ದಕ್ಷಿಣ ಕನ್ನಡ

ಕುಕ್ಕೆ ಕ್ಷೇತ್ರದಲ್ಲಿ ವಾಹನ ಸವಾರರಿಗೆ  ಪಾರ್ಕಿಂಗ್ ಬದಲಾವಣೆ l ಹಲವು ರಸ್ತೆಗಳು ಒನ್ ವೇ

ಸುಬ್ರಹ್ಮಣ್ಯ : ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯದ ರಸ್ತೆ ಮಾರ್ಗಸೂಚಿ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್‌ ಠಾಣೆ ಹಾಗೂ ಇಲಾಖೆಗಳು, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಭೆ ನಡೆದು ಬೀದಿ ಬದಿ ಪಾರ್ಕಿಂಗ್ ನಿಷೇಧ, ಕಾಶಿಕಟ್ಟೆ- ಸವಾರಿ ಮಂಟಪ, ಬೈಪಾಸ್ ರಸ್ತೆ ಒನ್ ವೇ ಮಾಡಲು ನಿರ್ಣಯ ಅಂಗೀಕರಿಸಲಾಯಿತು. ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯ ಹರೀಶ್ ಇಂಜಾಡಿ ಮಾತನಾಡಿ, ಸಾರ್ವಜನಿಕರು ರಸ್ತೆ ಮಾರ್ಗಸೂಚಿ ನಿಯಮ ಪಾಲಿಸಬೇಕು. ಪಾರ್ಕಿಂಗ್ ನಿರ್ವಹಣೆಯನ್ನು ಸಂಬಂಧಿಸಿದವರು ಸಮರ್ಪಕವಾಗಿ […]

ಕುಕ್ಕೆ ಕ್ಷೇತ್ರದಲ್ಲಿ ವಾಹನ ಸವಾರರಿಗೆ  ಪಾರ್ಕಿಂಗ್ ಬದಲಾವಣೆ l ಹಲವು ರಸ್ತೆಗಳು ಒನ್ ವೇ Read More »

ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿ : ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ. ಬುಧವಾರ ರಾತ್ರಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸುಮಾರಿಗೆ ರಸ್ತೆ ಬದಿ ಮತ್ತೆ ಕಾಣಸಿಕ್ಕಿದೆ. ಈ ಹಿಂದೆ ರಸ್ತೆಯ ಅಂಚಿನಲ್ಲಿ ಪ್ರತ್ಯಕ್ಷವಾಗುತ್ತಿದ್ದ ಸಲಗ ಶುಕ್ರವಾರ ಘಾಟಿಯ ಮೂರನೇ ತಿರುವಿನ ರಸ್ತೆ ಬದಿ ಇರುವ ಅರಣ್ಯ ಇಲಾಖೆಯ ಔಷಧ ಸಸ್ಯಗಳ ಸಂರಕ್ಷಣ ವನದ ಗೇಟಿನ ಮುಂಭಾಗವೇ ವಿಹಾರ ಆರಂಭಿಸಿತ್ತು. ಆನೆ ಸುಮಾರು ಒಂದು ತಾಸಿಗಿಂತ ಅಧಿಕ

ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ Read More »

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯದ 28ನೇ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಯುವಕ ಸಂಘ, ಹಾಗೂ ಮಹಿಳಾ ಸಂಘಗಳ ನೇತೃತ್ವದಲ್ಲಿ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಸಂತೆಕಟ್ಟೆ ಶ್ರೀ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗೀರಿ ಸಂಸ್ಥಾನ ಮಠಾಧ್ಯಕ್ಷರಾದ ಶಕ್ತಿವಿಶಿಷ್ಟಾದೈತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ ಷ.ಬ್ರ. ಮರುಳಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ಆರ್ಶಿವಾದ ನೀಡಿದರು. ಸಮಾಜದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ, ಕೋಶಾಧಿಕಾರಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯದ 28ನೇ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಅಕ್ರಮ ಗಣಿಗಾರಿಕೆ ಪ್ರಕರಣ | ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆಂದು ತಾಲೂಕು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಬಂಧನವಾಗಿತ್ತು. ಅದೇ ದಿನ ರಾತ್ರಿ ಶಾಸಕ ಹರೀಶ್ ಪೂಂಜ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಂತೆ ಬೆಳಿಗ್ಗೆ ತನಕ ಠಾಣೆಯಲ್ಲಿದ್ದರು ಪ್ರಯೋಜನವಾಗದೇ ನಂತರದ ಬೆಳವಣಿಗೆಯಲ್ಲಿ ಪ್ರತಿಭಟನೆಗಳು ನಡೆದರು ಕಸ್ಟಡಿಗೆ ಪಡೆದಿದ್ದರು. ಇಂದು ಜಾಮೀನು ಮಂಜೂರುಗೊಂಡಿದೆ. ಶಶಿರಾಜ್ ಪರ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.

ಅಕ್ರಮ ಗಣಿಗಾರಿಕೆ ಪ್ರಕರಣ | ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು Read More »

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಮಟ್ಟದ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ  ಸಮಾರೋಪಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ವಹಿಸಿದ್ದರು. ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಸಿ. ರಾಮಚಂದ್ರ ಭಟ್,

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ Read More »

ಗೋಹತ್ಯೆ ಖಂಡಿಸಿ ವಿಹಿಂಪ, ಬಜರಂಗದಳ ವತಿಯಿಂದ ಪೊಲೀಸ್ ಠಾಣೆ, ಗೋ ಆಸ್ಪತ್ರೆ ಅಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಪೊಲೀಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಇಂದು ಮನವಿ ಮಾಡಲಾಯಿತು. ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ನಿಷೇಧದ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಉಪಧ್ಯಾಕ್ಷ ಗುರು ಬಂಟ್ವಾಳ, ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ

ಗೋಹತ್ಯೆ ಖಂಡಿಸಿ ವಿಹಿಂಪ, ಬಜರಂಗದಳ ವತಿಯಿಂದ ಪೊಲೀಸ್ ಠಾಣೆ, ಗೋ ಆಸ್ಪತ್ರೆ ಅಧಿಕಾರಿಗಳಿಗೆ ಮನವಿ Read More »

ಜಿಲ್ಲಾಧಿಕಾರಿ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಸಮಸ್ಯೆಗಳ ಕುರಿತು ಚರ್ಚೆ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಇಂದು ಭೇಟಿ ಮಾಡಿದರು. ಭೇಟಿ ಮಾಡಿದ ಅವರು, ಸುಳ್ಯ ಕ್ಷೇತ್ರದ ಹಲವೆಡೆ ಬಿ ಎಸ್‍ ಎನ್‍ ಎಲ್‍ ನೆಟ್ ವರ್ಕ್ ಸಮಸ್ಯೆಗಳಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಜತೆಗೆ ಉಚ್ಚಿಲ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಬಳಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಚರ್ಚಿಸಿದರು.

ಜಿಲ್ಲಾಧಿಕಾರಿ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಸಮಸ್ಯೆಗಳ ಕುರಿತು ಚರ್ಚೆ Read More »

ಚಾರ್ಮಾಡಿ ಘಾಟಿಯಲ್ಲಿ ಆನೆ ಪ್ರತ್ಯಕ್ಷ | ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 7 ಹಾಗೂ 8ನೇ ತಿರುವಿನಲ್ಲಿ ಆನೆಯೊಂದು ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ ಘಟನೆ ಇಂದು ಮುಂಜಾನೆ ನಡೆದಿದೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗ ಆನೆಯನ್ನು ಕಂಡು ತಕ್ಷಣ ಬಸ್ ನಿಲ್ಲಿಸಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್. ಕಳೆದ ಎರಡು ತಿಂಗಳಿನಿಂದ ಈ ಸಲಗ ಚಾರ್ಮಾಡಿಯಲ್ಲಿ ಸುತ್ತಾಡುತ್ತಿದ್ದು, ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಆನೆ ಪ್ರತ್ಯಕ್ಷ | ಟ್ರಾಫಿಕ್ ಜಾಮ್ Read More »

ವೃದ್ದೆಗೆ ಕಡಿದು ಸಾವಿಗೆ ಕಾರಣವಾದ ನಾಗರ ಹಾವು ಮತ್ತೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠದ ವೃದ್ದೆಗೆ ನಾಗರ ಹಾವು ಕಡಿದು ಮೃತರಾದ 10 ದಿನದ ಬಳಿಕ ಮತ್ತೆ ಅದೇ ಮನೆಯಲ್ಲಿ ನಾಗರ ಹಾವು ಪ್ರತ್ಯಕ್ಷವಾದ ಘಟನೆ ಹರಿಹರದಲ್ಲಿ ನಡೆದಿದೆ. ಜೂ.3 ರಂದು ಮಿತ್ತಮಜಲಿನ ದೇವಮ್ಮ(67) ರವರು ತಮ್ಮ ಮನೆಯಲ್ಲಿ ಕೋಳಿ ಕಾಪುವಿಗೆ ಕೈ ಹಾಕಿದ್ದ ವೇಳೆ ನಾಗರ ಹಾವು ಕಡಿತಕ್ಕೆ ತುತ್ತಾಗಿ ಆಸ್ಪತ್ರೆ ತಲುಪುವಷ್ಟರಲ್ಲಿ ದಾರಿ ಮದ್ಯೆ ಕೊನೆಯುಸಿರೆಳೆದಿದ್ದರು. ಬುಧವಾರ ಅದೇ ಮನೆಯಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ. ಇದೇ ಹಾವು ಕಚ್ಚಿ ದೇವಮ್ಮ ಅವರು ನಿಧಾನರಾಗಿರುವುದಾಗಿ

ವೃದ್ದೆಗೆ ಕಡಿದು ಸಾವಿಗೆ ಕಾರಣವಾದ ನಾಗರ ಹಾವು ಮತ್ತೆ ಪ್ರತ್ಯಕ್ಷ Read More »

ಅನ್ಯ ಕೋಮಿನ ವಿದ್ಯಾರ್ಥಿಗಳ ಜತೆ ಹಿಂದೂ ಯುವತಿ ಕಾರಿನಲ್ಲಿ ಸುತ್ತಾಟ | ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಮಂಗಳೂರು: ಹಿಂದೂ ಯುವತಿಯೊಬ್ಬಳು ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಸುತ್ತಾಟ ನಡೆಸುತ್ತಿದ್ದುದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಅನ್ಯಕೋಮಿನ ಯುವಕರು ಹಾಗೂ ಹಿಂದೂ ಯುವತಿಯಿದ್ದ ಐಬಿಎಂಡಬ್ಲ್ಯೂ ಕಾರು ಮುಕ್ಕ ಸಮೀಪ ಸ್ಕೂಲ್ ಬಸ್ ಗೆ ಡಿಕ್ಕಿಯಾಗಿದ್ದು, ಈ ವೇಳೆ ಬಸ್ ಚಾಲಕನ ಜೊತೆ ತಂಡ ಜಗಳವಾಡುತ್ತಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ತಂಡ ಅಲ್ಲಿಂದ ಎಸ್ಕೆಪ್ ಆಗಲು ಯತ್ನಿಸಿದೆ. ಈ ವೇಳೆ ಕಾರು ಕೈ ಕೊಟ್ಟಿದೆ ಎನ್ನಲಾಗಿದೆ. ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಂತೆ ಅನ್ಯಕೋಮಿನ ಜೋಡಿ ಎಂದು ಬೆಳಕಿಗೆ

ಅನ್ಯ ಕೋಮಿನ ವಿದ್ಯಾರ್ಥಿಗಳ ಜತೆ ಹಿಂದೂ ಯುವತಿ ಕಾರಿನಲ್ಲಿ ಸುತ್ತಾಟ | ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ Read More »

error: Content is protected !!
Scroll to Top