ದಕ್ಷಿಣ ಕನ್ನಡ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಅಪರಿಚಿತರು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಬಜ್ಪೆ ಠಾಣೆಗೆ […]

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ Read More »

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ 2024- 25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರು- ರಾಜೇಶ್ ಎನ್ ಎಸ್, ಕಾರ್ಯದರ್ಶಿ- ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿ-ಮೋಹನ್ ದಾಸ್ ರೈ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ 2024- 25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಜೂ.20 ರಂದು ನಡೆಯಿತು. ಅಧ್ಯಕ್ಷರಾಗಿ ರಾಜೇಶ್ ಎನ್ ಎಸ್., ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿಯಾಗಿ ಮೋಹನ್ ದಾಸ್ ರೈ ಆಯ್ಕೆಯಾಗಿದ್ದಾರೆ. ಜೂ.20 ರಂದು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರುಗಳಾಗಿ ಸತೀಶ ಕೂಜುಗೋಡು, ವಿಷ್ಣು ಪಾತಿಕಲ್ಲು, ಪಿ ಆರ್ ಓ ಆಗಿ ರೇಗನ್ ಶೆಟ್ಟಿಯಡ್ಕ, ನಿಕಟ ಪೂರ್ವ ಅಧ್ಯಕ್ಷರಾಗಿ ರಾಮಚಂದ್ರ ಪಳಂಗಾಯ, ಮುಖ್ಯ ಆಡಳಿತ ಅಧಿಕಾರಿಯಾಗಿ ರಂಗಯ್ಯ ಶೆಟ್ಟಿಗಾರ್, ಮೆಂಬರ್

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ 2024- 25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರು- ರಾಜೇಶ್ ಎನ್ ಎಸ್, ಕಾರ್ಯದರ್ಶಿ- ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿ-ಮೋಹನ್ ದಾಸ್ ರೈ Read More »

ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಸಂತಿದೇವಿ ಮೃತ್ಯು

ನೆಲ್ಯಾಡಿ: ಆಕಸ್ಮಿಕವಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ನಿವಾಸಿ ಚಕ್ರ ಬಹಾದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ (44) ಮೃತಪಟ್ಟವರು. ಜೂ. 11ರಂದು ಸಂಜೆ ಅಡುಗೆಗಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ಸುಟ್ಟಗಾಯ ಉಂಟಾಗಿತ್ತು.

ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಸಂತಿದೇವಿ ಮೃತ್ಯು Read More »

ಬಕ್ರೀದ್ ಹಬ್ಬದಂದು ನಾಪತ್ತೆಯಾದ ಕರೀಂ ಶವ ಪತ್ತೆ |

ಬಂಟ್ವಾಳ : ಬಕ್ರೀದ್ ಹಬ್ಬದಂದು ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಿ ಸಿ ರೋಡು ಸಮೀಪದ ತಲಪಾಡಿ-ಕೆಇಬಿ ಸಬ್ ಸ್ಟೇಷನ್ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಬಿ ಸಿ ರೋಡು ಸಮೀಪದ ಕೈಕಂಬ ನಿವಾಸಿ ಕರೀಂ (61) ಮೃತ ವ್ಯಕ್ತಿ. ಬಕ್ರೀದ್ ಹಬ್ಬದಂದು ಸಂಜೆ ಮನೆಯಿಂದ ಹೊರಟ ಕರೀಂ ಅವರು ಬಳಿಕ ವಾಪಾಸು ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಮನೆ ಮಂದಿ ಸಹಿತ ಊರ ನಾಗರಿಕರು ಹುಡುಕಾಟ ನಡೆಸಿದ್ದರು. ಇವರ ಪತ್ತೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲೂ ಭಾವಚಿತ್ರ ಸಹಿತ

ಬಕ್ರೀದ್ ಹಬ್ಬದಂದು ನಾಪತ್ತೆಯಾದ ಕರೀಂ ಶವ ಪತ್ತೆ | Read More »

ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ

ಮಂಗಳೂರು: ರಾಜ್ಯ ಸರಕಾರ ತೈಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಗಳೂರಿನಲ್ಲಿ  ರಾಜ್ಯ ಸರಕಾರದ ವಿರುದ್ಧ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಮತ್ತು ವಾಲ್ಮೀಕಿ ನಿಗಮದ ಭ್ರಷ್ಟಾಚಾರದಂತಹ ಅವ್ಯವಸ್ಥೆಗಳಿಂದ ಕಂಗೆಟ್ಟು ಹೋಗಿರುವ ಕಾಂಗ್ರೆಸ್ ಸರಕಾರ ಹಣವನ್ನು ಸರಿದೂಗಿಸಲು ಸಾಮಾನ್ಯ ಜನರ ಕಿಸೆಗೆ ಕನ್ನ ಹಾಕುತ್ತಿರುವುದು

ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ Read More »

ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಬಾಲಕ ರಿಮಾಂಡ್ ಹೋಮ್ ಗೆ

ಉಪ್ಪಿನಂಗಡಿ: ಸಮೀಪದ ಪೆರ್ನೆ ಗ್ರಾಮ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳವರೆಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ. ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದ್ದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರು. ಆಗ

ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಬಾಲಕ ರಿಮಾಂಡ್ ಹೋಮ್ ಗೆ Read More »

ಹೆದ್ದಾರಿ ಕಾಮಗಾರಿಗಳ ಕುರಿತು ವಿಶೇಷ ನಿಗಾವಹಿಸಿ | ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಕ್ಯಾ.ಬ್ರಿಜೇಶ್‍ ಚೌಟ

ಮಂಗಳೂರು: ಎನ್‌ಎಚ್‌ಎಐನ ಯೋಜನಾ ನಿರ್ದೇಶಕರೊಂದಿಗೆ ಚರ್ಚೆ ನಡೆಸಿ ಮಳೆ ಬಿರುಸುಗೊಳ್ಳುವ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿಗಳ ಬಗ್ಗೆ ವಿಶೇಷ ಗಮನಹರಿಸುವಂತೆ ಅಧಿಕಾರಿಗಳಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚನೆ ನೀಡಿದರು. ಮಂಗಳೂರಿನಲ್ಲಿ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಪ್ರಗತಿಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕಾಮಗಾರಿ ಹಂತದಲ್ಲಿರುವ ಎಲ್ಲಾ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ರೂಪುರೇಷೆಗಳನ್ನು ಹಾಕಿಕೊಂಡು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮವಹಿಸಲಿದ್ದೇನೆ ಎಂಬ ಭರವಸೆಯನ್ನು

ಹೆದ್ದಾರಿ ಕಾಮಗಾರಿಗಳ ಕುರಿತು ವಿಶೇಷ ನಿಗಾವಹಿಸಿ | ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಕ್ಯಾ.ಬ್ರಿಜೇಶ್‍ ಚೌಟ Read More »

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ | ಬೀದಿಗಿಳಿದು ಹೋರಾಟ: ಭಾಗೀರಥಿ ಮುರುಳ್ಯ

ಕಡಬ : ಪರಿಶಿಷ್ಟರ ಹಣ ಬಳಸಿಕೊಂಡು ರಾಜ್ಯ ಸರ್ಕಾರ ಬಿಟ್ಟಿ ಭಾಗ್ಯ ನೀಡುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರಿಗೂ ದುಪ್ಪಟ್ಟು ಬೆಲೆ ತೆರಬೇಕಾಗಿದೆ.   ಬೆಲೆ ಏರಿಸಿಕೊಂಡ ಸರ್ಕಾರ ನಿದ್ದೆ ಮಾಡುತ್ತಿದೆ. ಹೋರಾಟ ನಮಗೆ ಹೊಸದಲ್ಲ, ರಸ್ತೆಗಿಳಿದು ಮುಂದಿನ ದಿನ ಕಡಬದಲ್ಲೂ ಪ್ರತಿಭಟಿಸಲಾಗುವುದು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಕಡಬದಲ್ಲಿ ಜೂ.19ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದು ಇದರಿಂದಾಗಿ ರೈತರಿಗೆ

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ | ಬೀದಿಗಿಳಿದು ಹೋರಾಟ: ಭಾಗೀರಥಿ ಮುರುಳ್ಯ Read More »

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನ ಸಂಬಂಧಿಕರ ಮನೆಯಲ್ಲಿ ಪತ್ತೆ

ಉಜಿರೆ :ಉಜಿರೆ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕು ಕಸಬಾ ಹೋಬಳಿ ದೇವಾಂಗ ರಸ್ತೆಯ ದಿವ್ಯಾ ಎಸ್ ಎಂಬವರು ಉಜಿರೆ ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜುನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬರದೇ, ಕಾಲೇಜಿಗೂ ಹೋಗದೇ,

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನ ಸಂಬಂಧಿಕರ ಮನೆಯಲ್ಲಿ ಪತ್ತೆ Read More »

ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ : ತಡೆದ ಹಿಂದೂ ಕಾರ್ಯಕರ್ತರು

ಸುಳ್ಯ: ಅನ್ಯಕೋಮಿನ ಇಬ್ಬರು ಯುವಕರೊಂದಿಗೆ ಹಿಂದೂ ಹುಡುಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರು ತಡೆದ ಘಟನೆ ಸುಳ್ಯದಲ್ಲಿ ನಡೆದಿದೆ. ಕೇರಳ ಮೂಲದ ಅನ್ಯ ಕೋಮಿನ ಇಬ್ಬರು ಯುವಕರೊಂದಿಗೆ ಹಿಂದು ಹುಡುಗಿ ಇದ್ದಳೆಂದು ಅವರ ಪ್ರಯಾಣಿಸುತ್ತಿದ್ದ ಕಾರನ್ನು ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಘಟನೆಗೆ ಸಂಬಂಧಿಸಿ ಮೂವರನ್ನು ಠಾಣೆಗೆ ಕರೆದೊಯ್ದಿರುವುದಾಗಿ ತಿಳಿದು ಬಂದಿದೆ. ಮಾರುತಿ ಶಿಫ್ಟ್ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ. ಇದೀಗ ಪೋಲಿಸರು ವಿಚಾರಿಸುತ್ತಿದ್ದು, ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ : ತಡೆದ ಹಿಂದೂ ಕಾರ್ಯಕರ್ತರು Read More »

error: Content is protected !!
Scroll to Top