗೆ ಗಾಯ

ಮಂಗಳೂರು : ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಪೈಪ್‌ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಮಂಗಳೂರಿನ ನವಬಂದರಿನಲ್ಲಿ ನಡೆದ ಈ ದುರಂತ ಹಡಗಿನಿಂದ ನೇರವಾಗಿ ಟ್ಯಾಂಕರ್‌ಗೆ ಬಿಟುಮೆನ್ ಆಯಿಲ್ ವರ್ಗಾಯಿಸುವಾಗ ಸಂಭವಿಸಿದೆ. ಆದರೆ ಶಿಪ್‌ನಲ್ಲಿ ಬಂದ ಬಿಟುಮೆನ್ ಆಯಿಲ್ ಅನ್ನು ಟ್ಯಾಂಕಿಗೆ ಮೊದಲು ವರ್ಗಾಯಿಸುವುದು ನಿಯಮ. ಆಯಿಲ್‌ ಅನ್ನು ಟ್ಯಾಂಕರ್‌ಗೆ ವರ್ಗಾಯಿಸುವ ವೇಳೆ ಪೈಪ್ ಸ್ಪೋಟಗೊಂಡು ಆಯಿಲ್ ಕಾರ್ಮಿಕರ ಮೈ ಮೇಲೆ ಬಿದ್ದಿದ್ದು ತಕ್ಷಣವೇ ಅವರನ್ನು ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ

ಆಯಿಲ್‌ ಫಿಲ್ಲಿಂಗ್ ವೇಳೆ ಪೈಪ್ ಸ್ಪೋಟ : ನಾಲ್ವರಿಗೆ ಗಾಯ Read More »

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ

ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಪುತ್ತೂರು : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್‌ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ Read More »

error: Content is protected !!
Scroll to Top