ದಕ್ಷಿಣ ಕನ್ನಡ

ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ

ಬಂಟ್ವಾಳ : ಎಲ್‍ ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿದ್ದ ಗ್ಯಾಸ್ ಸಿಲಿಂಡರ್‍ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಾಟ ಮಾಡುತ್ತಿತ್ತು ಎನ್ನಲಾಗಿದೆ. ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ Read More »

ಬೈಕ್‍ ಗಳೆರಡು ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ

ತಣ್ಣೀರುವಂತ : ಬೈಕ್‍ ಗಳೆರಡು ಡಿಕ್ಕಿ ಹೊಡೆದುಕೊಂಡ ಪರಿಣಾಮ ಒಂದು ಬೈಕ್ ನ ಸವಾರ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಣ್ಣೀರುಪಂತ ಗ್ರಾಮದ ತುರ್ಕಳಿಕೆ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಬಾರ್ಯ ನಿವಾಸಿ ಶಿವಾನಂದ ಅಪಘಾತದಿಂದ ಮೃತಪಟ್ಟವರು ಎನ್ನಲಾಗಿದೆ. ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ

ಬೈಕ್‍ ಗಳೆರಡು ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕಡಬದ ಯುವಕ ನೇಣು ಬಿಗಿದು ಆತ್ಮಹತ್ಯೆ

ಕಡಬ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ ತಿಮರಡ್ಡಿ ನಿವಾಸಿ ಅಝರ್(28) ಆತ್ಮಹತ್ಯೆ ಮಾಡಿಕೊಂಡವರು. ಅಝರ್ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ಕಡಬದ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ವಿದ್ಯುತ್ ಅವಘಡ : ಓರ್ವ ಮೃತ್ಯು,ನಾಲ್ವರಿಗೆ ಗಾಯ

ಬಂಟ್ವಾಳ : ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ. ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದು, ಕಡೇಶ್ವಾಲ್ಯ ಗ್ರಾಮದ ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡೇಶ್ವಾಲ್ಯ

ವಿದ್ಯುತ್ ಅವಘಡ : ಓರ್ವ ಮೃತ್ಯು,ನಾಲ್ವರಿಗೆ ಗಾಯ Read More »

ಕುಮಾರಧಾರ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಕಾಣಿಯೂರು : ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿಂದ ನಾಪತ್ತೆಯಾಗಿದ್ದ ಸುರೇಶ್(40ವ.)ಅವರ ಶವ ಶುಕ್ರವಾರ ಸಂಜೆ ಕುಮಾರಾಧಾರ ನದಿಯಲ್ಲಿ ಪತ್ತೆಯಾಗಿದೆ. ಅವಿವಾಹಿತರಾಗಿದ್ದ ಸುರೇಶ್ ಜು.15ರ ರಾತ್ರಿ ಮನೆಯಿಂದ ಹೊರಟು ಹೋದವರು ನಾಪತ್ತೆಯಾಗಿದ್ದರು. ಇತ್ತೀಚೆಗೆ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಮೃತನ ಸಹೋದರ ಚಿದಾನಂದ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು.ಪ್ರಕರಣ ದಾಖಲಾಗಿತ್ತು.ಸುರೇಶ್ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ಅವರ ಶರ್ಟ್ ಹಾಗೂ ಛತ್ರಿ ಕಾಪೆಜಾಲು ಹೊಳೆ ಬದಿಯಲ್ಲಿ ಪತ್ತೆಯಾಗಿತ್ತು.ಆತ ಹೊಳೆಗೆ ಬಿದ್ದು ನೆರೆ ನೀರಿನಲ್ಲಿ

ಕುಮಾರಧಾರ ನದಿಯಲ್ಲಿ ಯುವಕನ ಮೃತದೇಹ ಪತ್ತೆ Read More »

ಶಿರಾಡಿ ಘಾಟ್ : ಬೆಳಿಗ್ಗೆ 6 ರಿಂದ ಸಂಜೆ 6 ರ ತನಕ ವಾಹನ ಸವಾರರಿಗೆ ಅವಕಾಶ

ಸುಬ್ರಹ್ಮಣ್ಯ : ಶಿರಾಡಿ ಘಾಟಿ ರಸ್ತೆಯಲ್ಲಿ ದಿನಪೂರ್ತಿ ವಾಹನ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ಹಾಸನ ಜಿಲ್ಲಾಡಳಿತ ವಾಪಸ್‌ ಪಡೆದು, ನಿರ್ಬಂಧಿತ ನಿಯಮಗಳಡಿ ವಾಹನ ಸಂಚಾರಕ್ಕೆ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ. ಶಿರಾಡಿ ಘಾಟಿಯಲ್ಲಿ ಶನಿವಾರ (ಜು.20)ದಿಂದ ಬೆಳಗ್ಗೆ 6ರಿಂದ ಸಂಜೆ 6ರ ತನಕ ಶಿರಾಡಿ ಹೆದ್ದಾರಿ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಕಲೇಶಪುರ ಉಪವಿಭಾಗಾಧಿಕಾರಿ ಶೃತಿ ತಿಳಿಸಿದ್ದಾರೆ. ರಾತ್ರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ನಿಷೇಧಿಸಿದೆ. ಗುರುವಾರ ಬೆಳಿಗ್ಗೆ ದೊಡ್ಡತಪ್ಪು ಬಳಿ ಗುಡ್ಡ

ಶಿರಾಡಿ ಘಾಟ್ : ಬೆಳಿಗ್ಗೆ 6 ರಿಂದ ಸಂಜೆ 6 ರ ತನಕ ವಾಹನ ಸವಾರರಿಗೆ ಅವಕಾಶ Read More »

ಯುವತಿ ಸ್ನಾನ ಮಾಡುತ್ತಿದ್ದಾಗ ವೀಡಿಯೋ ಚಿತ್ರೀಕರಣ | ಯುವಕನಿಗೆ ಸ್ಥಳೀಯರಿಂದ ಹೊಡೆತ

ಮಂಗಳೂರು : ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಯುವಕನೊಬ್ಬ ವೀಡಿಯೋ ಮಾಡುತ್ತಿದ್ದಾಗ ಸಿಕ್ಕಿಬಿದ್ದು, ಸ್ಥಳೀಯರಿಂದ ಏಟು ತಿಂದ ಘಟನೆ ನಡೆದಿದೆ. ಬೆಂಗ್ರೆ ನಿವಾಸಿ ಮೊಹಮ್ಮದ್ ರಂಶಿದ್ (21)ಆರೋಪಿ. ರಂಶಿದ್‌ ಮಾದಕ ದ್ರವ್ಯ ವ್ಯಸನಿಯೂ ಆಗಿದ್ದ ಎನ್ನಲಾಗಿದೆ. ರಂಶಿದ್ ನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವತಿ ಸ್ನಾನ ಮಾಡುತ್ತಿದ್ದಾಗ ವೀಡಿಯೋ ಚಿತ್ರೀಕರಣ | ಯುವಕನಿಗೆ ಸ್ಥಳೀಯರಿಂದ ಹೊಡೆತ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.20) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಉಕ್ಕಿ ಹರಿಯುತ್ತಿರುವ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿ | ಭೇಟಿ ನೀಡಿ ಪರಿಶೀಲಿಸಿದ ಸಂಜೀವ ಮಠಂದೂರು

ಉಪ್ಪಿನಂಗಡಿ : ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದ್ದು, ಸ್ಥಳಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ ಇಂದು ಭೇಟಿ ಪರೀಶಿಲನೆ ಮಾಡಿದರು. ಕುಮಾರಧಾರ ಹಾಗೂ ನೇತ್ರಾವತಿ ನದಿಗಳೆರಡೂ ತುಂಬಿ ಹರಿಯುತ್ತಿದ್ದು, ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪೊಲೀಸರು ಸಾರ್ವಜನಿಕರು ನೀರಿನ ಬಳಿ ತೆರಳದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್, ದೇವಸ್ಥಾನದ ಆಡಳಿತ

ಉಕ್ಕಿ ಹರಿಯುತ್ತಿರುವ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿ | ಭೇಟಿ ನೀಡಿ ಪರಿಶೀಲಿಸಿದ ಸಂಜೀವ ಮಠಂದೂರು Read More »

ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಮೃತ್ಯು

ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ  ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದಲ್ಲಿ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬುವರ ಪುತ್ರಿ ಆಶ್ನಿ (21) ಮೃತ ವಿದ್ಯಾರ್ಥಿನಿ. ಮೊದಲಿಗೆ ಮನೆಯ ಸಾಕು ನಾಯಿಗೆ ವಿದ್ಯುತ್‌ ಶಾಕ್ ಹೊಡೆದಿದ್ದು, ನಾಯಿ ಹೊರಳಾಡುವುದನ್ನು ನೋಡಿ ರಕ್ಷಣೆಗೆ ಮುಂದಾದ ಆಶ್ನಿ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಮೃತ್ಯು Read More »

error: Content is protected !!
Scroll to Top