ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ
ಮಂಗಳೂರು: ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್(ತಂಗುದಾಣ) ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ದಿಪಡಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ರೈಲ್ವೆ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಕಬಕ-ಪುತ್ತೂರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಶೆಲ್ಟರ್ ವಿಸ್ತರಿಸುವ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದ ಸಂಸದ ಕ್ಯಾ. ಚೌಟ ಅವರು, ಇದೀಗ ಈ ಸಮಸ್ಯೆಗೆ ಆದ್ಯತೆ ಮೇರೆಗೆ ತುರ್ತಾಗಿ ಸ್ಪಂದಿಸುವಂತೆ ಕೋರಿ ನೈಋತ್ಯ […]










