ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ | ಬಸ್ಸಿಗೆ ಕಲ್ಲೆಸೆದ ಮೂವರು ಆರೋಪಿಗಳ ಬಂಧನ
ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಶಾಹುಲ್ ಹಮೀದ್, ಅನ್ವರ್ ಹಾಗೂ ಕಿಶೋರ್ ಶೆಟ್ಟಿ ಬಂಧಿತರು. ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸೋಮವಾರ ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರು ನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ […]










