ದಕ್ಷಿಣ ಕನ್ನಡ

ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ | ಪ್ರಕರಣ ದಾಖಲು

ಮಂಗಳೂರು: ಖಾಸಗಿ ಫೈನಾನ್ಸ್ ಒಂದಕ್ಕೆ ದರೋಡೆಕೋರರು ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ಬಜಪೆಯಲ್ಲಿ ನಡೆದಿದೆ. ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸೊಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಸಂಜೆ ಸುಮಾರು 4:30ರ ವೇಳೆಗೆ ಆಕ್ಟೀವದಲ್ಲಿ ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ನ ಒಳಗೆ ಏಕಾಏಕಿ ನುಗ್ಗಿ ಚಿಕ್ಕ ಆಸಿಡ್ ತುಂಬಿದ ಡಬ್ಬವೊಂದರ ಮುಚ್ಚಳ […]

ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ | ಪ್ರಕರಣ ದಾಖಲು Read More »

ಸುಳ್ಯ ಕೃಷಿಕ ಸೀತಾರಾಮ ಗೌಡ ಆತ್ಮಹತ್ಯೆ

ಸುಳ್ಯ: ಸುಳ್ಯದ ಮಡಪ್ಪಾಡಿ ಕೃಷಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆ ಸೀತಾರಾಮ ಗೌಡ (55) ಆತ್ಮಹತ್ಯೆ ಮಾಡಿಕೊಂಡವರು. ಅಡಿಕೆ ತೋಟಕ್ಕೆ ಹಳದಿ ಎಲೆ ರೋಗ ಬಾಧೆಯಿಂದ ಅಡಿಕೆ ಕೃಷಿ ಇಲ್ಲದಂತಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಬುಧವಾರ ಬೆಳಗ್ಗೆ ಮನೆಯಲ್ಲಿ ವಿಷ ಸೇವಿಸಿದ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಮೃತಪಟ್ಟರೆಂದು ತಿಳಿದುಬಂದಿದೆ.

ಸುಳ್ಯ ಕೃಷಿಕ ಸೀತಾರಾಮ ಗೌಡ ಆತ್ಮಹತ್ಯೆ Read More »

ಮಂಗಳೂರು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ .ಎನ್  IPS ಅಧಿಕಾರ ಸ್ವೀಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ .ಎನ್  IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು. 2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ .ಎನ್  IPS ಅಧಿಕಾರ ಸ್ವೀಕಾರ Read More »

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲು, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್‌ಎಫ್‌ಒಗೆ ಕುದುರೆಮುಖ

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ Read More »

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಅನಿತಾ ಮೃತ್ಯು

ಬೆಳ್ತಂಗಡಿ : ಖಾಸಗಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೊಳ್ಮನಾರಿನ ವೆಂಕಟೇಶ್ ಎಂಬವರ ಪುತ್ರಿ ಅನಿತಾ ಮೃತಪಟ್ಟವರು. ಬೆಳ್ತಂಗಡಿಯ ಖಾಸಗಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಅನಿತಾ ಜೂನ್ 29ರಂದು ತಡರಾತ್ರಿ ವಿಷ ಪದಾರ್ಥ ಸೇವಿಸಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬುಧವಾರ ಮಧ್ಯರಾತ್ರಿ ಮೃತಪಟ್ಟಿದ್ದಾಳೆ. ಅನಿತಾ ಬರೆದ ಎರಡು ಪುಟಗಳ ಡೆತ್‌ ನೋಟ್

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಅನಿತಾ ಮೃತ್ಯು Read More »

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಬೆಂಗಳೂರು: ಕೇಂದ್ರ ಬಂದರು, ಶಿಪ್ಪಿಂಗ್‌ ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್‌ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಮಾತುಕತೆ ನಡೆಸಿದರು. ಎನ್‌.ಎಮ್‌‌.ಪಿ‌.ಎ ಯ ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು ಮತ್ತು ಸಾಗರ್‌ ಮಾಲಾ ಯೋಜನೆಯಡಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ ಮತ್ತು ಕ್ರೂಸ್ ಟರ್ಮಿನಲ್ ನಿರ್ಮಾಣದ ಕುರಿತು ಬಂದರು ಸಚಿವರ ಜೊತೆ ಚರ್ಚಿಸಿದರು. ದಕ್ಷಿಣ

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ | ಮಣ್ಣಿನಡಿ ಸಿಲುಕಿದ ಕಾರ್ಮಿಕರು

ಮಂಗಳೂರು :ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ಮಂಗಳೂರಿನ ಬಲ್ಮಠ ರೋಡ್ ಸಮೀಪ ಖಾಸಗಿ ಸಂಸ್ಥೆಗೆ ಸೇರಿದ ಕಟ್ಟಡ ನಿರ್ಮಾಣ ವೇಳೆ ಘಟನೆ ನಡೆದಿದೆ. ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ | ಮಣ್ಣಿನಡಿ ಸಿಲುಕಿದ ಕಾರ್ಮಿಕರು Read More »

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಯಾಗಳ ಆಯ್ಕೆ

ಬಂಟ್ವಾಳ: ಲೋಕಸಭಾ ಚುನಾವಣೆ ಮುಗಿದು ಕೆಲವೊಂದು ಮಂಡಲಗಳ ಪದಾಧಿಕಾರಿಯಾಗಳ ಆಯ್ಕೆ ಪ್ರಕ್ರಿಯೆ ಬಾಕಿ ಇದ್ದು ಪ್ರಸ್ತುತ ನಿಯುಕ್ತಿಯಾಗುವಂತೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಕ್ಷೇತ್ರ ಸಮಿತಿ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ. ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಗೋವಿಂದ ಪ್ರಭು, ರವೀಶ್‍ ಶೆಟ್ಟಿ, ಪುಷ್ಪರಾಜ್ ಚೌಟ, ರೇಷ್ಮಾ ಶಂಕರಿ ಭಟ್‍, ಶ್ರೀಕಾಂತ್ ಶೆಟ್ಟಿ, ಅರುಣ್ ರೋಶನ್ ಡಿ’’ಸೋಜಾ, ಪ್ರಧಾನ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಕೋಶಾಧಿಕಾರಿಯಾಗಿ ದಿನೇಶ್‍ ಭಂಡಾರಿ, ಕಾರ್ಯದರ್ಶಿಗಳಾಗಿ ಪ್ರಭಾಕರ

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಯಾಗಳ ಆಯ್ಕೆ Read More »

ಬಸ್ ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು

ಮಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ ಬ್ಯಾಗ್ ಕಳವಾಗಿರುವುದಾಗಿ ವರದಿಯಾಗಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್ ನ ಲಾಕರ್ ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್ ಬ್ಯಾಗ್ ನಲ್ಲಿ ಹಾಕಿ ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ನಲ್ಲಿ ಇತರ ಲಗೇಜ್ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ. ಹಾಸನ ತಲುಪಿದಾಗ ಅವರ

ಬಸ್ ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು Read More »

ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ : ಧರ್ಮಸ್ಥಳದ ಜೋಡುಸ್ಥಾನದಲ್ಲಿ ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ಪತಿ, ತಂದೆ, ತಾಯಿ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

error: Content is protected !!
Scroll to Top