ದಕ್ಷಿಣ ಕನ್ನಡ

ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು

ಮಂಗಳೂರು : ಮಳೆಗೆ ವಿದ್ಯುತ್ ತಂತಿ ಕಡಿದು ಬಿದ್ದ ಹಿನ್ನಲೆ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಮಂಗಳೂರಿನ ರೊಸಾರಿಯೂ ಶಾಲಾ ಹಿಂಭಾಗದಲ್ಲಿ ನಡೆದಿದೆ. ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ, ಹಾಸನ ಮೂಲದ ರಾಜು ಪಾಲ್ಯ ವಿದ್ಯುತ್ ಶಾಕ್‍ ನಿಂದ ಮೃತಪಟ್ಟವರು. ಮಳೆಗೆ ತುಕ್ಕು ಹಿಡಿದ ವಿದ್ಯುತ್ ತಂತಿ ಹಠಾತ್ತನೆ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಇನ್ನೊಬ್ಬ ಆಟೋ ಚಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ […]

ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು Read More »

ಸುಬ್ರಹ್ಮಣ್ಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ | ತುಂಬಿ ಹರಿಯುತ್ತಿರುವ ಪವಿತ್ರ ಕುಮಾರಧಾರ ನದಿ

ಸುಬ್ರಹ್ಮಣ್ಯ: ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಪವಿತ್ರ ಕುಮಾರಧಾರ ನದಿ ತುಂಬಿ ಹರಿಯುವ ಮೂಲಕ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ಕಿಂಡಿ ಆಣೆಕಟ್ಟು ಸಂಪೂರ್ಣ ಮುಳುಗಡೆ ಯಾಗಿದ್ದು, ಭಕ್ತಾದಿಗಳಿಗೆ ನದಿಗಿಳಿಯದಂತೆ ಸೂಚನೆ ನೀಡಲಾಗಿದೆ. ಇದೀಗ ನದಿ ದಡ ದಲ್ಲೇ ಭಕ್ತಾದಿಗಳು ತೀರ್ಥಸ್ನಾನ ಮಾಡುತಿದ್ದಾರೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ಮಳೆನೀರಿನಿಂದ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು, ಹೋಮ್ ಗಾರ್ಡ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಸುಬ್ರಹ್ಮಣ್ಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ | ತುಂಬಿ ಹರಿಯುತ್ತಿರುವ ಪವಿತ್ರ ಕುಮಾರಧಾರ ನದಿ Read More »

ಭಾರೀ ಮಳೆ : ನಾಳೆ ಶಾಲೆಗೆ ರಜೆ

ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆಯ ಹಿನ್ನಲೆಯಲ್ಲಿ ತಗ್ಗು ಪ್ರದೇಶ, ನದಿ, ಸಮುದ್ರ ತೀರಕ್ಕೆ ಸಾರ್ವಜನಿಕರು ತೆರಳದಂತೆ, ಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಭಾರೀ ಮಳೆ : ನಾಳೆ ಶಾಲೆಗೆ ರಜೆ Read More »

ಬರೆ ಕುಸಿದು ಮನೆಗೆ ಹಾನಿ

ನಿಂತಿಕಲ್ಲು : ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಎಂಬಲ್ಲಿ ಜೂ 25 ರಂದು ರಾತ್ರಿ ಸುರಿದ ಮಳೆಗೆ ಬರೆ ಕುಸಿದು ಮನೆಗೆ ಹಾನಿಯಾಗಿರುವ ಘಟನೆ ವರದಿಯಾಗಿದೆ. ಐವತ್ತೊಕ್ಲು ಗ್ರಾಮದ ಅಬ್ದುಲ್ ಅಝೀಝ್ ಎಂಬವರ ಮನೆ ಬಳಿ ಇರುವ ಬರೆ ಕುಸಿದು ಮನೆಗೆ ಹಾನಿಯಾಗಿದೆ. ಕಂದಾಯ ಇಲಾಖೆಯವರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ,ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬರೆ ಕುಸಿದು ಮನೆಗೆ ಹಾನಿ Read More »

ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ | ಒಂದೇ ಕುಟುಂಬದ ನಾಲ್ವರು ಮೃತ್ಯು

ಉಳ್ಳಾಲ: ಭಾರೀ ಮಳೆಗೆ ಬೆಳ್ಳಂಬೆಳಗ್ಗೆ ಮನೆಯ ಹಿಂಬದಿಯ ಕಂಪೌಂಡ್ ಕುಸಿದುಬಿದ್ದು ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ನಡೆದಿದೆ. ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40), ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟವರು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ

ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ | ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ಕಾಮಗಾರಿ ವೀಕ್ಷಿಸಿದ ಡಿ.ಕೆ.ಶಿ.

ಕಡಬ: ತಾಲೂಕಿನ ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಸಂಜೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಸಮುದಾಯ ಭವನದ ಕುರಿತು ಮಾಹಿತಿ ನೀಡಿ ಮುಂದಿನ ಅಭಿವೃದ್ಧಿಗಾಗಿ ಸಹಕಾರ ಕೋರಿ ಮನವಿ ನೀಡಿದರು. ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಸರಕಾರದ ವತಿಯಿಂದ ಹಾಗೂ ವೈಯಕ್ತಿಕವಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಒಕ್ಕಲಿಗ ಗೌಡ ಸೇವಾ

ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ಕಾಮಗಾರಿ ವೀಕ್ಷಿಸಿದ ಡಿ.ಕೆ.ಶಿ. Read More »

ನೇಣು ಬಿಗಿದು ಯುವತಿ ವಿದ್ಯಾ ಆತ್ಮಹತ್ಯೆ

ಬೆಳ್ತಂಗಡಿ : ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪ ನಡೆದಿದೆ. ಕೊಳಂಬೆ ಉಮೇಶ್ ಗೌಡ ಎಂಬವರ ಪುತ್ರಿ ವಿದ್ಯಾ (22) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ಇರುತ್ತಿದ್ದ ವಿದ್ಯಾ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನೇಣು ಬಿಗಿದು ಯುವತಿ ವಿದ್ಯಾ ಆತ್ಮಹತ್ಯೆ Read More »

ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ  ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್  

ಸುಬ್ರಹ್ಮಣ್ಯ: ರಾಜ್ಯದ ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್  ಹಾಗೂ ಅವರ ಕುಟುಂಬ ಸಹಿತವಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.  ದೇವಳಯದಲ್ಲಿ ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಳ್ಳಲಿರುವ ಡಿ ಕೆ  ಶಿವಕುಮಾರ್ ಕುಟುಂಬ ಸಂಜೆ ಆಶ್ಲೇಷ ಬಲಿ ಸೇವೆ ನೆರವೇರಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಉಪ ಮುಖ್ಯ ಮಂತ್ರಿಗಳನ್ನು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಕಾಂಗ್ರೆಸ್  ಮುಖಂಡರು ಹಾಗೂ ಕಾರ್ಯಕರ್ತರಿಂದ ಸ್ವಾಗತ ಕೋರಿದರು.

ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ  ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್   Read More »

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್

ಹೊಸದಿಲ್ಲಿ: ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾನವಚನ ಸ್ವೀಕಾರ ಮಾಡಿದರು. ಅವರು ಕನ್ನಡ ಭಾಷೆಯಲ್ಲಿ ತುಳುನಾಡಿನ ಎಲ್ಲ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸೋಮವಾರ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಗಿದ್ದು,  ಪದ್ಧತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಪ್ರಮಾಣ ವಚನದದ ಕೊನೆಯಲ್ಲಿ “ಮಾತೆರೆಗ್ಲಾ ಸೋಲೈಲು” (ಎಲ್ಲರಿಗೂ ಧನ್ಯವಾದಗಳು) ಎಂದು ತುಳುವಿನಲ್ಲಿ ಹೇಳುವ ಮೂಲಕ ತುಳು ಭಾಷೆಯ ಬಗೆಗಿನ ತನ್ನ

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್ Read More »

ಸುಳ್ಯದಲ್ಲಿ ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಸುಳ್ಯ: ಅಂಬಟೆಡ್ಕದಲ್ಲಿ ಸ್ವಂತ ನಿವೇಶನದ ಮೂಲಕ ನಿರ್ಮಾಣಗೊಂಡ ಬಿಜೆಪಿಯ ನೂತನ ಕಾರ್ಯಾಲಯವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಹಾಗೂ

ಸುಳ್ಯದಲ್ಲಿ ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read More »

error: Content is protected !!
Scroll to Top