ದಕ್ಷಿಣ ಕನ್ನಡ

ಗಾಂಜಾ ಸಾಗಾಟ ಪ್ರಕರಣ | ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ

ಸುಳ್ಯ: ಗಾಂಜಾ ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್ 28 ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ ಪಿ.ಎಂ. ಮೊಯಿದ್ದೀನ್ ಮತ್ತು ಮುರಳಿ ಸಿ. ಅವರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು ಇಬ್ಬರನ್ನೂ ದೋಷಿಯೆಂದು ಘೋಷಿಸಿ ಜು.11 ರಂದು ಇಬ್ಬರೂ ಅಪರಾಧಿಗಳಿಗೆ […]

ಗಾಂಜಾ ಸಾಗಾಟ ಪ್ರಕರಣ | ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ Read More »

ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ತಡೆ | ಹಲವಾರು ಕಾರ್ಯಕರ್ತರು ಪೊಲೀಸ್ ‌ ವಶಕ್ಕೆ

ಮಂಗಳೂರು: ರಾಹುಲ್ ಗಾಂಧಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು  ಕಾವೂರು ಜಂಕ್ಷನ್ ನಲ್ಲಿ‌ ಪ್ರತಿಭಟನೆ ನಡೆಸಿದ್ದರ ಪರಿಣಾಮ ಹಲವಾರು ಮಂದಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಇಂದು ನಡೆದಿದೆ. ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಾಗ ರಸ್ತೆ ತಡೆಯಲ್ಲಿ ನಿರತರಾದರು. ತಕ್ಷಣ ನೂರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಮಾತನಾಡಿ, ಬಿಜೆಪಿಯ

ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ತಡೆ | ಹಲವಾರು ಕಾರ್ಯಕರ್ತರು ಪೊಲೀಸ್ ‌ ವಶಕ್ಕೆ Read More »

ಮಂಗಳೂರಿನಲ್ಲಿ ಉದ್ಯಮಿ ಒಕ್ಕಲಿಗ ಕಚೇರಿ ಶುಭಾರಂಭ

ಮಂಗಳೂರು: ಉದ್ಯಮಿ ಒಕ್ಕಲಿಗ ಕಚೇರಿ ಇಂದು ಮಂಗಳೂರಿನಲ್ಲಿ ಶುಭಾರಂಭಗೊಂಡಿತು. ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಸಿ ಒಕ್ಕಲಿಗರನ್ನು ಉದ್ಯಮ ಕ್ಷೇತ್ರದಲ್ಲಿ ಬೆಳೆಸಲು ಈ ಸಂಸ್ಥೆ ಶ್ರಮವಹಿಸುತ್ತಿದೆ. ಒಕ್ಕಲಿಗರು ನಡೆಸಿದ ಉದ್ಯಮವನ್ನು ಬೇರೆ ಬೇರೆ ಸ್ಥಳಗಳಿಗೆ ವಿಸ್ತರಿಸಲು ಸಂಸ್ಥೆ ಸಹಕರಿಸುತ್ತಿದೆ. ಶುಭಾರಂಭ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಗೌಡ, ಉಪಾಧ್ಯಕ್ಷ ಆನಂದ ಪಿ. ಹೆಚ್ ನರಿಯ, ಕಾರ್ಯದರ್ಶಿ ಸುಂದರ ಗೌಡ

ಮಂಗಳೂರಿನಲ್ಲಿ ಉದ್ಯಮಿ ಒಕ್ಕಲಿಗ ಕಚೇರಿ ಶುಭಾರಂಭ Read More »

ಟೀಂ ಇಂಡಿಯಾ ತಂಡದ ರಾಘವೇಂದ್ರ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡ ಇತ್ತೀಚೆಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಬೆನ್ನಲ್ಲೆ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಜು.09ರಂದು ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದೀಗ ಅದೇ ತಂಡದ ಮತ್ತೊಬ್ಬ ಆಟಗಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಟೀಂ ಇಂಡಿಯಾ ಯಶಸ್ವಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ತಂಡದ ಥ್ರೋಡೌನ್ ಪರಿಣತ ರಾಘವೇಂದ್ರ ಅವರು ಜು.10ರಂದು ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ

ಟೀಂ ಇಂಡಿಯಾ ತಂಡದ ರಾಘವೇಂದ್ರ ಸುಬ್ರಹ್ಮಣ್ಯಕ್ಕೆ ಭೇಟಿ Read More »

ಅನಾರೋಗ್ಯಕ್ಕೀಡಾಗಿ ರಾದೀಪ್ ಪೂಜಾರಿ ಮೃತ್ಯು

ವಿಟ್ಲ: ಅನಾರೋಗ್ಯಕ್ಕೀಡಾಗಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ, ರಾದೀಪ್‌ ಪೂಜಾರಿ (38) ಇಂದು ನಿಧನರಾದರು. ಕೃಷಿ ಮತ್ತು ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್‌ ಪೂಜಾರಿ ಅವರು ಕ್ರೀಡೆಯಲ್ಲಿಯೂ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಅನಾರೋಗ್ಯಕ್ಕೀಡಾಗಿ ರಾದೀಪ್ ಪೂಜಾರಿ ಮೃತ್ಯು Read More »

ಲೈಸನ್ಸ್ ಪಡೆಯದ ಖಾಸಗಿ ಹಾಸ್ಟೇಲ್ ಗಳಿಗೆ ದಂಡದ ಎಚ್ಚರಿಕೆ

ಮಂಗಳೂರು: ದ.ಕ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾ ಸಂಸ್ಥೆಗಳು ಮತ್ತು ಉದ್ದಿಮೆಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಹೊಸ ಖಾಸಗಿ ವಸತಿ ನಿಲಯಗಳು ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವುದು ಹಾಗೂ ಕೆಲವು ಖಾಸಗಿ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳ ಲಭ್ಯತೆ ಹಾಗೂ ಶುಚಿತ್ವ ಇಲ್ಲದಿರುವುದು ಕಂಡು ಬಂದಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳು 15 ದಿನಗಳೊಳಗಾಗಿ ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಿಗೆ ಪಡೆದುಕೊಳ್ಳಬೇಕು.

ಲೈಸನ್ಸ್ ಪಡೆಯದ ಖಾಸಗಿ ಹಾಸ್ಟೇಲ್ ಗಳಿಗೆ ದಂಡದ ಎಚ್ಚರಿಕೆ Read More »

ಮದ್ಯ ಸೇವಿಸಿ ವಾಹನ ಚಲಾಯಿಸದೇ ಹೆದ್ದಾರಿಯಲ್ಲಿ ರಾತ್ರಿ ಕಳೆದ ಚಾಲಕ

ಸುಳ್ಯ: ಮದ್ಯಪಾನ ಸೇವಿಸಿ ವಾಹನ ಚಲಾಯಿಸಲು ಸಾಧ್ಯವಾಗದೆ ಚಾಲಕನೊಬ್ಬ ಮಾಣಿ ಮೈಸೂರ್ ರಾಜ್ಯ ಹೆದ್ದಾರಿಯ ಸುಳ್ಯ ಹಳೆಗೇಟು ನಲ್ಲಿ ನಡೆದಿದೆ. ಆಪೆ ರಿಕ್ಷಾ ಚಾಲಕ ಗುಜಿರಿ ವ್ಯಾಪಾರ ಮಾಡುತ್ತಿದ್ದು ಆರಂಬೂರು ಸಮೀಪದ ಪಾಲಡ್ಕದ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಗಾಂಜಾ ಸೇವಿಸಿದ್ದಾನೆಂದು ಜನ ಶಂಕೆ ವ್ಯಕ್ತಪಡಿಸಿದ್ದಾರೆ.

ಮದ್ಯ ಸೇವಿಸಿ ವಾಹನ ಚಲಾಯಿಸದೇ ಹೆದ್ದಾರಿಯಲ್ಲಿ ರಾತ್ರಿ ಕಳೆದ ಚಾಲಕ Read More »

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ

ಕೊಣಾಜೆ: ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರಿಂದ ಕೈಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಕೋಣಾಜೆಯಲ್ಲಿರುವ ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ 7ನೇ ಬೆಟಾಲಿಯನ್‌ನ ನಿರೀಕ್ಷಕ ಮಹಮ್ಮದ್ ಹಾರಿಸ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ಆವರು ಮೀಸಲು ಪೊಲೀಸ್ ಕಾನ್ ಸ್ಟೇಬಲ್ ಅನಿಲ್ ಕುಮಾರ್ ಅವರಿಂದ ಕರ್ತವ್ಯ ನಿಯೋಜನೆಗೆ ಸಂಬಂಧಿಸಿ 18 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ Read More »

ಇಂದು ಸುಳ್ಯಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ | ಕೆಡಿಪಿ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕುರಿತು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರು.

ಸುಳ್ಯ: ಸುಳ್ಯದ ಆರೋಗ್ಯ ಕೇಂದ್ರಗಳಲ್ಲಿರುವ ವೈದ್ಯರ ಸಮಸ್ಯೆ, ಜಲ್ ಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿ, ಸುಳ್ಯದ ಅಂಬೇಡ್ಕರ್ ಭವನದ ಕಾಮಗಾರಿಯ ವಿಳಂಬ ಹೀಗೆ ಹಲವು ಬಾಕಿ ಉಳಿದಿರುವ ಕಾಮಗಾರಿ ಹಾಗೂ ಕ್ರಮಗಳನ್ನು ಆದಷ್ಟು ಬೇಗ ನಡೆಸಿಕೊಡಬೇಕೆಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಅಧಿಕಾರಿಗಳಿಗೆ ತಿಳಿಸಿ ಡೆಡ್ ಲೈನ್ ನೀಡಿದರು. ಸಂಸದರು ಇಂದು ಸುಳ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭ ಸುಳ್ಯದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಕೆಲವು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ

ಇಂದು ಸುಳ್ಯಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ | ಕೆಡಿಪಿ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕುರಿತು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರು. Read More »

ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಕರಾವಳಿ ಪ್ರಾಧಿಕಾರದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಸಾಂಘಿಕ ಮತ್ತು ಸಂಯೋಜನಾ ಸಚಿವ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ  ಡಿ ಸುಧಾಕರ್ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ಆಗಬೇಕಾಗಿದ್ದು, ಕ್ಷೇತ್ರದ ಜನರಿಂದ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಲವಾರು ವರ್ಷಗಳಿಂದ ಜನರು ಮನವಿ

ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ Read More »

error: Content is protected !!
Scroll to Top