ದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ […]

ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ Read More »

ಹಿಂದೂ ಯುವತಿ ಹಾಗೂ ಮಹಿಳೆಗೆ ಕಿರುಕುಳ : ಆರೋಪಿ ಸೈಯದ್ ನಯೀಮ್ ಬಂಧನ

ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆಯ ಮನೆಗೆ ಬಂದು ಯುವಕನೋರ್ವ ಬಂದು ಕಿರುಕಳ ಮತ್ತು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಈತ ಮಹಿಳೆಗೆ ರವಿ ಎಂಬ ಹೆಸರಿನಲ್ಲಿ ಒಂದು ವರ್ಷದ ಹಿಂದೆ ಪರಿಚಯವಾಗಿದ್ದು ಆಗಾಗ ಮಹಿಳೆ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವೂ ಇತ್ತೆಂದು ತಿಳಿದು ಬಂದಿದೆ. ಶುಕ್ರವಾರ ಬೆಳಿಗ್ಗೆ ಬಂದಿದ್ದ ಯುವಕ ಮಹಿಳೆ ಮತ್ತು ಮಹಿಳೆಯ ಅಕ್ಕನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಮಹಿಳೆ ಮತ್ತು ಯುವಕನ ಮಧ್ಯೆ ಗಲಾಟೆ

ಹಿಂದೂ ಯುವತಿ ಹಾಗೂ ಮಹಿಳೆಗೆ ಕಿರುಕುಳ : ಆರೋಪಿ ಸೈಯದ್ ನಯೀಮ್ ಬಂಧನ Read More »

ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಚಿನ್ ನಡ್ಕ ಅವರಿಗೆ ‘ಅಶ್ವಿನಿ’ ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಹಾಸನ ವತಿಯಿಂದ ಕಾಲೇಜಿನ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ‘ಅಶ್ವಿನಿ’ ಪ್ರಶಸ್ತಿಯನ್ನು ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಆಡಳಿತ ನಿರ್ದೇಶಕ ಡಾ.ಸಚಿನ್ ನಡ್ಕ ಅವರಿಗೆ ನೀಡಿ ಗೌರವಿಸಲಾಯಿತು. ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಸಭಾಂಗಣದಲ್ಲಿ ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ‘ಸಮನ್ವಯ’ದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಚಿನ್ ನಡ್ಕ ಅವರಿಗೆ ‘ಅಶ್ವಿನಿ’ ಪ್ರಶಸ್ತಿ Read More »

ಆಟೋ ಚಾಲಕ ನಾಪತ್ತೆ : ಪ್ರಕರಣ ದಾಖಲು

ವಿಟ್ಲ: ಆಟೋ ಚಾಲಕರೊಬ್ಬರು ಬಾಡಿಗೆಗೆಂದು ತೆರಳಿ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾಗಿದ್ದು, ಅವರ ಆಟೋ ರಿಕ್ಷಾ, ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಗಿದೆ. ನ.28 ರಂದು ತನ್ನ ಮನೆಯಿಂದ ಆಟೋರಿಕ್ಷಾವನ್ನು ತೆಗೆದುಕೊಂಡು ಬೆಳಿಗ್ಗೆ ಹೊರಟಿದ್ದು ವಾರ ಕಳೆದರೂ ಮನೆಗೆ ವಾಪಸು ಬಂದಿಲ್ಲ. ಈ ಬಗ್ಗೆ ಸಂಬಂದಿಕರಲ್ಲಿ ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾರೆ ಮನಯವರು ಠಾಣೆಗೆ ನೀಡಿದ ಎಂದು ದೂರಿನಲ್ಲಿ

ಆಟೋ ಚಾಲಕ ನಾಪತ್ತೆ : ಪ್ರಕರಣ ದಾಖಲು Read More »

ನಿವೃತ್ತ ಯೋಧ ಕೂಸಪ್ಪ ಶೆಟ್ಟಿ ನಿಧನ

ವಿಟ್ಲ : ವಿಟ್ಲದ ಮಂಗಲಪದವು ನಿವಾಸಿ ನಿವೃತ್ತ ಸೈನಿಕ ಕೂಸಪ್ಪ ಶೆಟ್ಟಿ(81) ವಯೋ ಸಹಜವಾಗಿ  ಸ್ವಗೃಹದಲ್ಲಿ ನಿಧನರಾಗಿದ್ದಾರೆ.   ಇವರು ಪುತ್ತೂರು ಮಾಜಿ ಸೈನಿಕ ಸಂಘದ ಅತ್ಯಂತ ಹಿರಿಯ ಸದಸ್ಯರಾಗಿದ್ದು, ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಸೇವೆ ಗೈದಿದ್ದ ಇವರು 1962 ಮತ್ತು 1971 ರ ಯುದ್ಧದಲ್ಲಿ ಭಾಗವಹಿಸಿದ್ದಾರೆ. ಪುತ್ತೂರು ಮಾಜಿ ಸೈನಿಕ ಸಂಘದ ಅಧ್ಯಕ್ಷ ಎಂ. ಕೆ. ನಾರಾಯಣ ಭಟ್, ಉಪಾಧ್ಯಕ್ಷ ದಾಸಪ್ಪ ಪೂಜಾರಿ, ಕಾರ್ಯದರ್ಶಿ ನಾಗಪ್ಪ ಗೌಡ ಮತ್ತು ಅನೇಕ ಮಾಜಿ ಸೈನಿಕರು ಮೃತರ

ನಿವೃತ್ತ ಯೋಧ ಕೂಸಪ್ಪ ಶೆಟ್ಟಿ ನಿಧನ Read More »

ಮಲೇಶಿಯಾದ ಕೌಲಲಾಂಪುರದಲ್ಲಿ  ಏಷ್ಯನ್ ಪೆಸಿಫಿಕ್ ಡೆಫ್ ಚೆಸ್   ಸ್ಪರ್ಧೆ | ಯಶಸ್ವಿ ಕುದುಮಾನಿಗೆ  ಕಂಚಿನ ಪದಕ

ಬಂಟ್ವಾಳ : ಮಲೇಶಿಯಾದ ಕೌಲಲಾಂಪುರದಲ್ಲಿ  ನಡೆದ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್   ಸ್ಪರ್ಧೆಯಲ್ಲಿ ಯಶಶ್ವಿ ಕುದುಮಾನು  ಕಂಚಿನ ಪದಕ  ಪಡೆದಿದ್ದಾರೆ. ಇವರು ಮಂಗಳೂರು  ಶ್ರೀನಿವಾಸ ಕಾಲೇಜಿನಲ್ಲಿ  MCA ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದಾರೆ.    ಯಶಶ್ವಿ ಕುದುಮಾನು ಬಂಟ್ವಾಳ ತಾಲೂಕು  ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ, ಯೋಶೋಧ  ದಂಪತಿ ಪುತ್ರಿ

ಮಲೇಶಿಯಾದ ಕೌಲಲಾಂಪುರದಲ್ಲಿ  ಏಷ್ಯನ್ ಪೆಸಿಫಿಕ್ ಡೆಫ್ ಚೆಸ್   ಸ್ಪರ್ಧೆ | ಯಶಸ್ವಿ ಕುದುಮಾನಿಗೆ  ಕಂಚಿನ ಪದಕ Read More »

ಆರ್‌ಎಸ್ಎಸ್ ಪ್ರಚಾರಕ ಪ್ರಸಾದ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ, ಡಿ.2: ಸೋಮವಾರ ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಡೆದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದರು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ

ಆರ್‌ಎಸ್ಎಸ್ ಪ್ರಚಾರಕ ಪ್ರಸಾದ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ Read More »

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಮಂಗಳೂರು: ಬಾಂಗ್ಲಾದೇಶದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಹಿಂದುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಲು ಹಿಂದು ಸಂಘಟನೆಗಳು ಮಂಗಳೂರಿನಲ್ಲಿ ಡಿ.4ರಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿವೆ. ಬೆಳಗ್ಗೆ ಮಂಗಳೂರಿನ ಜ್ಯೋತಿ ವೃತ್ತದಿಂದ ಮಿನಿ ವಿಧಾನಸೌಧ ತನಕ ಬೃಹತ್‌ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗುವುದು. ಹಲವು ಪ್ರಮುಖ ಹಿಂದು ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಟನೆ ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಅಲ್ಲ, ಸಮಸ್ತ ಹಿಂದುಗಳ ರಕ್ಷಣೆಗಾಗಿ ಪಕ್ಷಭೇದವಿಲ್ಲದೆ ನಡೆಯಲಿದೆ. ಹಿಂದುಗಳ ಹಿತ ಬಯಸುವ ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳಬಹುದು ಎಂದು

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ Read More »

ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಹತ್ಯೆ | ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ : ಕಿಶೋರ್ ಕುಮಾರ್ ಪುತ್ತೂರು

ಕಡಬ: ಠಾಣಾ ವ್ಯಾಪ್ತಿಯ ಬಿಳಿನೆಲೆಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಎಂಬವರ ಹತ್ಯೆಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ವಿಷಯ ತಿಳಿದು ತುರ್ತಾಗಿ ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಈ ಕುರಿತು ಮಾತನಾಡಿರುವ ಕಿಶೋರ್ ಕುಮಾರ್ ಪುತ್ತೂರು ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಎಸ್.ಪಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕೃತ್ಯದ ಕುರಿತು ತನಿಖೆ ನಡೆಸಿ ನಮ್ಮ ಕಾರ್ಯಕರ್ತನ ಹತ್ಯೆಯ ಹಿಂದಿರುವ

ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಹತ್ಯೆ | ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ : ಕಿಶೋರ್ ಕುಮಾರ್ ಪುತ್ತೂರು Read More »

ಡಿ.3 (ನಾಳೆ) : ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲಾಧ್ಯಂತ ಶಾಲಾ- ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಡಿ.3) ದ.ಕ.ಜಿಲ್ಲೆಯಾದ್ಯಂತ ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ.ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಪೆಂಗಲ್ ಚಂಡ ಮಾರುತ ಹಿನ್ಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವುದರಿಂದ ಆರೆಂಜ್ ಅಲರ್ಟ್‍ ಘೊಷಿಸಲಾಗಿದೆ.

ಡಿ.3 (ನಾಳೆ) : ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲಾಧ್ಯಂತ ಶಾಲಾ- ಪಿಯು ಕಾಲೇಜುಗಳಿಗೆ ರಜೆ Read More »

error: Content is protected !!
Scroll to Top