ದಕ್ಷಿಣ ಕನ್ನಡ

ರಾಜ್ಯ ಕಾಂಗ್ರೇಸ್ ಸರಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ಬೃಹತ್ ಪ್ರತಿಭಟನೆ

ಬಂಟ್ವಾಳ: ರಾಜ್ಯ ಕಾಂಗ್ರೇಸ್ ಸರಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು, ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿ ಅಶಾಂತಿಯನ್ನು ಸೃಷ್ಟಿ […]

ರಾಜ್ಯ ಕಾಂಗ್ರೇಸ್ ಸರಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ಬೃಹತ್ ಪ್ರತಿಭಟನೆ Read More »

ಸುಳ್ಯ ಲಾರಿ ಚಾಲಕ ಇಸಾಕ್‍ ಆತ್ಮಹತ್ಯೆ !

ಸುಳ್ಯ: ವ್ಯಕ್ತಿಯೊಬ್ಬರು ಸುಳ್ಯದ ರೆಸಿಡೆನ್ಸಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಪೈಚಾರ್ ನಿವಾಸಿ ಲಾರಿ ಚಾಲಕ ಇಸಾಕ್‍ ಆತ್ಮಹತ್ಯೆ ಮಾಡಿಕೊಂಡವರು. ಸುಳ್ಯ ಜೂನಿಯರ್ ಕಾಲೇಜು ರಸ್ತೆ ಬಳಿ ಇರುವ ಸದರ್ನ್ ರೆಸಿಡೆನ್ಸಿಯಲ್ಲಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ಲಾರಿ ಚಾಲಕ ಇಸಾಕ್‍ ಆತ್ಮಹತ್ಯೆ ! Read More »

ಈ ಬಾರಿ ದ.ಕ.ಜಿಲ್ಲೆಯಿಂದ ಲೋಕಸಭಾ ಟಿಕೇಟ್ ಒಕ್ಕಲಿಗ ಸಮುದಾಯದ  ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತುಗೆ | ಕಿರಣ್ ಬುಡ್ಲೆಗುತ್ತು ಹೆಸರು ಮುಂಚೂಣಿಯಲ್ಲಿ

ಮಂಗಳೂರು : ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ ಮೂಲದ ಯುವ ನಾಯಕ ಕಿರಣ್ ಬುಡ್ಲೆಗುತ್ತು ಅವರಿಗೆ ಲೋಕಸಭಾ ಟಿಕೇಟ್ ನೀಡುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಡಿಕೆಶಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತು ವಿಗೆ ಹೈಕಮಾಂಡ್ ಕೃಪಾಕಟಾಕ್ಷ ತೋರಿದೆ ಎಂಬುದು ಬಹಿರಂಗವಾಗಿದೆ. ಉಳಿದ ಆಕಾಂಕ್ಷಿಗಳಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಪದ್ಮರಾಜ್ ಈ ಮೂವರ ನಡುವೆ ಕಿರಣ್ ಬುಡ್ಲೆಗುತ್ತು ಹೆಸರು ಮುಂಚೂಣಿಯಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಿರಣ್

ಈ ಬಾರಿ ದ.ಕ.ಜಿಲ್ಲೆಯಿಂದ ಲೋಕಸಭಾ ಟಿಕೇಟ್ ಒಕ್ಕಲಿಗ ಸಮುದಾಯದ  ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತುಗೆ | ಕಿರಣ್ ಬುಡ್ಲೆಗುತ್ತು ಹೆಸರು ಮುಂಚೂಣಿಯಲ್ಲಿ Read More »

ಅಪರಿಚಿತನಿಂದ ಆ್ಯಸಿಡ್ ದಾಳಿ  | ಮೂವರು ವಿದ್ಯಾರ್ಥಿನಿಯರು ಗಂಭೀರ

ಕಡಬ: ಅಪರಿಚಿತ ವ್ಯಕ್ತಿಯೋರ್ವ ಆ್ಯಸಿಡ್ ಎರಚಿದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಂಭಿರ ಗಾಯಗೊಂಡ ಘಟನೆ ಕಡಬ ಸರಕಾರಿ ಕಾಲೇಜು ಆವರಣದಲ್ಲಿ ನಡೆಯಿತು. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲಿನ ಸಿಬಿ, ಅರ್ಚನ, ಅಮೃತ ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಅಬೀನ್ ರನ್ನು ಪೊಲೀಸ್‌ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಅಪರಿಚಿತನಿಂದ ಆ್ಯಸಿಡ್ ದಾಳಿ  | ಮೂವರು ವಿದ್ಯಾರ್ಥಿನಿಯರು ಗಂಭೀರ Read More »

ಯುವತಿ ನೇಣು ಬಿಗಿದು ಆತ್ಮಹತ್ಯೆ !

ಕಾಣಿಯೂರು: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅನಿಲ ಮನೆಯ ಪದ್ಮಯ್ಯ ಗೌಡರ ಪುತ್ರಿ ದಿವ್ಯಾಶ್ರೀ (26) ಆತ್ಮಹತ್ಯೆ ಮಾಡಿಕೊಂಡವರು. ಅಪಪ್ರಚಾರಕ್ಕೆ ಮನನೊಂದು ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಯುವತಿ ಮೃತಪಟ್ಟರೆನ್ನಲಾಗಿದೆ. ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

ಯುವತಿ ನೇಣು ಬಿಗಿದು ಆತ್ಮಹತ್ಯೆ ! Read More »

ಶ್ರೀ ಆದಿಚುಂಚನಗಿರಿ ಮಠಕ್ಕೆ ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಮಂಗಳೂರು: ದ.ಕ.ಜಿಲ್ಲೆ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಸಂಘದ ಪದಾಧಿಕಾರಿಗಳನ್ನು ಶ್ರೀಗಳು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಡಾ. ಧರ್ಮ ಪಾಲನಾಥ ಸ್ವಾಮೀಜಿಯವರು ಉಪಸ್ಥಿತರಿದ್ದರು.

ಶ್ರೀ ಆದಿಚುಂಚನಗಿರಿ ಮಠಕ್ಕೆ ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

ರಿಕ್ಷಾ ಪಲ್ಟಿ : ಚಾಲಕ ಮೃತ್ಯು

ಸುಬ್ರಹ್ಮಣ್ಯ: ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ. ರಿಕ್ಷಾ ಚಾಲಕ ವಿವೇಕಾನಂದ ದೇವರಗದ್ದೆ ಮೃತಪಟ್ಟವರು. ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಅವರು ಭಾನುವಾರ ರಾತ್ರಿ ಗಂಟೆ 9ರ ಸುಮಾರಿಗೆ ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿತ್ತು. ಚಾಲಕ ವಿವೇಕಾನಂದ ಅವರು ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು

ರಿಕ್ಷಾ ಪಲ್ಟಿ : ಚಾಲಕ ಮೃತ್ಯು Read More »

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಆಡಳಿತ ಮಂಡಳಿಗೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ | ಸತತ ಮೂರನೇ ಬಾರಿಗೆ ಆಯ್ಕೆ

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಆಡಳಿತ ಮಂಡಳಿಗೆ ಪುತ್ತೂರಿನಿಂದ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಒಟ್ಟು 16 ಸ್ಥಾನಗಳಿಗೂ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ. ಈ ಪೈಕಿ 15 ಮಂದಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಉಳಿದಂತೆ ಸುಳ್ಯದಿಂದ ಎಸ್‍.ಎನ್‍.ಮನ್ಮಥ, ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ.ರಾಜಾರಾಮ್ ಭಟ್, ಮಂಗಳೂರಿನಿಂದ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯಕುಮಾರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್ ಶೆಟ್ಟಿ,

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಆಡಳಿತ ಮಂಡಳಿಗೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ | ಸತತ ಮೂರನೇ ಬಾರಿಗೆ ಆಯ್ಕೆ Read More »

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ “ಕಂಬಳ”ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ನಡೆದ  ಹದಿಮೂರನೇ ವರ್ಷದ ಹೊನಲು ಬೆಳಕಿನ “ಮೂಡೂರು- ಪಡೂರು” ಜೋಡುಕರೆ ಬಯಲು ಕಂಬಳವನ್ನು ವೀಕ್ಷಿಸಲು ಕಾಲೇಜಿನ  ಪ್ರಥಮ ಬಿ ಎ,  ಬಿ ಎಸ್ ಡಬ್ಲ್ಯೂ 

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ Read More »

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಕ್ತ ಅವಕಾಶ | ಯಾವ ಕಾರಣಕ್ಕೆ ಸೇರ್ಪಡೆಗೊಳ್ಳುತ್ತಿಲ ಎಂಬುದಕ್ಕೆ ಅವರೇ ಉತ್ತರ ನೀಡಬೇಕು | ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು : ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದ್ದು, ಆಹ್ವಾನ ನೀಡಲಾಗಿದೆ. ಆದರೆ ಯಾವ ಕಾರಣಕ್ಕೆ ಬರುತ್ತಿಲ್ಲ ಎಂದು ಅವರೇ ಉತ್ತರ ಕೊಡಬೇಕು. ಇಂದಿಗೂ ನಾವು ಮಾತುಕತೆ ಹಂತದಲ್ಲಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ಶನಿವಾರ ಮಂಗಳೂರು ಬಿಜೆಪಿ ಚುನಾವಣಾ ಕಚೇರಿಯಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಅರುಣ್‌ ಕುಮಾ‌ರ್ ಪುತ್ತಿಲ ಅವರ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಕುರಿತು ಸತ್ಯ ತಿಳಿಸಲು ಪತ್ರಿಕಾಗೋಷ್ಠಿ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಕ್ತ ಅವಕಾಶ | ಯಾವ ಕಾರಣಕ್ಕೆ ಸೇರ್ಪಡೆಗೊಳ್ಳುತ್ತಿಲ ಎಂಬುದಕ್ಕೆ ಅವರೇ ಉತ್ತರ ನೀಡಬೇಕು | ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ Read More »

error: Content is protected !!
Scroll to Top