ದಕ್ಷಿಣ ಕನ್ನಡ

ಕಾಂತಮಂಗಲ ಶಾಲಾ ಜಗಲಿಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಸಂತ ಎಂಬವರ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ (35) ಬಂಧಿತ ಆರೋಪಿ. ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬವರನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಉದಯ ಕುಮಾರ್ ಗೆ ಬಾರೊಂದರಲ್ಲಿ ವಸಂತ ಎಂಬಾತನ ಪರಿಚಯವಾಗಿದ್ದು, ರವಿವಾರ […]

ಕಾಂತಮಂಗಲ ಶಾಲಾ ಜಗಲಿಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು Read More »

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆ !

ಸುಳ್ಯ: ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಕೊಡಗು ವಿರಾಜಪೇಟೆ ಮೂಲದ ವಸಂತ ಮೃತಪಟ್ಟವರೆಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಕಾಂತಮಂಗಲ ಶಾಲಾ ಬಳಿಯಲ್ಲಿ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆಯಾದ ರೀತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ತನಿಖೆ ಆರಂಭಿಸಿದ್ದರು. ಪೊಲೀಸರು ನಡೆಸಿದ ತನಿಖೆಯಿಂದ ಮೃತಪಟ್ಟ ವ್ಯಕ್ತಿ ವಸಂತ ಎಂದು ಗುರುತಿಸಲಾಗಿದ್ದು ಈತ ಕುದ್ರೆಪಾಯದಿಂದ ಮದುವೆಯಾಗಿದ್ದ ಎಂದು ಹೇಳಲಾಗುತ್ತಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆ ! Read More »

ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಹಾಗೂ ಸಂಘದ ಪದಾಧಿಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆರ್ಶೀವಾದ ಹಾಗೂ ಮಾರ್ಗದರ್ಶನ ಪಡೆದು ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು,

ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ Read More »

ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಮೃತ್ಯು !

ಕಡಬ: ವಿದ್ಯುತ್ ಲೈನ್ ಕಾರ್ಮಿಕನೊಬ್ಬ ಕಂಬದಿಂದ ಬಿದ್ದು ಮೃತಪಟ್ಟ ಘಟನೆ ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಇದೀಗ ನಡೆದಿದೆ. ಅಲೆಕ್ಕಾಡಿ ಸಮೀಪ ಪಿಜಾವು ಎಂಬಲ್ಲಿ ಕಡಬದ ಕೃಷ್ಣ ಎಲೆಕ್ಟ್ರಿಕಲ್ ನ ಕಾರ್ಮಿಕರು ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಕಂಬದಿಂದ ಬಿದ್ದು ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ವಿದ್ಯುತ್ ಆಫ್ ಮಾಡಿ ಕೆಲಸ ನಿರ್ವಹಿಸಲಾಗುತ್ತಿದ್ದು ವಿದ್ಯುತ್ ಶಾಕ್ ನಿಂದ ಬಿದ್ದಿರುವುದೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪಂಜ ಶಾಖಾ ಜೆಇ ತಿಳಿಸಿದ್ದಾರೆ.

ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಮೃತ್ಯು ! Read More »

ಪುಣ್ಚತ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ

ಕಾಣಿಯೂರು: ಪುಣ್ಚತ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ. 7ರಂದು ನಡೆಯಲಿರುವ 7ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ ಭಾನುವಾರ ಪುಣ್ಣತ್ತಾರಿನ ಶ್ರೀ ಹರಿಕೃಪಾ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಗಣೇಶೋತ್ಸವ ಕಾರ್ಯಕ್ರಮವನ್ನು ಯಶಸ್ವಿಯನ್ನಾಗಿ ನಡೆಸುವ ಬಗ್ಗೆ ನಿರ್ಣಾಯಿಸಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ನಾರಾಯಣ ಗೌಡ ಪುಣ್ಚತ್ತಾರು, ಅಧ್ಯಕ್ಷ ವಿಶ್ವನಾಥ ರೈ ಮಾಳ, ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಉಪಾಧ್ಯಕ್ಷ ಕೋಶಾಧಿಕಾರಿ ನೇಮಿರಾಜ್ ಕಡಿರ, ಜತೆ ಕಾರ್ಯದರ್ಶಿ ದಿನೇಶ್ ಪೈಕ, ಪುಣ್ಣತ್ತಾರು

ಪುಣ್ಚತ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ Read More »

ಪ್ರತಿಭಟನೆ ವೇಳೆ ಕುಸಿದುಬಿದ್ದು ಎಂ.ಎಲ್.ಸಿ ಭಾನುಪ್ರಕಾಶ್ ನಿಧನ| ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮ ಮುಂದೂಡಿಕೆ

ಮಂಗಳೂರು : ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ನ ಮಾಜಿ ಸದಸ್ಯ ಭಾನುಪ್ರಕಾಶ್‌ರವರು ಇಂದು ನಿಧನರಾದರು. ಕಾಂಗ್ರೆಸ್‌ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುಪ್ರಕಾಶ್‌ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾದವರು ಹಾಗೂ ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ನಿಯಾಗಿದ್ದರು. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯತ್

ಪ್ರತಿಭಟನೆ ವೇಳೆ ಕುಸಿದುಬಿದ್ದು ಎಂ.ಎಲ್.ಸಿ ಭಾನುಪ್ರಕಾಶ್ ನಿಧನ| ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮ ಮುಂದೂಡಿಕೆ Read More »

ರಾಜ್ಯ ಸರಕಾರದಿಂದ ಪೆಟ್ರೋಲ್ ಬೆಲೆ ಏರಿಕೆ | ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಿ ಜನಸಾಮಾನ್ಯರ ಬದುಕಿಗೆ ಬರೆ ಎಳೆಯುತ್ತಿರುವ ಸರಕಾರ : ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಯತ್ನಿಸುತ್ತಿರುವುದು ಖಂಡನೀಯ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ರಾಜ್ಯ ಸರಕಾರದ ವಿರುದ್ಧ ಖಂಡನೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ಬದುಕಿಗೆ

ರಾಜ್ಯ ಸರಕಾರದಿಂದ ಪೆಟ್ರೋಲ್ ಬೆಲೆ ಏರಿಕೆ | ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಿ ಜನಸಾಮಾನ್ಯರ ಬದುಕಿಗೆ ಬರೆ ಎಳೆಯುತ್ತಿರುವ ಸರಕಾರ : ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ !

ಸುಳ್ಯ: ಯುವಕನೊಬ್ಬನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಕಾಂತಮಂಗಲದಿಂದ ವರದಿಯಾಗಿದೆ. ಅಜ್ಜಾವರ ಗ್ರಾಮದ ಕಾಂತಮಂಗಲದ ಶಾಲೆಯೊಂದರ ಜಗಲಿಯಲ್ಲಿ ತಲೆಗೆ ಕಲ್ಲು ಎತ್ತಿ ಕೊಲೆ ಮಾಡಿರುವ ಯುವಕನ ಶವ ಪತ್ತೆಯಾಗಿದೆ. ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಪೋಲೀಸರು ಸ್ಥಳಕ್ಕೆ ಬಂದಿದ್ದು ಮಹಜರು ನಡೆಸುತಿದ್ದಾರೆ ಎಂದು ತಿಳಿದು ಬಂದಿದೆ.

ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ ! Read More »

ಚಾಲಕನ ನಿಯಂತ್ರಣ ತಪ್ಪಿದ ಕಾರು : ವಿದ್ಯುತ್‍ ಕಂಬಕ್ಕೆ ಡಿಕ್ಕಿ

ಸುಬ್ರಹ್ಮಣ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ಕುಲ್ಕುಂದ ವಲಯ ಅರಣ್ಯಾಧಿಕಾರಿ ಕಚೇರಿ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಕಾರು ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಕಾರು ಜಖಂಗೊಂಡಿದೆ. ಘಟನೆಯಲ್ಲಿ ವಿದ್ಯುತ್ ಕಂಬ ಮುರಿದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು : ವಿದ್ಯುತ್‍ ಕಂಬಕ್ಕೆ ಡಿಕ್ಕಿ Read More »

ಕರ್ನಾಟಕದ ರಾಜ್ಯಪಾಲರನ್ನು ಭೇಟಿಯಾದ ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶನಿವಾರ ಭೇಟಿ ಮಾಡಿದರು. ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಭೇಟಿ ಮಾಡಿದ್ದಾರೆ. ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತುಕತೆ ನಡೆಸಿದರು.

ಕರ್ನಾಟಕದ ರಾಜ್ಯಪಾಲರನ್ನು ಭೇಟಿಯಾದ ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

error: Content is protected !!
Scroll to Top