ದಕ್ಷಿಣ ಕನ್ನಡ

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಅಧಿಕಾರವಧಿ ಮುಕ್ತಾಯ | ನೂತನ ಅಧ್ಯಕ್ಷರ ಆಯ್ಕೆಗೆ ನಡೆಯಿತು ಪ್ರಮುಖರ ಸಭೆ

ಮಂಗಳೂರು : ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಿಟ್ಟಿನಲ್ಲಿ ಬಿಜೆಪಿ ಪ್ರಮುಖರ ಸಭೆ ಮಂಗಳೂರಿನಲ್ಲಿ ಇಂದು ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷರ ಸೂಚನೆಯಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪಕ್ಷದ ಕಚೇರಿಯಲ್ಲಿ ಪಕ್ಷ ಪ್ರಮುಖರ ಸಭೆ ಕರೆದಿದ್ದು, ಸಭೆಯಲ್ಲಿ ನಗರ ಮಂಡಲ ಅಧ್ಯಕ್ಷ, ಕಾರ್ಯದರ್ಶಿ ಸ್ಥಾನಕ್ಕೆ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾರ್ಯದರ್ಶಿ ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರು ಸೂಚಿಸಲು ಪದಾಧಿಕಾರಿಗಳ ಬಳಿ ತಿಳಿಸಲಾಯಿತು ಈ ಸಂದರ್ಭ ಹಲವರು […]

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಅಧಿಕಾರವಧಿ ಮುಕ್ತಾಯ | ನೂತನ ಅಧ್ಯಕ್ಷರ ಆಯ್ಕೆಗೆ ನಡೆಯಿತು ಪ್ರಮುಖರ ಸಭೆ Read More »

ಜು.18-19 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೊಷಣೆ

ಮಂಗಳೂರು: ಜು.18 ಹಾಗೂ 19 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಿದೆ. ಬುಧವಾರವೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ. ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜು.18-19 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೊಷಣೆ Read More »

ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ನಳಿನ್ ಕುಮಾರ್ ಕಟೀಲ್ ನಿವಾಸಕ್ಕೆ ಭೇಟಿ

ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ ಆಗಮಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು ಆಗಬೇಕಿರುವ ಹೊಸ ಯೋಜನೆಗಳಿಗೆ ತುಂಬು ಹೃದಯದ ಸಹಕಾರ ದೊರಕುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ

ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ನಳಿನ್ ಕುಮಾರ್ ಕಟೀಲ್ ನಿವಾಸಕ್ಕೆ ಭೇಟಿ Read More »

ಯುವಕ ನಾಪತ್ತೆ: ನೀರು ಪಾಲಾಗಿರುವ ಶಂಕೆ

ಕಾಣಿಯೂರು : ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿನ ಅವಿವಾಹಿತ ಯುವಕನೋರ್ವ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಆತ ಹೊಳೆಗೆ ಬಿದ್ದಿರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ನಾಪತ್ತೆಯಾದ ಯುವಕನನ್ನು ಕಾಯಿಮಣ ಗ್ರಾಮದ ನಾಯಿತ್ತಡ್ಕ ನಿವಾಸಿ ಹುಕ್ರ ಎಂಬವರ ಪುತ್ರ ಸುರೇಶ (40) ರಂದು ಗುರುತಿಸಲಾಗಿದೆ. ಸುರೇಶ್ ಕೂಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿ ಯಾರೊಂದಿಗೂ ಹೆಚ್ಚಾಗಿ ಮಾತನಾಡದೇ ಇರುತ್ತಿದ್ದರು. ಸೋಮವಾರ ರಾತ್ರಿ ಸುಮಾರು 8.30 ಗಂಟೆಗೆ ಯಾರಿಗೂ ಹೇಳದೇ ಮನೆಯಿಂದ ಹೋದವರು

ಯುವಕ ನಾಪತ್ತೆ: ನೀರು ಪಾಲಾಗಿರುವ ಶಂಕೆ Read More »

ಪೆಟ್ರೋಲ್ ಹಾಕಿ ಹಣ ಕೊಡದೆ ಪರಾರಿಯಾದ ಪೊಲೀಸ್ | ಕರ್ತವ್ಯದಿಂದ ಅಮಾನತು

ಕಣ್ಣೂರು: ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡ ನಂತರ ಹಣ ಕೊಡದೇ ತೆರಳುತ್ತಿದ್ದ ಪೊಲೀಸ್ ಡ್ರೈವರ್ ಬಳಿ ಪೆಟ್ರೋಲ್ ಪಂಪ್ ನೌಕರ ಹಣ ಪಾವತಿಸಲು ಹೇಳಿದಾಗ, ಏಕಾಏಕಿ ಚಲಾಯಿಸಿಕೊಂಡು ಹೋಗಿದ್ದು, ಈ ಸಂದರ್ಭದಲ್ಲಿ ನೌಕರ ಕಾರಿನ ಬಾನೆಟ್ ಹಿಡಿದುಕೊಂಡಿದ್ದು, ಆತನ ಕೊಲೆಗೆ ಯತ್ನಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಪೊಲೀಸ್ ನನ್ನು ಬಂಧಿಸಿದ್ದು, ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊಲೆ ಯತ್ನ ಪ್ರಕರಣದಡಿ ಬಂಧಿಸಿ, ವಿವಿಧ ಸೆಕ್ಷನ್ ಗಳನ್ನು ದಾಖಲಿಸಲಾಗಿದೆ ಎಂದು

ಪೆಟ್ರೋಲ್ ಹಾಕಿ ಹಣ ಕೊಡದೆ ಪರಾರಿಯಾದ ಪೊಲೀಸ್ | ಕರ್ತವ್ಯದಿಂದ ಅಮಾನತು Read More »

ಮಂಗಳಮುಖಿಯರ ಹೊಡೆದಾಟ

ನಿಂತಿಕಲ್ಲ್ : ನಿಂತಿಕಲ್ಲ್ ಸಂತೆ ಮಾರುಕಟ್ಟೆ ಬಳಿ ಮಂಗಳಮುಖಿಯರ ಹೊಡೆದಾಟದ ಘಟನೆ ನಡೆದಿದೆ.  ಇಬ್ಬರು  ಕಲ್ಲು ಎಸೆದು ಕೊಂಡ ಘಟನೆ ಜು. 16 ರಂದು ಮಧ್ಯಾಹ್ನ ನಡೆದಿದೆ. ಒಬ್ಬರ ಕಿವಿ ಭಾಗಕ್ಕೆ ಗಾಯವಾಗಿದ್ದು ಬಳಿಕ ಸ್ಥಳೀಯರು ಬೆಳ್ಳಾರೆ ಆಸ್ಪತ್ರೆಗೆ ಕರೆದೊಯ್ದರು.

ಮಂಗಳಮುಖಿಯರ ಹೊಡೆದಾಟ Read More »

ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು : ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಭಾರತ್ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್  ಮಂಗಳೂರು ಇವರ ಸಹಯೋಗದಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್ “ ಇಂಟೀರಿಯರ್ ಡಿಸೈನ್ ಅಸೋಸಿಯೇಷನಿಂದ ಒಂದು ತಿಂಗಳ “Auto Desk -3DS Max & 3D Rendering” ಕೋರ್ಸ್ ನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ (BASE) ಅಕಾಡೆಮಿಯ ಸಿಇಓ ನವೀನ ಗುರುರಾಜ್, ಅಡ್ಮಿನ್ ಸುಧಾ ಜಯರಾಮ್, ಟ್ರೈನರ್ ದೀಪ್ತಿ , ಕೋರ್ಸ್ ನ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾರ್ಯಕ್ರಮದಲ್ಲಿ

ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ Read More »

ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನೀರು | ವಾಹನ ಸವಾರರಿಂದ ಪರದಾಟ

 ಕಡಬ : ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ರಸ್ತೆಯ ಓಡ್ಲ ಎಂಬಲ್ಲಿ ಮಳೆನೀರು ರಸ್ತೆಯಲ್ಲೇ ಹರಿಯುತ್ತಿದ್ದು ವಾಹನ ಚಾಲಕರು ಸೇರಿದಂತೆ ಸಾರ್ವಜನಿಕರು ಪರದಾಡುವಂತಾಗಿದೆ. ರಾಜ್ಯ ಹೆದ್ದಾರಿ ರಸ್ತೆಯನ್ನು ಸ್ಥಳೀಯ ವ್ಯಕ್ತಿಯೋರ್ವರು ಅಕ್ರಮವಾಗಿ ಅಗೆದು, ಮಣ್ಣನ್ನು ಚರಂಡಿ ಮೇಲೆ ಹಾಕಿದ ಕಾರಣ ಮಳೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯಲಾಗದೆ ರಸ್ತೆಯಲ್ಲೇ ಹರಿಯುತ್ತಿದೆ. ನಿರಂತರವಾಗಿ ಸುರಿಯುವ ಮಳೆಯಿಂದಾಗಿ ನೀರು ಚರಂಡಿಯಲ್ಲಿ ಹರಿಯದೆ ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ತೋಡಿನಂತಾಗಿದ್ದು, ಮುಂದೆ ಅಪಾಯಕಾರಿ ತಿರುವು ಇದ್ದು, ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಈ ಕುರಿತು

ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನೀರು | ವಾಹನ ಸವಾರರಿಂದ ಪರದಾಟ Read More »

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹ ಪತ್ತೆ !

ಸುಬ್ರಹ್ಮಣ್ಯ: ಆನೆಯ ಮೃತದೇಹವೊಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಪ್ರವಾಹ ನೀರಿನಲ್ಲಿ ಆನೆ ಮೃತದೇಹ ಕೊಚ್ಚಿ ಕೊಂಡು ಬಂದಿದೆ, ಇದೀಗ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹ ಪತ್ತೆ ! Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.16) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ ಜು.16) ಇಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.16) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top