ಹೃದಯಾಘಾತದಿಂದ ಯುವಕ ಉದಯ ಮೃತ್ಯು !
ಬಂಟ್ವಾಳ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಉದಯ (36) ಮೃತಪಟ್ಟ ಯುವಕ ಉದಯ ಅವರು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಗ್ರಂಥಪಾಲಕನಾಗಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಭಾನುವಾರ ರಾತ್ರಿ ಊಟ ಮಾಡಿ ಮಲಗಿದವರನ್ನು ಇಂದು ಬೆಳಿಗ್ಗೆ ಮನೆಯರು ಎಬ್ಬಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಆಸ್ಪತ್ರೆಗೆ ಕರೆತಂದರು. ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೃದಯಾಘಾತದಿಂದ ಯುವಕ ಉದಯ ಮೃತ್ಯು ! Read More »










