ಎಸ್ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರದ ಕುರಿತು ಯಾವುದೇ ಪ್ರಸ್ತಾಪ ಇಲ್ಲ | ಖಡಾಖಂಡಿತವಾಗಿ ಹೇಳಿದ ಗೃಹ ಸಚಿವ ಜಿ.ಪರಮೇಶ್ವರ್
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಮಂಗಳೂರಿನಿಂದ ಪುತ್ತೂರಿಗೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸ್ಥಳಾಂತರಿಸುವ ಪ್ರಸ್ತಾವನೆಯನ್ನು ಕೈಬಿಟ್ಟಿದೆ. ಬಿಜೆಪಿಯ ಅಂದಿನ ಪುತ್ತೂರು ಶಾಸಕ ಸಂಜೀವ ಮಠಂದೂರುರವರು 2020ರಲ್ಲಿ ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಮುಂದಾಗಿದ್ದರು. ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾಗಿ ತಿಳಿಸಿದ್ದರು. ಪುತ್ತೂರು ಪೇಟೆಯ ಮೂರು ಭಾಗಗಳಲ್ಲಿ 19 ಎಕರೆಗೂ ಹೆಚ್ಚ ಭೂಮಿಯನ್ನು ಎಸ್ಪಿ ಮತ್ತು ಡಿಎಆರ್ ಕಚೇರಿಗಳನ್ನು ಸ್ಥಳಾಂತರಿಸಲು ಮತ್ತು ಪೊಲೀಸ್ ಕ್ವಾರ್ಟಸ್ ಸ್ಥಾಪಿಸಲು ಕಾಯ್ದಿರಿಸಲಾಗಿದೆ ಎಂದು ಅವರು […]










