ದಕ್ಷಿಣ ಕನ್ನಡ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡ್ನೂರು ಗ್ರಾಮದ ಎಲ್ಕಾಜೆ ಎಂಬಲ್ಲಿ ಮಾ.31 ರಂದು ಸಂಭವಿಸಿದೆ. ಯಮುನಾ(72) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ರಕ್ತದ ಒತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರಿನ ವೈದ್ಯರಲ್ಲಿ ಔಷಧಿ ಮಾಡಿಸಿದರೂ ಗುಣಮುಖವಾಗದೇ ಇದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರದಂದು ಮನೆಯ ಅಡುಗೆ ಕೋಣೆಯ ಛಾವಣಿಗೆ ಸೀರೆಯನ್ನು ಕುಣಿಕೆ ಮಾಡಿ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ

ಪುತ್ತೂರು : ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಜಿ.ಎಲ್‌. ಪ್ರಾಪರ್ಟಿಸ್‌ ಪ್ರವರ್ತಿತ ಜಿ.ಎಲ್‌. ಒನ್‌ ಶಾಪಿಂಗ್‌ ಮಾಲ್‌ ಎ. 2ರಂದು ಲೋರ್ಕಾಪಣೆಗೊಳ್ಳಲಿದ್ದು, ಜಿಲ್ಲಾ ಕೇಂದ್ರದ ನಿರೀಕ್ಷೆಯಲ್ಲಿರುವ ಪುತ್ತೂರಿಗೆ ಇದು ಮಹತ್ವದ ಕೊಡುಗೆಯಾಗಿದೆ. ಏನಿದು ಜಿ.ಎಲ್‌. ಒನ್‌ ಮಾಲ್‌?ಆಭರಣ ಸೇರಿದಂತೆ ವ್ಯವಹಾರ ಕ್ಷೇತ್ರದಲ್ಲಿ ಗುಣಮಟ್ಟ, ವಿಶ್ವಾರ್ಹತೆಯೊಂದಿಗೆ ಜಿ.ಎಲ್‌. ತನ್ನದೇ ಆದ ಬ್ರ್ಯಾಂಡ್‌ ಸೃಷ್ಟಿಸಿದೆ. ಈ ಸಂಸ್ಥೆಯ ಹೊಸ ಕೊಡುಗೆ ವಿನೂತನ ಸೌಲಭ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ಮಾಲ್‌ನಲ್ಲಿ 5 ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್‌, ನೆಲ

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ Read More »

ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾ. 31 ರಂದು ಸಂಭವಿಸಿದೆ. ರೆನೀಶ್ (27) ಎಂಬಾತನೇ ಮೃತ ಯುವಕ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಇವನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ.

ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಗೆ ಕಾರಣ : ಸಾಲಬಾಧೆ

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ನಡೆದಿದೆ.ದೇವೇಂದ್ರ (48), ನಿರ್ಮಲಾ(48), ಚೈತ್ರಾ(09), ಚೈತನ್ಯ (09), ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಮೂಲತಃ ಮೈಸೂರಿನ ವಿಜಯನಗರ ಮೂಲದವರಾಗಿದ್ದರು.ಕರುಣಾ ಲಾಡ್ಜ್‌ನಲ್ಲಿ ಘಟನೆ ನಡೆದಿದ್ದು, ಮೈಸೂರು ಮೂಲದ ದಂಪತಿ ಮತ್ತು ಅವಳಿ ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಡೆತ್‌ ನೋಟ್‌ ಸಿಕ್ಕಿದ್ದು, ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿ,

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಗೆ ಕಾರಣ : ಸಾಲಬಾಧೆ Read More »

ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಆಡಳಿತ ಮಂಡಳಿ ಚುನಾವಣೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯಾದ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಆಡಳಿತ ಮಂಡಳಿಗೆ ಮಾ.26 ರಂದು ನಡೆದ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಲೋಕಯ್ಯ ಗೌಡರ ನೇತೃತ್ವದ ತಂಡ ಒಂದು ಸ್ಥಾನದ ಮೂಲಕ ಬಹುಮತ ಪಡೆದಿದೆ. ಎದುರಾಳಿ ತಂಡದ ನಾಯಕತ್ವ ವಹಿಸಿದ್ದ ಕಿರಣ್ ಬುಡ್ಲೆಗುತ್ತು ಅತಿಹೆಚ್ಚು ಮತ ಪಡೆದು ಜಯಭೇರಿ ಬಾರಿಸಿದ್ದಾರೆ. ಅವರ ತಂಡ 10 ಸ್ಥಾನಗಳನ್ನು ಪಡೆದುಕೊಂಡಿದೆ. ಲೋಕಯ್ಯ ಗೌಡರ ತಂಡ 11 ಸ್ಥಾನಗಳನ್ನು ಗೆದ್ದುಕೊಂಡಿದೆ. ಸಂಘದ ಒಟ್ಟು 21 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಲೋಕಯ್ಯ

ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಆಡಳಿತ ಮಂಡಳಿ ಚುನಾವಣೆ Read More »

ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ

ಮಂಗಳೂರು : ಸುರತ್ಕಲ್‌ನ ಎನ್‌ಐಟಿಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಗೇ ಸುಮಾರು 28 ಲ.ರೂ. ಪಂಗನಾಮ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕ ಲಾಭ ನೀಡುವುದಾಗಿ ಹಣ ಪಡೆದು ವಂಚಿಸಿರುವ ಬಗ್ಗೆ ವಿದ್ಯಾರ್ಥಿ ಯಶ್‌ವರ್ಧನ್‌ ಜೈನ್ ಎಂಬಾತನ ವಿರುದ್ಧ ಕೇಸು ದಾಖಲಾಗಿದೆ.. 2022ರ ಮಾರ್ಚ್‌ನಿಂದ ವಾಟ್ಸಪ್ ಗ್ರೂಪ್‌ನಲ್ಲಿ ಎನ್‌ಐಟಿಕೆ ವಿದ್ಯಾರ್ಥಿಗಳಿಗೆ ಒಂದು ವಾರದಲ್ಲಿ ಶೇ.10ರಷ್ಟು ಅಧಿಕ ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದಿದ್ದ. ಅಕ್ಟೋಬರ್ ತಿಂಗಳಿನಲ್ಲಿ ‘ವೈವಿಜೆ ಇನ್‌ವೆಸ್ಟ್‌ಮೆಂಟ್ ಎಂಟರ್‌ಪ್ರೈಸಸ್ ಎಂಬ ಹೆಸರಿನ ಟೆಲಿಗ್ರಾಂ ಗ್ರೂಪ್ ಮಾಡಿದ್ದ.

ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ Read More »

ಧರ್ಮಸ್ಥಳ : ನೇತ್ರಾವತಿ ನದಿಯಲ್ಲಿ ಸ್ನಾನದ ವೇಳೆ ಶ್ಯಾಂಪು, ಸೋಪು ಬಳಕೆ ನಿಷೇಧ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ಸಂದರ್ಭ ಶ್ಯಾಂಪು, ಸೋಪು ಬಳಕೆ ಮಾಡದಂತೆ ಧರ್ಮಸ್ಥಳ ಗ್ರಾ. ಪಂ. ಆದೇಶ ಹೊರಡಿಸಿದೆ.ಪ್ರಸಿದ್ಧ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಲ್ಲಿನ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿದರೆ ಪಾಪ ಕಳೆಯುತ್ತದೆ ಎಂಬ ನಂಬಿಕೆಯಿದೆ. ಆದರೆ ಸ್ನಾನದ ಸಂದರ್ಭ ಶ್ಯಾಂಪು ಸೋಪು ಬಳಕೆ ಮಾಡುವುದರಿಂದ ನದಿಯಲ್ಲಿರುವ ಜಲಚರಗಳ ಮೇಲೆ ದುಷ್ಪಾರಿಣಾಮ ಬೀರುತ್ತದೆ ಮತ್ತು ಸ್ನಾನಕ್ಕೆ ಯೋಗ್ಯವಾಗದ ನೀರಾಗಿ ಪರಿವರ್ತನೆಯಾಗುತ್ತದೆ.

ಧರ್ಮಸ್ಥಳ : ನೇತ್ರಾವತಿ ನದಿಯಲ್ಲಿ ಸ್ನಾನದ ವೇಳೆ ಶ್ಯಾಂಪು, ಸೋಪು ಬಳಕೆ ನಿಷೇಧ Read More »

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದೆ. ಈ ಕಟ್ಟಡದಲ್ಲಿ ನಂದಿನಿ ಐಸ್‌ ಕ್ರೀಂ ಉತ್ಪನ್ನಗಳನ್ನು ಇಡಲಾಗಿದೆ. ಇದರ ಜೊತೆ ಐಸ್‌ ಕ್ರೀಂ ತಯಾರಿಕಾ ಘಟಕಕ್ಕೂ ಬೆಂಕಿ ಹಬ್ಬಿದೆ. ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿ ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ

ಸುಳ್ಯ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮಾ.27 ರಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿಯನ್ನು ಜಪ್ತಿ ಮಾಡಿದೆ. ಸುಳ್ಯ ತಾಲೂಕು ಗಾಂಧಿನಗರ ಅಲೆಟ್ಟಿ ರಸ್ತೆ, ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿ ಪಿಎಫ್‌ಐ ಕಚೇರಿ ಇದ್ದು ಇದನ್ನು ವಶಕ್ಕೆ ಪಡೆದಿದೆ.ವಶಪಡಿಸಿಕೊಂಡ ಆಸ್ತಿಯ ಪ್ರತಿಯನ್ನು ಮಾಲೀಕರು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಸ್ತಿಯನ್ನು ಗುತ್ತಿಗೆ ಅಥವಾ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ Read More »

error: Content is protected !!
Scroll to Top