ದಕ್ಷಿಣ ಕನ್ನಡ

ಅನಾರೋಗ್ಯ : ಮಹಿಳೆ ಮೃತ್ಯು

ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪಡುಮಜಲು ಮನೆಯವರಾಗಿದ್ದು, ಮಂಗಳೂರಿನಲ್ಲಿ ನೆಲೆಸಿರುವ ಅವಿನ್ ಎಂಬವರ ಪತ್ನಿ ಶಿಲ್ಪಾ (32) ಅಸೌಖ್ಯದಿಂದಾಗಿ ಮಂಗಳೂರಿನಲ್ಲಿ ನಿಧನರಾದರು. ಶಿಲ್ಪಾ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವಿನ್ ಮಂಗಳೂರಿನಲ್ಲಿ ಪೊಲೀಸ್‌ ಇಲಾಖೆಯಲ್ಲಿ ಕೆಲಸದಲ್ಲಿದ್ದರು ಹಾಗೂ ಶಿಲ್ಪಾ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದರು.

ಅನಾರೋಗ್ಯ : ಮಹಿಳೆ ಮೃತ್ಯು Read More »

ತುಂಬಿ ಹರಿಯುತ್ತಿರುವ ಪಂಜ ಹೊಳೆ | ಸಂಚಾರ ಸ್ಥಗಿತಕ್ಕೆ ಬ್ಯಾರಿಕೇಡ್ ಅಳವಡಿಕೆ

ಪಂಜ : ಭಾರೀ ಮಳೆಯಿಂದ ಜು.19 ರಂದು ಮುಂಜಾನೆಯಿಂದ ಪಂಜ ಹೊಳೆ ತುಂಬಿ ಹರಿಯುತ್ತಿದ್ದು, ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಗೆ ಹೊಳೆಯ ನೆರೆ ನೀರು ಆವರಿಸಿದೆ. ಹೊಳೆ ಸಮೀಪದ ಕೃಷಿ ತೋಟದಲ್ಲಿ ನೆರೆ ನೀರು ನುಗ್ಗಿದೆ. ಬೊಳ್ಳಲೆ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಗೊಂಡಿದೆ. ಪರಿಣಾಮವಾಗಿ ಕಿಂಡಿ ಅಣೆಕಟ್ಟು ಮೇಲಿರುವ ಬಸ್ತಿಕಾಡು ಪ್ರದೇಶದ ಅನೇಕ ಮನೆಗಳಿಗೆ ಸಂಪರ್ಕಿಸುವ ರಸ್ತೆ ಕಡಿತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಈ ರಸ್ತೆ ಸಂಚಾರ ಸ್ಥಗಿತಗೊಳಿಸಿದರುವುದಾಗಿ ಬ್ಯಾರಿಕೇಡ್ ಹಾಕಿ ಬ್ಯಾನ‌ರ್ ಅಳವಡಿಸಲಾಗಿದೆ. ಇದೀಗ ನೀರಿನ ಹರಿವು

ತುಂಬಿ ಹರಿಯುತ್ತಿರುವ ಪಂಜ ಹೊಳೆ | ಸಂಚಾರ ಸ್ಥಗಿತಕ್ಕೆ ಬ್ಯಾರಿಕೇಡ್ ಅಳವಡಿಕೆ Read More »

ಲಾರಿ ಪಲ್ಟಿ ಓರ್ವ ಮೃತ್ಯು ಇಬ್ಬರು ಗಂಭೀರ

ಬಂಟ್ವಾಳ : ಪುಂಜಾಲಕಟ್ಟೆ ಎಂಬಲ್ಲಿ ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ. ವಗ್ಗ ಸಮೀಪದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ

ಲಾರಿ ಪಲ್ಟಿ ಓರ್ವ ಮೃತ್ಯು ಇಬ್ಬರು ಗಂಭೀರ Read More »

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ | ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ

ಮಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಕೆ.ಎ.ಎಸ್‍. ಗ್ರೇಡ್ ಅಧಿಕಾರಿ ಆನಂದ್ ಅವರ  ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ | ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ Read More »

ಭಾರೀ ಮಳೆ : ದ.ಕ.ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಳೆ (ಜು.19) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.19) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆ : ದ.ಕ.ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಳೆ (ಜು.19) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ | ಶಿಶಿಲೇಶ್ವರ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು

ಶಿಶಿಲ: ಗುರುವಾರ ಸುರಿದ ಭಾರೀ ಮಳೆಯಿಂದಾಗಿ ಇತಿಹಾಸ ಪ್ರಸಿದ್ಧ ಮತ್ಸ್ಯತೀರ್ಥ ಎಂದೇ ಹೆಸರುವಾಸಿಯಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳಕ್ಕೆ ನೀರು ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ

ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ | ಶಿಶಿಲೇಶ್ವರ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು Read More »

ಶಾಲಾ ಮೈದಾನಗಳಲ್ಲಿ ಹಿಂದೂ ಹಬ್ಬ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ | ಶಿಕ್ಷಣ ಇಲಾಖೆಯಿಂದ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ ?

ಮಂಗಳೂರು: ಶಾಲಾ ಮೈದಾನಗಳಲ್ಲಿ ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆಗೆ ಈ ಬಾರಿ ಬ್ರೇಕ್ ಬೀಳುವ ಸಾಧ್ಯತೆಯಿದ್ದು, ಈ ಕುರಿತು ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೂಲಕ ಶಿಕ್ಷಣ ಇಲಾಖೆಯ ಸುತ್ತೋಲೆ ಮಂಗಳೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಸುತ್ತೋಲೆಯಲ್ಲಿ ಶಾಲೆಗಳನ್ನ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಹೇಳಲಾಗಿದೆ. ಈ ಮೂಲಕ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಖಡಕ್ ಸಂದೇಶವನ್ನ ಸುತ್ತೋಲೆಯ ಮೂಲಕ ಹೊರಡಿಸಲಾಗಿದೆ.

ಶಾಲಾ ಮೈದಾನಗಳಲ್ಲಿ ಹಿಂದೂ ಹಬ್ಬ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ | ಶಿಕ್ಷಣ ಇಲಾಖೆಯಿಂದ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ ? Read More »

ಪಂಜದಲ್ಲಿ ಜನಸಂಪರ್ಕ ಅಭಿಯಾನ ಹಾಗೂ ಬೃಹತ್  ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ

ಪಂಜ: ಪುತ್ತೂರು ಭಾರತೀಯ ಅಂಚೆ ಇಲಾಖೆ ಮತ್ತು ಪಂಜ ಲಯನ್ಸ್‌ ಕ್ಲಬ್ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ಜು. 18 ರಂದು ಪಂಜ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರುಗಿತು. ಪಂಜ ನಾಡ ಕಚೇರಿ, ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪಂಜ ಲಯನ್ಸ್‌ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾದ ಪುತ್ತೂರು ವಿಭಾಗದ ಅಂಚೆ ಹಿರಿಯ ಅಧೀಕ್ಷಕ

ಪಂಜದಲ್ಲಿ ಜನಸಂಪರ್ಕ ಅಭಿಯಾನ ಹಾಗೂ ಬೃಹತ್  ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ Read More »

ಬಂಟ್ವಾಳ ಕಾಂಕ್ರಿಟ್ ರಸ್ತೆ ಕುಸಿತ | ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ

ಬಂಟ್ವಾಳ : ಕೊಲ್ನಾಡು ಗ್ರಾಮದ ಸುರಿಬೈಲ್- ಖಂಡಿಗ ರಸ್ತೆಯಲ್ಲಿ ಕಿರು ಸೇತುವೆಯ ತಳ ಭಾಗದಲ್ಲಿ ಅಳವಡಿಸಲಾದ ಮೋರಿ ಕೊಚ್ಚಿ ಹೋಗಿ ಸೇತುವೆಯು ಅಪಾಯಕಾರಿ ಸ್ಥಿತಿಗೆ ತಲುಪಿದೆ. ಸೇತುವೆಯ ಮೇಲೆ ಸಂಚಾರ ನಿಷೇಧಿಸಲಾಗಿದೆ. ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆ ಸೇತುವೆಯ ಮೇಲೆ ನಿಂತು, ನದಿ ಪಾತ್ರಗಳಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ನದಿ ಪಾತ್ರಗಳಲ್ಲಿ ನಿಂತು ಫೋಟೋಗ್ರಫಿ, ಸೆಲ್ಸಿ ತೆಗೆಯುವುದನ್ನೂ ನಿಷೇಧಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾ‌ರ್ ತಿಳಿಸಿದ್ದಾರೆ.

ಬಂಟ್ವಾಳ ಕಾಂಕ್ರಿಟ್ ರಸ್ತೆ ಕುಸಿತ | ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ಇಂದು (ಜು.18) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು (ಜು.18) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ಇಂದು (ಜು.18) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top