ದಕ್ಷಿಣ ಕನ್ನಡ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ  ಇಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೂಪ ಜೆ. ರೈ ಅತಿಥಿಯಾಗಿದ್ದರು. ಕನ್ನಡ ಭಾಷಣ, ಆಶುಭಾಷಣ, ಸಮೂಹ ಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಉದಯಕುಮಾರ ಪ್ರಸಾವಿಕವಾಗಿ ಮಾತನಾಡಿ, […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ಸವಣೂರು ಕೆನರಾ ಬ್ಯಾಂಕ್‍ ಶಾಖೆಯಲ್ಲಿ ಸೇವಾ ನ್ಯೂನತೆ | ಸರಿಪಡಿಸುವಂತೆ ಆಗ್ರಹಿಸಿ ಗ್ರಾಹಕರಿಂದ ಪ್ರತಿಭಟನೆ

ಸವಣೂರು : ಕೆನರಾ ಬ್ಯಾಂಕ್ ಸವಣೂರು ಶಾಖೆಯಲ್ಲಿ ನಡೆಯುತ್ತಿರುವ ಸೇವಾ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಬ್ಯಾಂಕ್ ಎದುರು ಗ್ರಾಹಕರಿಂದ ಪ್ರತಿಭಟನೆ ಇಂದು ನಡೆಯಿತು. ಸವಣೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸರಿಯಾದ ಸೇವೆ ದೊರಕದೆ ಗ್ರಾಹಕರು ಪರದಾಡುವಂತಾಗಿದೆ. ಹಲವಾರು ಬಾರಿ ಬ್ಯಾಂಕ್‌ನ ಶಾಖಾಧಿಕಾರಿಗಳು, ಉನ್ನತ ಅಧಿಕಾರಿಗಳ ಗಮನಕ್ಕೆ ತಂದರೂ ಸೇವೆಯಲ್ಲಿ ಯಾವುದೇ ಸುಧಾರಣೆ ಆಗಿರುವುದಿಲ್ಲ. ಹಿರಿಯ ಗ್ರಾಹಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸವಣೂರು ಹಾಗೂ ಅಕ್ಕಪಕ್ಕದ ಗ್ರಾಮಗಳ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ ಗುಣಮಟ್ಟದ ಗ್ರಾಹಕ ಸ್ನೇಹಿ

ಸವಣೂರು ಕೆನರಾ ಬ್ಯಾಂಕ್‍ ಶಾಖೆಯಲ್ಲಿ ಸೇವಾ ನ್ಯೂನತೆ | ಸರಿಪಡಿಸುವಂತೆ ಆಗ್ರಹಿಸಿ ಗ್ರಾಹಕರಿಂದ ಪ್ರತಿಭಟನೆ Read More »

ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ಆರೋಪಿ ಪುತ್ತೂರು ಮೂಲದ ಎಚ್‍.ಮೊಹಮ್ಮದ್ ಹಫೀಜ್‍ ಬಂಧನ | ಸೊತ್ತುಗಳ ವಶ

ಮಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಸಂದರ್ಭ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯೋಬ್ಬನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪುತ್ತೂರು ಹಾರಾಡಿ ಮೂಲದ, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಆರೋಪಿ ಮೊಹಮ್ಮದ್ ಹಫೀಜ್‍ ಹೈಡೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ

ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ಆರೋಪಿ ಪುತ್ತೂರು ಮೂಲದ ಎಚ್‍.ಮೊಹಮ್ಮದ್ ಹಫೀಜ್‍ ಬಂಧನ | ಸೊತ್ತುಗಳ ವಶ Read More »

ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ

ಬಂಟ್ವಾಳ: ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಬಂಟ್ವಾಳ ತಾಲೂಕಿನ ವಿಟ್ಲ ಶಾಂತಿನಗರದಲ್ಲಿರುವ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತು. ಶುಭಾರಂಭದ ಪ್ರಯುಕ್ತ ಬೆಳಿಗ್ಗೆ  10.30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆ ನಡೆಯಿತು. ಬಳಿಕ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕಾಯಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ.ವಿಟ್ಲ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ದ.ಕ.ಜಿಲ್ಲಾ ಶಾಮಿಯಾನ

ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ Read More »

ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಬೈಕ್ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ತುಂಬೆ ಬಳಿ ನಡೆದಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲೇ ಮೃತಪಟ್ಟವರು. ಸಂದೀಪ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ

ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ Read More »

ದೀಕ್ಷಿತ್ – ರಕ್ಷಿತಾ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ

ಪುತ್ತೂರು: ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಮಳುವೇಲು ಮನೆ ಯಶೋದಾ ಮತ್ತು ಗಂಗಾಧರ ಗೌಡರ ಪುತ್ರ ದೀಕ್ಷಿತ್ ಅವರ ವಿವಾಹ ನಿಶ್ಚಿತಾರ್ಥ ಕಡಬ ತಾಲೂಕಿನ ಎಣ್ಮೂರು ಗ್ರಾಮದ ಹೇಮಳ ಕೂರಂಬೇಲು ಭುವನೇಶ್ವರಿ ಮತ್ತು ಬಾಲಕೃಷ್ಣ ಗೌಡರ ಪುತ್ರಿ ರಕ್ಷಿತಾ ಅವರೊಂದಿಗೆ ಕೆಮ್ಮಲೆ ಹೇಮಳದಲ್ಲಿರುವ ಭ್ರಮರಾಂಬಿಕ ನಿಲಯದಲ್ಲಿ ಇಂದು ನಡೆಯಿತು. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು. ವಿವಾಹ ಸಮಾರಂಭ ಫೆ.16, 2025 ನೇ ಶನಿವಾರ ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.

ದೀಕ್ಷಿತ್ – ರಕ್ಷಿತಾ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ Read More »

ದಂಪತಿ ಶವ ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಪತ್ತೆ

ಧರ್ಮಸ್ಥಳ: ಕಾಣೆಯಾಗಿದ್ದ ದಂಪತಿಯ ಶವ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಭಾನುವಾರ ಪತ್ತೆಯಾಗಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61), ಈಶ್ವರಮ್ಮ (52) ಎಂದು ಗುರುತಿಸಲಾಗಿದೆ. ಅ.31 ರಂದು ದಂಪತಿಗಳು ನಾಪತ್ತೆಯಾಗಿದ್ದು. ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ ಪೊಲೀಸರ ಸಹಕಾರದಲ್ಲಿ ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದಾಗ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ

ದಂಪತಿ ಶವ ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ !

ಬೆಳ್ತಂಗಡಿ: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಕುಂಠಿನ ಎಂಬಲ್ಲಿ ನಡೆದಿದೆ. ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ, ನಿನ್ನೆ ಕೂಡ ಕುಂಟಿನಿಯಲ್ಲಿ ಮೀನು ವ್ಯಾಪಾರ ಮಾಡಿ ನಂತರ ತನ್ನ ಸಂಬಂಧಿಕರ ಮನೆಗೆ ತೆರಳಿದ್ದಾನೆ. ಅಲ್ಲಿ ಯಾವುದೋ ಕಾರಣಕ್ಕಾಗಿ ತನ್ನ ಮನೆಯವರೊಂದಿಗೆ ಜಗಳವಾಗಿದೆ. ಇದೇ ವೇಳೆ ಮನೆಗೆ ಬಂದ ನಿತಿನ್ ಬಾಗಿಲು ಹಾಕಿ ನೇಣು ಬಿಗಿದುಕೊಂಡಿದ್ದಾನೆ.

ಯುವಕ ನೇಣು ಬಿಗಿದು ಆತ್ಮಹತ್ಯೆ ! Read More »

ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಮೆಸೇಜ್ | ತಂಡದಿಂದ ಹಲ್ಲೆ

ಸುಳ್ಯ: ಅನ್ಯಕೋಮಿನ ಯುವಕನನೋರ್ವ ಹಿಂದೂ ಯುವತಿಗೆ ಮೆಸೇಜ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿದ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ನಯಾಜ್‍ ಎಂಬಾತ ಮೆಸೇಜ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಯುವಕರ ತಂಡ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದ್ದು, ಹಲ್ಲೆಗೊಳಗಾದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ. ಯುವಕನ್ನು ಸ್ಥಳೀಯ ನಿವಾಸಿಯೋರ್ವ ಮಾತನಾಡಲು ಇದೆ ಎಂದು ಗ್ಯಾರೇಜಿಗೆ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವುದಾಗಿ ಯುವಕ ಪೊಲೀಸರಿಗೆ

ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಮೆಸೇಜ್ | ತಂಡದಿಂದ ಹಲ್ಲೆ Read More »

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು

ಕಡಬ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಸ್ಪಂದನ ಸಮುದಾಯ ಸಹಕಾರಿ ಸಂಘದ ಪಿಗ್ಮಿ ಸಂಗ್ರಾಹಕರಾದ ಸೀತಾರಾಮ ಗೌಡ ದೇವಸ್ಯ ಮೃತಪಟ್ಟವರು. ಕಡಬ ಸ್ಪಂದನ ಸಮುದಾಯ ಸಹಕಾರಿ ಸಂಘದ ಸಿಬ್ಬಂದಿ ಶಿಲ್ಪಾ ಅವರ ತಂದೆಯಾಗಿದ್ದಾರೆ.

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು Read More »

error: Content is protected !!
Scroll to Top