ದಕ್ಷಿಣ ಕನ್ನಡ

ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೀಬಿ ಅಲಾಬಿ ರಸ್ತೆ ಬಳಿ ನಡೆದಿದೆ. ನಿತೇಶ್ ರಾವ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್ನಲ್ಲಿ ವಾಸವಿದ್ದ ನಿತೇಶ್ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುಪಿ ಜಿಲ್ಲೆಯವರಾದ ನಿತೇಶ್ ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿ ಓದುತ್ತಿದ್ದರು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ನಿತೇಶ್ […]

ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಸುಳ್ಯದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಇಂದು ನಡೆದಿದೆ. ಸುಳ್ಯ ಸರಕಾರಿ ಪಿಯು  ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ (16) ಆತ್ಮಹತ್ಯೆ ಮಾಡಿಕೊಂಡವರು. ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿಯಾಗಿರುವ ರಶ್ಮಿತಾ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುಳ್ಯ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಳ್ಯದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಬಸ್-ಟ್ಯಾಂಕರ್ ಡಿಕ್ಕಿ : 19 ಮಂದಿಗೆ ಗಾಯ

ಬೆಳ್ತಂಗಡಿ: ಬಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದುಕೊಂಡ ಪರಿಣಾಮ 19 ಮಂದಿ ಗಾಯಗೊಂಡ ಘಟನೆ ಬೆಳ್ತಂಗಡಿ ಮಾರಿಗುಡಿ ಬಳಿ ಇಂದು ನಡೆದಿದೆ. ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆಯತ್ತ ಬರುತ್ತಿದ್ದ ವಿಶಾಲ್ ಬಸ್‍, ಎದುರಿನಿಂದ ಬರುತ್ತಿದ್ದ ಎಚ್‍.ಪಿ. ಕಂಪೆನಿಯ ಪೆಟ್ರೋಲಿಯಂ ಕಂಪೆನಿಯ ಟ್ಯಾಂಕರ್ ನಡುವೆ ಮಾರಿಗುಡಿ ಬಳಿ ಡಿಕ್ಕಿ ಸಂಭವಿಸಿದೆ. ಅಪಘಾತದಿಂದ ಎರಡೂ ವಾಹನಗಳ ಚಾಲಕರು ಸಹಿತ  ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳ ಮುಂಭಾಗದ ಗಾಜು ಒಡೆದು ಜಖಂಗೊಂಡಿದೆ.

ಬಸ್-ಟ್ಯಾಂಕರ್ ಡಿಕ್ಕಿ : 19 ಮಂದಿಗೆ ಗಾಯ Read More »

ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕ, ಕಾಂಗ್ರೆಸ್ ಮುಖಂಡ ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಮೇ 8 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಕೊನೆಯುಸಿರೆಳೆದಿದ್ದಾರೆ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ

ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ Read More »

ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ

ಮಂಗಳೂರು: ಸಮುದ್ರದಲ್ಲಿ ಬೆಳ್ಳಂಬೆಳಿಗ್ಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಸಮೀಪದ ತೊಟ್ಟಂನಲ್ಲಿ ನಡೆದಿದೆ. ಬಳ್ಳಾರಿಯ ಕೊಟ್ಟೂರು ತಾಲೂಕಿನಿಂದ ಬಂದಿದ್ದ ಯುವಕರ ತಂಡವೊಂದು ಇಂದು ಬೆಳಿಗ್ಗೆ ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿತ್ತು. ಈ ವೇಳೆ ಯುವಕರ ತಂಡವು ರಕ್ಕಸ ಗಾತ್ರದ ಅಲೆಗೆ ಸಿಲುಕಿ ಒದ್ದಾಡುತ್ತಿತ್ತು. ತಕ್ಷಣ ಅಪಾಯವನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ, ಗೋಪಿನಾಥ್ (25) ಮತ್ತು ರಂಗನಾಥ್ (26) ಎಂಬ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ್ದಾರೆ.  ಮಲ್ಪೆ ಪೊಲೀಸ್ ಠಾಣಾ

ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ Read More »

ಕೌಟುಂಬಿಕ ಕಲಹ : ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಮೂಡುಕೋಡಿ ಗ್ರಾಮದ ನಿವಾಸಿ ವೆಂಕಟ್ರಮಣ ಭಟ್ (71) ಎಂಬವರ ಸೊಸೆ  ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆ ತನ್ನ ತಾಯಿ ಹಾಗೂ ಸಹೋದರ

ಕೌಟುಂಬಿಕ ಕಲಹ : ಜೀವ ಬೆದರಿಕೆ Read More »

ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಬಿ.ಸಿ.ರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಜ್ವಲ್ ಮೇ 5 ರಂದು ಬಿ.ಸಿರೋಡಿನ ಖಾಸಗಿ ಬಸ್‌ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿ ಮಾದಲ್ಲಿ ರೂಮ್ ಮಾಡಿದ್ದ, ಮೇ 6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಕಾರಣ ಹೋಟೆಲ್

ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ವ್ಯಕ್ತಿ ಆಸ್ಪತ್ರೆಗೆ ದಾಖಲು : ಗುರುತು ಪತ್ತೆಗೆ ಮನವಿ

ಸುಳ್ಯ : ಸುಳ್ಯ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯೋರ್ವರು ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವ್ಯಕ್ತಿಯ ಪರಿಚಯಕ್ಕಾಗಿ ಆಸ್ಪತ್ರೆಯಿಂದ  ಪೋಲಿಸ್ ಇಲಾಖೆಗೆ ದೂರು ಸಲ್ಲಿಸಲಾಗಿದೆ. ಪರಿಚಯ ಇದ್ದವರು ಇವರ ಗುರುತನ್ನು ತಿಳಿಸುವಂತೆ  ಮನವಿ ಮಾಡಿದ್ದಾರೆ.

ವ್ಯಕ್ತಿ ಆಸ್ಪತ್ರೆಗೆ ದಾಖಲು : ಗುರುತು ಪತ್ತೆಗೆ ಮನವಿ Read More »

ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಂಟ್ವಾಳ:  ಬಂಟ್ವಾಳ ಪಾಳು ಬಾವಿಗೆ ಬಿದ್ದ ನಾಯಿಯನ್ನು ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಮೊಡಂಕಾಪಿನ ಗಾಂದೋಡಿ ಬಳಿ ನಡೆದಿದೆ. ಸ್ಥಳೀಯರ ಮಾಹಿತಿ ಪ್ರಕಾರ ನಾಯಿಯು ಕಳೆದ ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದು, ಬಾವಿಯನ್ನು ಯಾರೂ ಉಪಯೋಗಿಸದ ಹಿನ್ನೆಲೆಯಲ್ಲಿ ನಾಯಿ ಬಿದ್ದಿರುವುದು ಗಮನಕ್ಕೆ ಬಂದಿರಲಿಲ್ಲ. ಆದರೆ ಇಂದು ನಾಯಿ ಬಾವಿಯಲ್ಲಿರುವುದು ಗೊತ್ತಾಗಿದ್ದು, ಗಾಂದೋಡಿ ನಿವಾಸಿ ವಿಶ್ವನಾಥ ಶೆಟ್ಟಿ ಅವರು ಪೊಲೀಸ್ 100 ಸಂಖ್ಯೆಗೆ ಕರೆ ಮಾಡಿ  ಬಳಿಕ ಅವರು  ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ Read More »

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಆಸ್ಪತ್ರೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಮಂಜೇಶ್ವರ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತ ಕೈದಿ. 2022ರ ಡಿಸೆಂಬರ್ ನಲ್ಲಿ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೋಣಾಜೆ ಪೊಲೀಸರಿಂದ ಬಂಧನಕ್ಕೀಡಾಗಿದ್ದ. ಆನಂತರ ಮಂಗಳೂರು ಜೈಲಿನಲ್ಲೇ ಇದ್ದು ಯುವಕನ ಪರವಾಗಿ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ. ಈತ ಜೈಲಿನಲ್ಲಿ ಮಾನಸಿಕ ಅಸ್ವಸ್ಥನಂತೆ  ವರ್ತಿಸುತ್ತಿದ್ದ ಕಾರಣಕ್ಕೆ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಹಾಕ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಮೇ

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ Read More »

error: Content is protected !!
Scroll to Top