ದಕ್ಷಿಣ ಕನ್ನಡ

ಮಂಗಳೂರು ಜೈಲ್‍ ಮೇಲೆ ಪೊಲೀಸರಿಂದ ಕಾರ್ಯಾಚರಣೆ | ಗಾಂಜಾ, ಡ್ರಗ್ಸ್ ಪತ್ತೆ

ಮಂಗಳೂರು: ಮಂಗಳೂರು ಪೊಲೀಸರು ಜೈಲ್ ಮೇಲೆ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದೆ. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್ ಕೂಡಾ ವಶಪಡಿಸಿಕೊಂಡಿದ್ದಾರೆ. 150 […]

ಮಂಗಳೂರು ಜೈಲ್‍ ಮೇಲೆ ಪೊಲೀಸರಿಂದ ಕಾರ್ಯಾಚರಣೆ | ಗಾಂಜಾ, ಡ್ರಗ್ಸ್ ಪತ್ತೆ Read More »

ಡಿವೈಎಸ್‍ ಪಿ ಕಚೇರಿ ಮೇಲೆ ಬಿದ್ದ ಮರ | ಅಪಾರ ನಷ್ಟ

ಬಂಟ್ವಾಳ : ತಾಲೂಕಿನಲ್ಲಿ ನಿನ್ನೆ ತಡರಾತ್ರಿ ಬೀಸಿದ ಗಾಳಿ ಮಳೆಯ ಪರಿಣಾಮವಾಗಿ ಅನೇಕ ಕಡೆಗಳಲ್ಲಿ ಹಾನಿಯಾಗಿದ್ದು, ಪೊಲೀಸ್ ಉಪವಿಭಾಗದ ಕಚೇರಿಯ ಛಾವಣಿ ಮೇಲೆ ತೆಂಗಿನ ಮರ ಬಿದ್ದು ಅಪಾರನಷ್ಟವುಂಟಾದ ಘಟನೆ ನಡೆದಿದೆ. ಡಿ.ವೈ.ಎಸ್.ಪಿ ವಿಜಯಪ್ರಸಾದ್‌ ಅವರು ಕುಳಿತುಕೊಳ್ಳುವ ಕೊಠಡಿ ಮೇಲೆ ಕಚೇರಿಯ ಅಂಗಳದಲ್ಲಿದ್ದ ಹಳೆಯ ತೆಂಗಿನ ಮರ ಬಿದ್ದು ಹಂಚು ಹುಡಿಯಾಗಿದೆ. ಕಚೇರಿಯ ಒಳಗೆ ಮರದಲ್ಲಿದ್ದ ಸೀಯಾಳ ಮತ್ತು ತೆಂಗಿನಕಾಯಿ ಬಿದ್ದಿವೆ. ನಿನ್ನೆ ರಾತ್ರಿ ವೇಳೆ ಘಟನೆ ನಡೆದಿದ್ದು, ಅದೃಷ್ಟವಶಾತ್ ಡಿ.ವೈ.ಎಸ್.ಪಿ.ಯವರು ಕಚೇರಿಯೊಳಗೆ ಇಲ್ಲದೆ ಇದ್ದರಿಂದ ಅಪಾಯ

ಡಿವೈಎಸ್‍ ಪಿ ಕಚೇರಿ ಮೇಲೆ ಬಿದ್ದ ಮರ | ಅಪಾರ ನಷ್ಟ Read More »

ಮಾದಕ ವಸ್ತು ಸೇವನೆ | ಮೂವರು ಪೊಲೀಸ್ ವಶಕ್ಕೆ

ಬಂಟ್ವಾಳ : ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮ ನಂದಾವರಕೋಟೆ ನಿವಾಸಿ ಮಹಮ್ಮದ್ ರಾಫಿದ್ (19), ಬಂಟ್ವಾಳ ಮೂಡಗ್ರಾಮ ನಿವಾಸಿ ಮಹಮ್ಮದ್ ಇರ್ಷಾದ್ (23), ಮಂಚಿ ದಾವುದಲ್‌ ಅಮೀರ್ (26) ಬಂಧಿತರು. ಜು.23 ರಂದು ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂವರು ಯುವಕರು ಮಾದಕವಸ್ತು ಸೇವನೆ ಮಾಡಿ ನಶೆಯಲ್ಲಿ ಅಸಭ್ಯವಾಗಿ

ಮಾದಕ ವಸ್ತು ಸೇವನೆ | ಮೂವರು ಪೊಲೀಸ್ ವಶಕ್ಕೆ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಾಣಿ ಸಮೀಪದ ಬುಡೋಳಿ ಮಡಲದ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಬಳಿಕ ನಡೆದ ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ : ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಬಳಿಕ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿರುವುದಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.ನಂದಕುಮಾರ್, ಕಮಲಾಕ್ಷ, ಅರುಣ್ ರೈ, ಪದ್ಮನಾಭ ತಡಗಜೆ, ಪ್ರಶಾಂತ್, ಆನಂದ ಯು, ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್ ಬಾಳಿಲ, ಡಿಪಿನ್ ಎಡಮಂಗಲ, ಶಿವಾನಂದ, ಹರ್ಷಿತ್, ನಿತೀಶ್ ಕೆ. ಎಂಬವರ ಮೇಲೆ ಕೇಸು ದಾಖಲಾಗಿರುವುದಾಗಿ, ನಾವು ಯಾರು ಈ ಘಟನೆಗಳಲ್ಲಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಬಳಿಕ ನಡೆದ ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ Read More »

ಕೇಂದ್ರ ಬಜೆಟ್ ಮಂಡನೆ | ನರೇಂದ್ರ ಮೋದಿಯವರ ವಿಕಸಿತ ಭಾರತ ಕುರಿತು ಅವರಿಗಿರುವ ಬದ್ಧತೆ ಮತ್ತಷ್ಟು ಹೆಚ್ಚಿಸಿದೆ : ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕುರಿತು ಅವರಿಗಿರುವ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮೂಲಕ ಮೋದಿ 3.0 ನ ಸಂಕಲ್ಪ ಪತ್ರದಲ್ಲಿ ಮಾಡಲಾದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು ಇಟ್ಟಿರುವ ಮೊದಲ ಹೆಜ್ಜೆಯಾಗಿದೆ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದಂತೆ ಕೇಂದ್ರ ಬಜೆಟ್‌ನ ಒಂಬತ್ತು ಆದ್ಯತೆಗಳು ನಾನು ಹಾಕಿಕೊಂಡಿರುವ ಕಾರ್ಯಸೂಚಿ ‘ನವಯುಗ-ನವಪಥ’ಕ್ಕೆ ಪೂರಕವಾಗಲಿದೆ. ನಮ್ಮ9 ಆದ್ಯತೆಗಳ ಗುರಿಯನ್ನು ಸಮರ್ಥವಾಗಿ

ಕೇಂದ್ರ ಬಜೆಟ್ ಮಂಡನೆ | ನರೇಂದ್ರ ಮೋದಿಯವರ ವಿಕಸಿತ ಭಾರತ ಕುರಿತು ಅವರಿಗಿರುವ ಬದ್ಧತೆ ಮತ್ತಷ್ಟು ಹೆಚ್ಚಿಸಿದೆ : ಕ್ಯಾ.ಬ್ರಿಜೇಶ್ ಚೌಟ Read More »

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ : ನಳಿನ್ ಕುಮಾರ್ ಕಟೀಲ್‍

ಮಂಗಳೂರು: ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇಂದು ಮಂಡನೆಯಾಗಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ. ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ., ಮಹಿಳೆಯರ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂ.,

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ : ನಳಿನ್ ಕುಮಾರ್ ಕಟೀಲ್‍ Read More »

ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಎರಡು ಕೋಟಿ ಅಧಿಕ ವಂಚನೆ | ಪಾನ್ ಗುಟ್ಕಾ ಕಂಪನಿ ಮಾಲಕರ ಸೋಗಿನಲ್ಲಿ ವಂಚನೆ

ಮಂಗಳೂರು : ಉತ್ತರ ಭಾರತದ ವ್ಯಾಪಾರಿಗಳಿಂದ ರಿಟೈಲ್ ಅಡಿಕೆ ವ್ಯಾಪಾರಿಗಳಿಗೆ ವಂಚಿಸುವ ಜಾಲವೊಂದು ದಕ್ಷಿಣ ಕನ್ನಡ ದಲ್ಲಿ ಸಕ್ರಿಯವಾಗಿದ್ದು, 2 ಕೋ.ರೂ.ಗೂ ಅಧಿಕ ಹಣ ವಂಚಿಸಿರುವ ಬಗ್ಗೆ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ನಲ್ಲಿ ತಮ್ಮ ಒಡೆತನದ ಪಾನ್ ಗುಟ್ಕಾ ತಯಾರಕ ಕಂಪೆನಿ ಇದೆಯೆಂದು ನಂಬಿಸಿ ಈ ವಂಚಕರು ಜಿಲ್ಲೆಯ ಹಲವಾರು ಚಿಲ್ಲರೆ ಅಡಿಕೆ ವ್ಯಾಪಾರಿಗಳಿಂದ ಲೋಡ್ ಗಟ್ಟಲೇ ಅಡಿಕೆ ಖರೀದಿಸಿದ್ದರು. ಆರಂಭದಲ್ಲಿ ಇವರು ಮಾಡಿದ ಹಲವು ಖರೀದಿಗಳಿಗೆ ಸೂಕ್ತ ಸಮಯದಲ್ಲಿ ಹಣ ಪಾವತಿಸಿದರು. ಇದರಿಂದ ವ್ಯಾಪಾರಿಗಳಿಗೆ

ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಎರಡು ಕೋಟಿ ಅಧಿಕ ವಂಚನೆ | ಪಾನ್ ಗುಟ್ಕಾ ಕಂಪನಿ ಮಾಲಕರ ಸೋಗಿನಲ್ಲಿ ವಂಚನೆ Read More »

ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು

ಸುಳ್ಯ: ದ್ವಿಚಕ್ರ ವಾಹನ ಹಾಗೂ ಸರಕಾರಿ  ಬಸ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಣಂಗೇರಿ ಸಮೀಪದ ಸುತ್ತುಕೋಟೆಯಲ್ಲಿ ಇಂದು ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಪ್ರಭು (68) ಮೃತಪಟ್ಟವರು. ರಾಮಚಂದ್ರ ಪ್ರಭು ಅವರು ತನ್ನ ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್ ನಡುವೆ ಅಪಘಾತವಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮಚಂದ್ರ ಪ್ರಭುರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಮಚಂದ್ರ ಪ್ರಭು

ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು Read More »

ಶೈಕ್ಷಣಿಕೇತರ ಚಟುವಟಿಕೆಗಳಿಗೆ ಶಾಲಾ ಆವರಣ ಬಳಸುವುದಕ್ಕೆ ನಿಷೇಧ | ಸಂಸದ ಕ್ಯಾ.ಬ್ರಿಜೇಶ್‍ ಚೌಟ ಖಂಡನೆ

ಮಂಗಳೂರು: ಶಾಲಾ ಆವರಣ ಮತ್ತು ಮೈದಾನವನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುವುದಕ್ಕೆ ನಿಷೇಧಿಸಿ ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹೊರಡಿಸಿರುವ ಕ್ರಮವನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಖಂಡಿಸಿದ್ದಾರೆ. ದೈವ, ದೇವರುಗಳ ನಾಡಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಸಾಂಸ್ಕೃತಿಕ ಹಾಗೂ ದೈವೀಕ ಆಚರಣೆಯನ್ನು ಸದಾ ಮೈಗೂಡಿಸಿಕೊಂಡಿರುವ ನೆಲೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಹಿಂದೂ ಆಚರಣೆಗಳಿಗೆ ತೊಡಕನ್ನು ಉಂಟು ಮಾಡಿ ನಮ್ಮ ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ ಹಾಗೂ ಕಾಂಗ್ರೆಸ್ ಪಾರ್ಟಿ ಮತ್ತು ಸಿದ್ದರಾಮಯ್ಯ ಸರಕಾರದ

ಶೈಕ್ಷಣಿಕೇತರ ಚಟುವಟಿಕೆಗಳಿಗೆ ಶಾಲಾ ಆವರಣ ಬಳಸುವುದಕ್ಕೆ ನಿಷೇಧ | ಸಂಸದ ಕ್ಯಾ.ಬ್ರಿಜೇಶ್‍ ಚೌಟ ಖಂಡನೆ Read More »

error: Content is protected !!
Scroll to Top