ದಕ್ಷಿಣ ಕನ್ನಡ

ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

ಸುಳ್ಯ : ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂಬವರಿಗೆ ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದರೆನ್ನಲಾಗಿದೆ.ಸ್ಥಳಕ್ಕೆ ಆಗಮಿಸಿದ ಪ್ರಗತಿ ಅಂಬ್ಯುಲೆನ್ಸ್ ಚಾಲಕ ಅಚ್ಚು ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಗೋಪಾಲ ಅವರು ಜಟ್ಟಿಪಳ್ಳ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಮೇಸ್ತ್ರಿ ವೃತಿಯನ್ನು ಮಾಡುತ್ತಿದ್ದರು.

ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು Read More »

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಚಾಲನೆ ದೊರಕಿದೆ. ಏ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ ನಡೆಯಲಿದೆ. ದ.ಕ.ದಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ. 40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರು ಸಹಿತ 8,010 ಮಂದಿಯ ಮನೆಮನೆ ಭೇಟಿ ಮಾಡಿ ಅಂಚೆ ಮತಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಲಾಗಿದೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ Read More »

ಕಾರಿಗೆ ಕಂಟೈನರ್‌ ಡಿಕ್ಕಿ : ಕಾರು ಜಖಂ

ಸುಳ್ಯ: ಗಾಂಧಿನಗರ ಮಸೀದಿಯ ಮುಂಭಾಗ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿರುವುದಾಗಿ ವರದಿಯಾಗಿದೆ. ಏ.16ರಂದು ಮುಂಜಾನೆ ಈ ಘಟನೆ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್‌ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು. ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ

ಕಾರಿಗೆ ಕಂಟೈನರ್‌ ಡಿಕ್ಕಿ : ಕಾರು ಜಖಂ Read More »

ಸೇತುವೆ ಕಾಮಗಾರಿ ವೇಳೆ ಕುಸಿತ : ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರು

ಪುಣಚ: ಸೇತುವೆ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದು ಇಬ್ಬರು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ವಿಟ್ಲ ಪುಣಚದ ಬರೆಂಜ ಎಂಬಲ್ಲಿ ಇಂದು ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೊದೊಯ್ದು ಚಿಕಿತ್ಸೆ ನೀಡಲಾಗಿದೆ. ಬರೆಂಜ-ಕುರುಡುಕಟ್ಟೆ ಸಂಪರ್ಕ ರಸ್ತೆಗೆ ನೂತನ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಸೇತುವೆ ಕುಸಿದಿದೆ. ಈ ಸಂದರ್ಭ ಇಬ್ಬರು ಸೇತುವೆ ಕೆಳಗೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಇಬ್ಬರು ಗಾಯಗೊಂಡರೆನ್ನಲಾಗಿದೆ.

ಸೇತುವೆ ಕಾಮಗಾರಿ ವೇಳೆ ಕುಸಿತ : ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರು Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಬೆಂಗಳೂರಿನಿಂದ ತೊಡಿಕಾನಕ್ಕೆ ಬರುತ್ತಿದ್ದ ಕಾರು ಚಾಲಕ ನಿದ್ರೆಯ ಮಂಪರಿನಲ್ಲಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಹಿಂದೂ ಮುಖಂಡನಿಗೆ ಚೂರಿ ಇರಿತ !

ಬಂಟ್ವಾಳ : ಹಿಂದೂ ಯುವಸೇನೆಯ ಮುಖಂಡ, ಉದ್ಯಮಿಯೊಬ್ಬರಿಗೆ ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ರವಿ ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ

ಹಿಂದೂ ಮುಖಂಡನಿಗೆ ಚೂರಿ ಇರಿತ ! Read More »

ಮೋದಿ ರೋಡ್ ಶೋ | ಕೆಲ ಹೊತ್ತಿನ ಮುಂಚೆ ಕಟ್ಟಡದಲ್ಲಿ ಅಗ್ನಿದುರಂತ

ಮಂಗಳೂರು : ಮಂಗಳೂರಿನಲ್ಲಿ  ಇಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ  ನಡೆದಿದೆ. ಭಾನುವಾರ ಸಂಜೆ ರೋಡ್ ಶೋ ಆರಂಭವಾಗುವ ಕೆಲ‌ಹೊತ್ತಿನ ಮುಂಚೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾಗಿದೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸು ಕಾರ್ಯ ನಡೆಸಿದ್ದಾರೆ.

ಮೋದಿ ರೋಡ್ ಶೋ | ಕೆಲ ಹೊತ್ತಿನ ಮುಂಚೆ ಕಟ್ಟಡದಲ್ಲಿ ಅಗ್ನಿದುರಂತ Read More »

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ

ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡರು. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು. ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್ ಶೋ ಆರಂಭಿಸಿದರು. ಲಾಲ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ Read More »

ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ

ಪಂಜ : ಸಾವಿರ ಸೀಮೆಯ ಒಡೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಪ್ರಯುಕ್ತ ವಿಶು ಕಣಿ ಪೂಜೆ ಇಂದು ಜರುಗಿತು. ಸ್ಥಳೀಯ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ Read More »

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್

ಮಂಗಳೂರು : ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು.ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್ ನಿರ್ದೇಶನ ನೀಡಿದರು. ಅವರು ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ  ಮಾತನಾಡಿದರು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವೆಚ್ಚಗಳ ಬಗ್ಗೆ ವಿಶೇಷ ನಿಗಾವಹಿಸುವಂತೆ  ಮತ್ತು ಕಾಲಕಾಲಕ್ಕೆ ಪರಿಶೀಲಿಸುವಂತೆ ಸೂಚಿಸಿದರು.ಚುನಾವಣಾ ಅವಧಿಯಲ್ಲಿ

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್ Read More »

error: Content is protected !!
Scroll to Top