ದಕ್ಷಿಣ ಕನ್ನಡ

ಲೋಕಸಭಾ ಚುನಾವಣೆ | ಬಿಜೆಪಿಯ ಎರಡಣೆ ಪಟ್ಟಿ ಬಿಡುಗಡೆ | ದ.ಕ.ಜಿಲ್ಲೆಯಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಟಿಕೇಟ್

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಟಿಕೇಟ್ ನೀಡಲಾಗಿದೆ. ದ.ಕ.ದಿಂದ ನಳಿನ್ ಕುಮಾರ್ ಕಟೀಲ್‍ ಅವರಿಗೆ ಅವಕಾಶ ಕೈತಪ್ಪಿದ್ದು,  ಉಡುಪಿಯಿಂದ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರು ಉತ್ತರದಿಂದ ಡಿ.ವಿ.ಸದಾನಂದ ಗೌಡರಿಗೆ ಟಿಕೇಟ್ ಕೈತಪ್ಪಿದ್ದು ಈ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ನೀಡಲಾಗಿದೆ. ಮೈಸೂರಿನಿಂದ ಯದುವೀರ್ ಅವರಿಗೆ ಅವಕಾಶ ನೀಡಲಾಗಿದ್ದು, ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡಿಲ್ಲ.

ಲೋಕಸಭಾ ಚುನಾವಣೆ | ಬಿಜೆಪಿಯ ಎರಡಣೆ ಪಟ್ಟಿ ಬಿಡುಗಡೆ | ದ.ಕ.ಜಿಲ್ಲೆಯಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಟಿಕೇಟ್ Read More »

ಲೋಕಸಭೆ ಚುನಾವಣೆ | ಜಿಲ್ಲಾಧಿಕಾರಿಯಿಂದ ದ.ಕ. ಜಿಲ್ಲಾ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳ ಪರಿಶೀಲನೆ

ಮಂಗಳೂರು : ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್  ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್‍.ಐ.ಟಿ.ಕೆ. ಇಂಜಿನಿಯರಿಂಗ್‍ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆ | ಜಿಲ್ಲಾಧಿಕಾರಿಯಿಂದ ದ.ಕ. ಜಿಲ್ಲಾ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳ ಪರಿಶೀಲನೆ Read More »

ಶಿರಾಡಿ ಘಾಟ್‍ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ | ರಸ್ತೆ ಸಂಚಾರ ಬಂದ್ | ಬದಲಿ ರಸ್ತೆಯಲ್ಲಿ ಚಲಿಸುವಂತೆ ವಾಹನ ಸವಾರರಿಗೆ ಸೂಚನೆ

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿ ಶಿರಾಡಿ ಘಾಟ್ ಎನ್‍ಎಚ್‍ -75 ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಶಿರಾಡಿ ಘಾಟ್‍ ರಸ್ತೆಯ ಡಬಲ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ನೂರಾರು ವಾಹನಗಳು ನಿಂತಲ್ಲೇ ನಿಂತಿವೆ. ಘಟನೆಯಿಂದಾಗಿ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಪೊಲೀಸರು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಮಂಗಳೂರಿನ ಎಂ.ಆರ್‍.ಪಿ.ಎಲ್‍ ನಿಂದ ತಜ್ಞರ ತಂಡ

ಶಿರಾಡಿ ಘಾಟ್‍ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ | ರಸ್ತೆ ಸಂಚಾರ ಬಂದ್ | ಬದಲಿ ರಸ್ತೆಯಲ್ಲಿ ಚಲಿಸುವಂತೆ ವಾಹನ ಸವಾರರಿಗೆ ಸೂಚನೆ Read More »

ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ಳಾರೆ ನಿವಾಸಿ ಲಕ್ಷ್ಮೀಕಾಂತ ಹೆಗ್ಡೆಯವರ ಪತ್ನಿ ವೀಣಾ ಆತ್ಮಹತ್ಯೆಗೆ ಯತ್ನಿಸಿದವರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದರು. ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಬಳಿಕ ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ

ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ Read More »

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಬಂಟ್ವಾಳ : ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಇಂದು ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಯುವಕ. ಇಂದು ಮುಂಜಾನೆ 4.30 ರ ಹೊತ್ತಿಗೆ ರಾತ್ರಿ ಪಾಳಿ ಮುಗಿಸಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‍ನಲ್ಲಿ ತೆರಳುತ್ತಿದ್ದಾಗ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೆಲ್ಕಾರ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿದ್ದಾರೆ. ಕಿರಣ್ ಬುಡ್ಲೆಗುತ್ತು ಅವರು ದ.ಕ. ಜಿಲ್ಲಾ ಕಾಂಗ್ರೆಸ್‍ನಿಂದ ಸಂಸದ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು, ಒಕ್ಕಲಿಗ ಸಮುದಾಯದ ಯುವ ನಾಯಕರೂ ಆಗಿದ್ದಾರೆ. ಡಿಕೆಶಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿಯಲ್ಲಿದ್ದುಕೊಂಡು ಹಲವಾರು ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಒಕ್ಕಲಿಗ ಸಮುದಾಯದ ಜತೆಗೆ ಜಿಲ್ಲೆಯ ಗಮನ ಸೆಳೆದಿದ್ದರು. ದಕ್ಷಿಣ ಕನ್ನಡದ ಬಹು ಸಂಖ್ಯಾತ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು Read More »

ಕಡಬ ಕಾಲೇಜಿನಲ್ಲಿ ಆ್ಯಸಿಡ್ ದಾಳಿ | ಇನ್ನಿಬ್ಬರು ಪೊಲೀಸ್ ವಶಕ್ಕೆ

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ತಂಡ ತಮಿಳುನಾಡು, ಎರ್ನಾಕುಲಂ ಮತ್ತಿತರ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದ್ದು, ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಆರೋಪಿ ಕೇರಳ ಮೂಲದ ಅಬಿನ್ ಎಂಬಾತನನ್ನು ಬಂಧಿಸಲಾಗಿದ್ದು, ಆತನಿಗೆ ಸಮವಸ್ತ್ರ ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆ್ಯಸಿಡ್ ನೀಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಕಡಬ ಕಾಲೇಜಿನಲ್ಲಿ ಆ್ಯಸಿಡ್ ದಾಳಿ | ಇನ್ನಿಬ್ಬರು ಪೊಲೀಸ್ ವಶಕ್ಕೆ Read More »

ನೇಣು ಬಿಗಿದು ಆತ್ಮಹತ್ಯೆ !

ಕಡಬ: ತಾಲೂಕಿನ ಏಣಿತ್ತಡ್ಕದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಏಣಿತ್ತಡ್ಕ ದಿ.ಈಶ್ವರ ನಾಯ್ಕರ ಪುತ್ರ ಉಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಮಧ್ಯಾಹ್ನ ಊಟ ಮಾಡಿ ಮನೆಯಿಂದ ಹೊರ ಹೋದವರು ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಅವರ ತಾಯಿ ತೋಟಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಉಮೇಶ್ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ಆತ್ಮಹತ್ಯೆ ! Read More »

ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ, ಚಾರ- ಹೆಬ್ರಿ ಇದರ ಸಂಯೋಜನೆಯಲ್ಲಿ ಬೆಳ್ತಂಗಡಿ ತಾಲೂಕಿನ ರುದ್ರಗಿರಿ ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಶಿವಭಕ್ತ ಪುರುಷಮೃಗ ತಾಳಮದ್ದಳೆ ಜರಗಿತು. ಭಾಗವತರಾಗಿ ಶ್ರೀಮತಿ ಅಮೃತ ಅಡಿಗ, ಹಿಮ್ಮೇಳನದಲ್ಲಿ ಪದ್ಯಾಣ ಶಂಕರ ನಾರಾಯಣ ಭಟ್ ಮತ್ತು ಪದ್ಯಾಣ ಜಯರಾಮ ಭಟ್ ಅರ್ಥಧಾರಿಗಳಾಗಿ ನಾ. ಕಾರಂತ ಪೆರಾಜೆ, ವಿದ್ವಾನ್ ಡಾ. ವಿನಾಯಕ ಭಟ್ ಗಾಳಿಮನೆ, ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ವಾನ್ ಕೇಕಣಾಜೆ ಕೇಶವ ಭಟ್, ಚಾರ ಪ್ರದೀಪ್ ಹೆಬ್ಬಾರ್ ಭಾಗವಹಿಸಿದ್ದರು.

ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ತಾಳಮದ್ದಳೆ Read More »

ಕಾನೂನು ಬಾಹಿರ ಆಟೋ ಚಾಲನೆ | ದಂಡ ವಿಧಿಸಿದ ಪೊಲೀಸರು | ಚಾಲಕನಿಂದ ಸರಕಾರಿ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ

ಬಂಟ್ವಾಳ: ಆಟೋರಿಕ್ಷಾ ಚಲಾಯಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದ್ದಾರೆ. ಈ ಕಾರಣಕ್ಕೆ ಆವೇಶಕ್ಕೊಳಗಾದ ಆಟೋ ಚಾಲಕ, ಟ್ರಾಫಿಕ್ ಎಸ್.ಐ. ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ‌ಕೈಕಂಬದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಈತ ಕಾನೂನುಬಾಹಿರವಾಗಿ ಯೂನಿಫಾರ್ಮ್‍ ಹಾಕದೆ, ಮೊಬೈಲ್‍ನಲ್ಲಿ ಮಾತನಾಡಿಕೊಂಡು ಆಟೋ ಓಡಿಸುತ್ತಿದ್ದ. ತಕ್ಷಣ ಪೊಲೀಸರು ಈತನನ್ನು ತಡೆಹಿಡಿದು ಎರಡು ಸಾವಿರ

ಕಾನೂನು ಬಾಹಿರ ಆಟೋ ಚಾಲನೆ | ದಂಡ ವಿಧಿಸಿದ ಪೊಲೀಸರು | ಚಾಲಕನಿಂದ ಸರಕಾರಿ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ Read More »

error: Content is protected !!
Scroll to Top