ಲಾರಿ ಹಾಗೂ ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರ ಸಾವು
ಬಿ.ಸಿ.ರೋಡ್ : ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಸಂಭವಿಸಿದೆ. ಕಾಸರಗೋಡು ಸಮೀಪದ ಬೇಕಲ ನಿವಾಸಿ ಸುಮಿತ್ (24) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸ್ಕೂಟರ್ ಸಹಸವಾರ ಗುರುಪ್ರೀತ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಬೆಳ್ತಂಗಡಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಗೆ ಎದುರು ನಿಂದ ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಯಾಗಿದೆ. […]
ಲಾರಿ ಹಾಗೂ ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರ ಸಾವು Read More »










