ದಕ್ಷಿಣ ಕನ್ನಡ

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿ | ದ.ಕ.ದಲ್ಲಿ 90 ಸಾವಿರ ಲೀ. ಮದ್ಯ ಅಧಿಕಾರಿಗಳ ವಶ

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ 90,443 ಲೀಟರ್ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ 1,95,47,179 ರೂ. ಮೌಲ್ಯದ ಮದ್ಯ ವಶಪಡಿಸಲಾಗಿದೆ. ಜತೆಗೆ 8,69,950 ರೂ. ಮೌಲ್ಯದ ಡ್ರಗ್ಸ್‍ ವಶಕ್ಕೆ ಪಡೆಯಲಾಗಿದೆ. 278 ಎಫ್‍.ಐ.ಆರ್‍. ದಾಖಲಾಗಿದೆ. ರಾಷ್ಟ್ರೀಯ ಕುಂದುಕೊರತೆ ನಿವಾರಣಾ ವ್ಯವಸ್ಥೆ ಮೂಲಕ ಜಿಲ್ಲೆಯಲ್ಲಿ 92 ದೂರುಗಳು ಬಂದಿದ್ದು ಅವುಗಳಲ್ಲಿ 90 ದೂರುಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿ | ದ.ಕ.ದಲ್ಲಿ 90 ಸಾವಿರ ಲೀ. ಮದ್ಯ ಅಧಿಕಾರಿಗಳ ವಶ Read More »

ಲೋಕಸಭೆ ಚುನಾವಣೆ : ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಯಲ್ಲಿ ಸಾಗಿಬಂದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ

ಲೋಕಸಭೆ ಚುನಾವಣೆ : ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ Read More »

ಮಹಿಳೆ ನೇಣು ಬಿಗಿದು ಆತ್ಮಹತ್ಯೆ  !

ವಿಟ್ಲ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ. ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸುಶೀಲಾ ಅವರ ಪತಿ ಮೂರು ತಿಂಗಳ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದಾದ ಬಳಿಕ ಸುಶೀಲಾ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದು, ತನ್ನ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ನೇಣು ಬಿಗಿದು ಆತ್ಮಹತ್ಯೆ  ! Read More »

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕಿರಣ್ ಬುಡ್ಲೆಗುತ್ತು, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ Read More »

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ

ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಮೊದಲು ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ Read More »

ಅಡ್ಯನಡ್ಕದಲ್ಲಿ ಹಲ್ಲೆ ಪ್ರಕರಣ: ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಅಡ್ಯನಡ್ಕದಲ್ಲಿ ಇತ್ತೀಚೆಗೆ ನಡೆದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ದೂರು ದಾಖಲಾಗಿದೆ. ಅಡ್ಯನಡ್ಕ ನಿವಾಸಿ ಮಹಮ್ಮದಾಲಿ ಎ. (36) ಎಂಬವರು ನೀಡಿದ ದೂರಿನಂತೆ ಗಣೇಶ್ ಎಂಬವರು ಮನೆಯ ಬಳಿ ಬಂದು ಹಣದ ವಿಚಾರದಲ್ಲಿ ತಕರಾರು ತೆಗೆದು ಅವ್ಯಾಚವಾಗಿ ನಿಂದಿಸಿ, ಕತ್ತಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದು, ಸ್ಥಳೀಯರು ಬಂದಾಗ ಪರಾರಿಯಾಗಿರುತ್ತಾನೆ ಎಂದು ಪ್ರಕರಣ ದಾಖಲಾಗಿದೆ. ಈ ನಡುವೆ ಗಣೇಶ್ ಅವರು ಮಹಮ್ಮದಾಲಿ ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆಂದು

ಅಡ್ಯನಡ್ಕದಲ್ಲಿ ಹಲ್ಲೆ ಪ್ರಕರಣ: ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಜಾಗೃತಿ ಅಭಿಯಾನ

ಕುಂತೂರು: ಚುನಾವಣಾ ಆಯೋಗವು ಸಮಾಜದ ಪ್ರತಿಯೊಂದು ವರ್ಗವು ಮತ ಚಲಾಯಿಸಬೇಕು ಎಂಬ ಗುರಿಯನ್ನು ಹೊಂದಿದೆ. ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕು. ಭಾರತದ ಬೆನ್ನೆಲುಬಾಗಿರುವ ಯುವ ಜನಾಂಗವು ಕಡ್ಡಾಯವಾಗಿ ಮತದಾನ ಮಾಡುವ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನು ನಿರ್ಮಿಸಬೇಕು ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಕಡಬ ತಾಲೂಕಿನ ಕುಂತೂರಿನಲ್ಲಿರುವ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಜಾಗೃತಿ ಅಭಿಯಾನ Read More »

ಅನಾರೋಗ್ಯದಿಂದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು !

ಸುಳ್ಯ: ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರೊಬ್ಬರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದಲ್ಲಿ ನಡೆದಿದೆ. ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟವರು. ಹೊಟ್ಟೆನೋವಿನಿಂದ ಬಳಲಿದ್ದ ಅವರನ್ನು ಕಾಣಿಯೂರು ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತರು ಐವತ್ತೊಕ್ಲು ಗ್ರಾಮದ ಒಂದನೇ ವಾರ್ಡ್‍ ಬೂತ್ ಅಧ್ಯಕ್ಷರಾಗಿ, ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ಅನಾರೋಗ್ಯದಿಂದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ! Read More »

ಒಡಿಯೂರು ಶ್ರೀಗಳಿಂದ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಬಳಿಕ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಒಡಿಯೂರು ಶ್ರೀಗಳಿಂದ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ Read More »

ಸ್ಪೋಟಕ ಬಳಸಿ ಕಲ್ಲು ಸ್ಪೋಟ | ಮನೆಗೆ ಹಾನಿ : ಠಾಣೆಗೆ ದೂರು

ಕಡಬ: ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಗಳಿಗೆ ಹಾನಿಯುಂಟಾಗುವುದರ ಜತೆ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಸ್ಪೋಟಕ ನಡೆಸುವವರ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ ನಿವಾಸಿ ಆನಂದ ಗೌಡ ಎಂಬವರು ಈ ಕುರಿತು ಠಾಣೆಗೆ ದೂರು ನೀಡಿದ್ದು, ಸಮೀಪದ ನಿವಾಸಿ ದಯಾನಂದ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನೆಕಲ್ಲು ಗ್ರಾಮದ ಅಜಿರುಪೊಲಿ ಎಂಬಲ್ಲಿ ಕಳೆದ ಎರಡು ತಿಂಗಳಿನಿಂದ ಅಕ್ರಮ ಸ್ಪೋಟಕಗಳನ್ನು ಬಳಸಿ ಕಲ್ಲುಗಳನ್ನು ಒಡೆದು ಸೈಜುಕಲ್ಲುಗಳನ್ನಾಗಿ

ಸ್ಪೋಟಕ ಬಳಸಿ ಕಲ್ಲು ಸ್ಪೋಟ | ಮನೆಗೆ ಹಾನಿ : ಠಾಣೆಗೆ ದೂರು Read More »

error: Content is protected !!
Scroll to Top