ದಕ್ಷಿಣ ಕನ್ನಡ

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ | ಆದೇಶದಲ್ಲಿ ಏನಿದೆ ? | ಇಲ್ಲಿದೆ ಡಿಟೈಲ್ಸ್

ಮಂಗಳೂರು: ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.26 ರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು […]

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ | ಆದೇಶದಲ್ಲಿ ಏನಿದೆ ? | ಇಲ್ಲಿದೆ ಡಿಟೈಲ್ಸ್ Read More »

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಬಿಜೆಪಿ ಸೇರ್ಪಡೆ

ವಿಟ್ಲ: ಅಳಿಕೆ ಗ್ರಾಮದ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ದೇಶಕ್ಕೆ ಮೋದಿ ಅನಿವಾರ್ಯ ಮತ್ತು ಸ್ಥಳೀಯ ನಾಯಕರ ವರ್ತನೆಗೆ ಬೇಸತ್ತು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಸಮ್ಮಖದಲ್ಲಿ ಬಿಜೆಪಿ ಸೇರಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನಾ ಜಿ.ಕೆ.ಭಟ್, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಉಪಾಧ್ಯಕ್ಷ, ಪುಣಚ ಮಹಾಶಕ್ತೀ ಕೇಂದ್ರ ಅಧ್ಯಕ್ಷ

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಬಿಜೆಪಿ ಸೇರ್ಪಡೆ Read More »

ಉಪ್ಪಿನಂಗಡಿ ವಿದ್ಯಾರ್ಥಿ ನಂದನ್ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.19 ರಂದು ಸಂಜೆ ನಡೆದಿದೆ. ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ, ವಿದ್ಯಾರ್ಥಿ ನಂದನ್ (13) ಆತ್ಮಹತ್ಯೆ ಮಾಡಿಕೊಂಡವ. ತನ್ನ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಂಜದ ದಿ.ರೋಹಿತ್ ಗೌಡ ಎಂಬವರ ಪುತ್ರನಾಗಿದ್ದು, ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಈತ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8ನೇ ತರಗತಿಗೆ

ಉಪ್ಪಿನಂಗಡಿ ವಿದ್ಯಾರ್ಥಿ ನಂದನ್ ನೇಣು ಬಿಗಿದು ಆತ್ಮಹತ್ಯೆ Read More »

ಸಿಡಿಲು ಬಡಿದು ಕರು ಮೃತ್ಯು

ಕಲ್ಲಡ್ಕ: ಸಿಡಿಲು ಬಡಿದು ಕರುವೊಂದು ಮೃತಪಟ್ಟ ಘಟನೆ ಬುಧವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಹಟ್ಟಿಯಲ್ಲಿದ್ದ ಕರು ಸಿಡಿಲಿನ ಬಡಿತಕ್ಕೆ ಬಲಿಯಾಗಿದ್ದು, ಮನೆಯ ಸಂಪೂರ್ಣ ವಯರಿಂಗ್, ಸ್ವಿಚ್ ಬೋರ್ಡ್ ಗಳು ಹೊತ್ತಿ ಹೋಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಸಿಡಿಲಿನ ಬಡಿತದಿಂದಾಗಿ ಅಪಾರ ನಷ್ಟ ಸಂಭವಿಸಿದೆ.

ಸಿಡಿಲು ಬಡಿದು ಕರು ಮೃತ್ಯು Read More »

ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ !

ಕಡಬ: ಮನುಷ್ಯನ ತಲೆಬುರುಡೆಯೊಂದು ಕೊಳೆತ ಸ್ಥಿತಿಯಲ್ಲಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್ ಎಂಬವರು ಏ.19 ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದೆ. ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ

ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ ! Read More »

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ಥ

ಸುಳ್ಯ: ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಭಾರೀ ಗಾಳಿಗೆ ಬೃಹದಾಕಾರದ ದೂಪದ ಮರವೊಂದು ಮುಖ್ಯರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದೀಗ ಸ್ಥಳೀಯರು ಸೇರಿ ಮರ ತೆರವು ಕಾರ್ಯದಲ್ಲಿ ತೊಡಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದುಬಂದಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ಥ Read More »

ದೇಶ , ಜಿಲ್ಲೆ ಅಭಿವೃದ್ಧಿಗಾಗಿ ಹಸ್ತ ಚಿಹ್ನೆಗೆ ಮತನೀಡಿ : ಪದ್ಮರಾಜ್

ಸುಳ್ಯ : ದೇಶದ ಭವಿಷ್ಯದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ, ಕಾರ್ಯಕರ್ತರು, ನಾಯಕರು ಒಟ್ಟಾಗಿದ್ದು ಈ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕಾಂಗ್ರೆಸ್‌ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ಸರಕಾರ ಅನುಷ್ಠಾನಗೊಂಡ ನೂರು ದಿನಗಳ ಒಳಗೆ ಜಾರಿಗೊಳಿಸಿದೆ. ಕೇಂದ್ರದಲ್ಲಿಯೂ ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಜಾರಿಗೆ ತರಲಿದೆ. ಈ ಬಾರಿ ಎಲ್ಲರೂ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಹೇಳಿದರು. ಕಾಂಗ್ರೆಸ್‌ ಅಭ್ಯರ್ಥಿ

ದೇಶ , ಜಿಲ್ಲೆ ಅಭಿವೃದ್ಧಿಗಾಗಿ ಹಸ್ತ ಚಿಹ್ನೆಗೆ ಮತನೀಡಿ : ಪದ್ಮರಾಜ್ Read More »

ದ್ವಿಚಕ್ರ ವಾಹನ ಲಾರಿಗೆ ಡಿಕ್ಕಿ : ಸವಾರ ಮೃತ್ಯು

ಮಂಗಳೂರು: ದ್ವಿಚಕ್ರ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೇರೂರು ನಿವಾಸಿ ಕೃಷ್ಣ ಗಾಣಿಗ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಪರಿವರ್ತಿಸಲಾಗಿತ್ತು. ಈ ಸಂದರ್ಭ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಅವರ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದ್ವಿಚಕ್ರ ವಾಹನ ಲಾರಿಗೆ ಡಿಕ್ಕಿ : ಸವಾರ ಮೃತ್ಯು Read More »

ಏ.21 : ಕಲ್ಕಾರು ಕುಟುಂಬಸ್ಥರ ಶ್ರೀ ನಾಗದೇವರು,  ಶ್ರೀ ಮಹಮ್ಮಾಯ ಅಮ್ಮನವರ, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಲ್ಕಾರು ಎಂಬಲ್ಲಿ ಕಲ್ಕಾರು ಕುಟುಂಬಸ್ಕರ ನೂತನವಾಗಿ ನಿರ್ಮಿಸಿರುವ ಚಿತ್ರಕೂಟದಲ್ಲಿ ನಾಗದೇವರು ದೈವಸ್ಥಾನಗಳಲ್ಲಿ ಶ್ರೀ ಮಹಮ್ಮಾಯ ಅಮ್ಮನವರು, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವದ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಏ.21 ಭಾನುವಾರ ಬೆಳಿಗ್ಗೆ 9.45 ರಿಂದ 10.25 ರ ಮಿಥುನ ಲಗ್ನದಲ್ಲಿ ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಗಳ ದಿವ್ಯ ಹಸ್ತದಲ್ಲಿ ಜರಗಲಿದೆ ಎಂದು ಕಲ್ಕಾರು ದೈವ ದೇವರುಗಳ ಕಾರ್ಯಕಾರಿ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಅವರು

ಏ.21 : ಕಲ್ಕಾರು ಕುಟುಂಬಸ್ಥರ ಶ್ರೀ ನಾಗದೇವರು,  ಶ್ರೀ ಮಹಮ್ಮಾಯ ಅಮ್ಮನವರ, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ Read More »

ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ | ಪೊಲೀಸರ ಮಧ್ಯೆ ಪ್ರವೇಶದಿಂದ ಪರಿಸ್ಥಿತಿ ತಿಳಿ

ಮಂಗಳೂರು : ಚುನಾವಣಾ ಪ್ರಚಾರ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನ ಉರ್ವ ಚಿಲಿಂಬಿ ಸಾಯಿಬಾಬ ಮಂದಿರದ ಬಳಿ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ  ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ಹೊಯ್ ಕೈ ಹಂತಕ್ಕೆ ತಲುಪಿದೆ ಎನ್ನಲಾಗಿದ್ದು, ರಾಮ ನವಮಿ ಉತ್ಸವ ನಡೆಯುತ್ತಿದ್ದ ಮಂದಿರದ ಹೊರ ಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಕಾಂಗ್ರೆಸ್

ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ | ಪೊಲೀಸರ ಮಧ್ಯೆ ಪ್ರವೇಶದಿಂದ ಪರಿಸ್ಥಿತಿ ತಿಳಿ Read More »

error: Content is protected !!
Scroll to Top