ಜಡ್ಜ್ ಹುದ್ದೆಗೇರಿದ ಮಂಗಳೂರಿನ ವಕೀಲೆ ಗೀತಾ ಡಿ. | 2023 ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆ
ಮಂಗಳೂರು: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟಿಸ್ ಮಾಡುತ್ತಿದ್ದ ಗೀತಾ ಡಿ. 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ. ಮೂಲತಃ ತುಮಕೂರು ಜಿಲ್ಲೆ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು. […]










