ದಕ್ಷಿಣ ಕನ್ನಡ

ನಿನ್ನೆ ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ / ಮಹಿಳೆ ಪೊಲೀಸರ ವಶಕ್ಕೆ! ವಿಚಾರಣೆ ವೇಳೆ ರಾಜಸ್ಥಾನ್ ಮೂಲ ಎಂಬುದು ಬಹಿರಂಗ

ಸುಳ್ಯ:  ಸುಳ್ಯ ತಾಲೂಕಿನ ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ನಿನ್ನೆ ಪತ್ತೆಯಾಗಿದ್ದು ಈಕೆ ನಕ್ಸಲ್ ಗುಂಪಿಗೆ ಸೇರಿದವರು ಎಂದು ಸುದ್ದಿಯಾಗಿತ್ತು. ಆದರೆ ಈಕೆ ನಕ್ಸಲ್ ಗುಂಪಿಗೆ ಸೇರಿದವರಲ್ಲ ಬದಲಾಗಿ ಈಕೆ ರಾಜಸ್ಥಾನ್ ಮೂಲದವಳಾಗಿದ್ದು ಆಕೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರ್ಪಡೆಗೊಳಿಸಲಾಗುವುದೆಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.              ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಎಂಬ ಸುದ್ದಿ ತಿಳಿದ ಎ.ಎನ್.ಎಫ್ […]

ನಿನ್ನೆ ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ / ಮಹಿಳೆ ಪೊಲೀಸರ ವಶಕ್ಕೆ! ವಿಚಾರಣೆ ವೇಳೆ ರಾಜಸ್ಥಾನ್ ಮೂಲ ಎಂಬುದು ಬಹಿರಂಗ Read More »

ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಸಮುದಾಯದಿಂದ ಬಹಿಷ್ಕಾರ | ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತ ಗ್ರೆಗೊರಿ ಮೊಂಥೆರೊ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆದ ಚರ್ಚ್‌ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯ ಬಹಿಷ್ಕರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಹಲ್ಲೆಗೊಳಗಾದ ಗ್ರೆಗೊರಿ ಮೊಂಥೆರೊ ಹಾಗೂ ಫಿಲೋಮಿನಾ ಕೊಯೆಲೊ ಚರ್ಚ್ ಪಾದ್ರಿ ಫಾದರ್ ನೆಲ್ಸನ್ ಒಲಿವೆರಾ, ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದ ಕೂಡಲೇ ಕಿರುಕುಳ ಆರಂಭವಾಗಿದೆ. ಮೊದಲಿಗೆ ಚರ್ಚ್‌ಗೆ ಸಂಪರ್ಕ ಹೊಂದಿದ ಎಲ್ಲ ವಾಟ್ಸಾಪ್ ಗುಂಪುಗಳಿಂದ ನಮ್ಮನ್ನು ತೆಗೆದುಹಾಕಲಾಯಿತು. ನಂತರ

ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಸಮುದಾಯದಿಂದ ಬಹಿಷ್ಕಾರ | ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತ ಗ್ರೆಗೊರಿ ಮೊಂಥೆರೊ Read More »

ಶಾಂತಿಯುತ ಮತದಾನ ಹಿನ್ನಲೆ | ದ.ಕ.ಜಿಲ್ಲೆಯಿಂದ 13 ಮಂದಿ ಗಡಿಪಾರು, ನಾಲ್ವರ ಮೇಲೆ ಗೂಂಡಾ ಕಾಯ್ದೆ

ಮಂಗಳೂರು: ಲೋಕಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದ್ದು, ಮತ್ತೆ 13 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಉಳ್ಳಾಲ ಅಂಬ್ಲಮೊಗರು ನಿವಾಸಿ ಹೇಮಚಂದ್ರ ಅಲಿಯಾಸ್ ಪ್ರಜ್ವಲ್ ಪೂಜಾರಿ (29), ಉಳ್ಳಾಲ ಕೈರಂಗಳ ನಿವಾಸಿ ನವಾಜ್ ಅಲಿಯಾಸ್ (36), ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (26) ಹಾಗೂ ಬೋಳೂರು ನಿವಾಸಿ ಚರಣ್ ಶೇಟ್ ಅಲಿಯಾಸ್ ಚರಣ್ ಪಾಲ್ (39) ಎಂಬವರ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಈ ನಾಲ್ವರು

ಶಾಂತಿಯುತ ಮತದಾನ ಹಿನ್ನಲೆ | ದ.ಕ.ಜಿಲ್ಲೆಯಿಂದ 13 ಮಂದಿ ಗಡಿಪಾರು, ನಾಲ್ವರ ಮೇಲೆ ಗೂಂಡಾ ಕಾಯ್ದೆ Read More »

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ  ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. Read More »

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಇಂದು ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಉದ್ಘಾಟನೆ Read More »

ಡಿ.ಕೆ.ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಇನ್ನೇನು ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಯುದ್ಧ ಆರಂಭಿಸುವ ಮೊದಲು ಶ್ರೀ ಮಂಜುನಾಥ, ಅಣ್ಣಪ್ಪ ಸ್ವಾಮಿಯ ದರ್ಶನ ಪಡೆದುಕೊಳ್ಳುವ ಪದ್ಧತಿ ಇಟ್ಟುಕೊಂಡಿದ್ದೇನೆ ಎಂದು ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಇಂದು ಧರ್ಮಸ್ಥಳ ಭೇಟಿ ನೀಡಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಈ ವಿಚಾರ ಹೇಳಿದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪಸ್ಥಿತರಿದ್ದರು.

ಡಿ.ಕೆ.ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ Read More »

ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ : ಇಬ್ಬರು ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಸುರತ್ಕಲ್ ಹೆದ್ದಾರಿ 66 ರಲ್ಲಿ ನಡೆದಿದೆ. ಸುರತ್ಕಲ್ ಕಾನ ನಿವಾಸಿ ನಿಯಾಝ್‍ (47) ಹಾಗೂ ಕುಳಾಯಿ ವಿದ್ಯಾನಗರ ನಿವಾಸಿ ನೋನಯ್ಯ ಮೃತಪಟ್ಟ ದ್ವಿಚಕ್ರ ವಾಹನ ಸವಾರರು. ಇಬ್ಬರೂ ಬೀಡಿ ಕಂಟ್ರಾಕ್ಟ್ ರ್ ಕೆಲಸ ಮಾಡುತ್ತಿದ್ದು, ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದಾಗ ಜೀಪ್‍ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ : ಇಬ್ಬರು ಮೃತ್ಯು Read More »

ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು, ಇವತ್ತಿನ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಅವರೊಂದಿಗಿದ್ದರು. ಬೆಳ್ತಂಗಡಿ ಮಂಡಲದ ನಾರಾವಿ ಮತ್ತು ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ

ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ Read More »

ಕೂಜಿಮಲೆ ನಕ್ಸಲರ ತಂಡ ಭೇಟಿ ಮಾಸುವ ಮುನ್ನ ಮತ್ತೆ ಐನೆಕಿದು ಭೇಟಿ ನೀಡಿದ ತಂಡ

ಸುಬ್ರಹ್ಮಣ್ಯ: ಮೂರು ದಿನಗಳ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ನಕ್ಸಲರು ಭೇಟಿ ನೀಡಿದ ಬೆನ್ನಲ್ಲೇ ಶನಿವಾರ ಮತ್ತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರ ಸಂಜೆ 6 ಗಂಟೆ ಸಮಯಕ್ಕೆ ಶಂಕಿತರ ತಂಡ ಐನೆಕಿದು ಗ್ರಾಮದ ಅರಣ್ಯದಂಚಿನ ತೋಟದ ಮೂಲಕ ಆಗಮಿಸಿತ್ತು. ತೋಟದಲ್ಲಿದ್ದ ಕೆಲಸದವರ ಶೆಡ್‌ಗೆ ಭೇಟಿ ನೀಡಿದ ವೇಳೆ ಕೆಲಸದಾಳು ಶೆಡ್‌ನ‌ ಬಾಗಿಲು ಹಾಕಿದ್ದು,

ಕೂಜಿಮಲೆ ನಕ್ಸಲರ ತಂಡ ಭೇಟಿ ಮಾಸುವ ಮುನ್ನ ಮತ್ತೆ ಐನೆಕಿದು ಭೇಟಿ ನೀಡಿದ ತಂಡ Read More »

ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ | ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜು

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರವಾಹನಗಳ ಮೇಲೆ ಘನಗಾತ್ರದ  ಲಾರಿಯೊಂದು ಹರಿದು ಬೈಕಗಳು ಅಪ್ಪಚ್ಚಿಯಾದ ಘಟನೆ ಬೆಂಜನಪದವು ಸಮೀಪದ ಕೊಡ್ಮಾನ್ ಕೋಡಿ ಎಂಬಲ್ಲಿ ನಡೆದಿದೆ. ಬೆಂಜನಪದವು ಗುಡ್ಡವೊಂದಕ್ಕೆ ಬಂದಿದ್ದ ಕಾರೊಂದು ಚಾಲಕನ ಎಡವಟ್ಟಿನಿಂದ ಗುಂಡಿಗೆ ಬಿದ್ದಿತ್ತು. ಗುಂಡಿಗೆ ಬಿದ್ದ ಕಾರನ್ನು ಎತ್ತಿ ಮೇಲೆಕ್ಕೆ ತರುವ ಉದ್ದೇಶದಿಂದ ಕಾರು ಮಾಲಕನಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಎರಡು ಬೈಕ್ ಗಳಲ್ಲಿ ಬಂದ ಯುವಕರು ಬೈಕನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು. ಕಾರುನ್ನು ಎತ್ತಲು ಹೋದ ವೇಳೆ ಬೆಂಜನಪದವು ಕಡೆಯಿಂದ ಮಾರಿಪಳ್ಳ

ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ | ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜು Read More »

error: Content is protected !!
Scroll to Top