ದಕ್ಷಿಣ ಕನ್ನಡ

ಉಡುಪಿ ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಭೇಟಿ ಮಾಡಿದರು. ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರದೀಪ್ ಕುಮಾರ್ ಕಲ್ಕೂರ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಉಡುಪಿ ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಕ್ಯಾ.ಬ್ರಿಜೇಶ್ ಚೌಟ Read More »

ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ | ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇಯಿಂದ ಚುನಾವಣಾ ಆಯುಕ್ತರಿಗೆ ದೂರು

ಮಂಗಳೂರು: ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಈ ಕುರಿತು ಚುನಾವಣಾ ಆಯೋಗ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಮುಡಿಪು ರಸ್ತೆಯಲ್ಲಿ ಒಂದು ಭಾಗವನ್ನು ತಡೆಮಾಡಿ ಒಂದು ಸಮುದಾಯ ಅನ್ಯರಾಜ್ಯಗಳ ವ್ಯಕ್ತಿಗಳನ್ನು ಸೇರಿಸಿ ಇಫ್ತಾರ್ ಕೂಟ ಮಾಡಿರುವುದು ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದರಿಂದ ಚುನಾವಣಾ ನೀತಿ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ತಕ್ಷಣ ಈ ಕುರಿತು ಮೊಕದ್ದಮೆ ದಾಖಲಿಸಿ

ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ | ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇಯಿಂದ ಚುನಾವಣಾ ಆಯುಕ್ತರಿಗೆ ದೂರು Read More »

ರಸ್ತೆಯಲ್ಲೇ ಇಫ್ತಾರ್ ಕೂಟ ಆಯೋಜನೆ | ವಿವಾದಕ್ಕೆಡೆ ಮಾಡಿದ ಇಫ್ತಾರ್ ಕೂಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಂಗಳೂರು: ಸೌಹಾರ್ದತೆಯ ಹೆಸರಿನಲ್ಲಿ ಇಫ್ತಾರ್ ಕೂಟವೊಂದನ್ನು ರಸ್ತೆಯಲ್ಲೇ ಆಯೋಜಿಸಿ ವಿವಾದಕ್ಕೆ ಕಾರಣವಾದ ಘಟನೆ ಉಳ್ಳಾಲ ತಾಲೂಕಿನ ಮುಡಿಪುವಿನಲ್ಲಿ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗುತ್ತಿದೆ. ಸೌಹಾರ್ದತೆಯ ಹೆಸರಿನಲ್ಲಿ  ಮುಡಿಪುವಿನ ಮುಖ್ಯರಸ್ತೆಯ ಒಂದು ಬದಿಯಲ್ಲಿ ಬ್ಲಾಕ್ ಇಫ್ತಾರ್ ಕೂಟ ನಡೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದ್ದು, ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಡಿಪು ಜಂಕ್ಷನ್‌ನಲ್ಲಿ ಆಟೋ ರಾಜಕನ್ಮಾರ್ ಎಂಬ ಸಂಘಟನೆ ಈ ಇಫ್ತಾರ್ ಕೂಟ ಆಯೋಜಿಸಿದೆ ಎನ್ನಲಾಗಿದೆ. ರಿಕ್ಷಾ ಚಾಲಕರೆಲ್ಲರೂ ಒಟ್ಟಾಗಿ ಸೇರಿಕೊಂಡು

ರಸ್ತೆಯಲ್ಲೇ ಇಫ್ತಾರ್ ಕೂಟ ಆಯೋಜನೆ | ವಿವಾದಕ್ಕೆಡೆ ಮಾಡಿದ ಇಫ್ತಾರ್ ಕೂಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಸಾಕು ನಾಯಿಗಳಿಗೆ ವಿಷವಿಕ್ಕಿದ ನೀಚರು | 10 ಕ್ಕೂ ಅಧಿಕ ನಾಯಿಗಳ ಸಾವು

ಮುಂಡಾಜೆ : ಸಾಕು ನಾಯಿಗಳಿಗೆ ವಿಷವಿಕ್ಕಿದ ಪರಿಣಾಮ 10 ಕ್ಕೂ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಇದನ್ನು ತಿಂದಿರುವ ನಾಯಿಗಳು ಸಾವನ್ನಪ್ಪಿದೆ ಎನ್ನಲಾಗಿದೆ. ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು. ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ

ಸಾಕು ನಾಯಿಗಳಿಗೆ ವಿಷವಿಕ್ಕಿದ ನೀಚರು | 10 ಕ್ಕೂ ಅಧಿಕ ನಾಯಿಗಳ ಸಾವು Read More »

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ

ಪುತ್ತೂರು: ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಶನಿವಾರ ತಡರಾತ್ರಿ ವಿಠಲ ರೈ ಎಂಬವರು ತನ್ನ ಕಾರನ್ನು ಮರ್ದಾಳ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಿ ರಸ್ತೆ ದಾಟುತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಅಕ್ರಮ ಗೋಸಾಗಾಟ ಮಾಡಿಕೊಂಡು ಬರುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತಕ್ಷಣ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಆದಾಗಲೇ ಮೃತಪಟ್ಟಿದ್ದರು.

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ Read More »

ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ

ಕಡಬ: ಅಕ್ರಮ ದನ ಸಾಗಾಟದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಡಬದ ಮರ್ದಾಳದ ನೆಕ್ಕಿತ್ತಡ್ಕ ಸಮೀಪ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಅವರು ರಾತ್ರಿ ವೇಳೆ ತನ್ನ ಕಾರನ್ನು ನಿಲ್ಲಿಸಿ  ರಸ್ತೆ ದಾಟುತ್ತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಬಂದ ಅಕ್ರಮ ದನ ಸಾಗಾಟದ ಮಾರುತಿ 800 ಡಿಕ್ಕಿ ಹೊಡೆದು

ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ Read More »

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕಡಬ : ಕಡಬ ಕಾಂಗ್ರೆಸ್‌ ಪಾಳಯದಲ್ಲಿ ಶನಿವಾರ ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟ ನಡೆಯುವ ಮೂಲಕ ಭಿನ್ನಮತ ಸ್ಪೋಟಗೊಂಡ ಘಟನೆ ನಡೆದಿದೆ. ಸಭೆಯಿಂದ ಮುಸ್ಲಿಂ ಮುಖಂಡರು ಹೊರನಡೆದ ಘಟನೆಯೂ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ಎನ್ನಲಾಗಿದೆ. ಈ ಕುರಿತು ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ನೆಲ್ಯಾಡಿ ಉಪ ಅಂಚೆ ಕಚೇರಿಯ ಅಂಚೆ ಪಾಲಕ ಡಿ.ರಾಮಣ್ಣ ಶೆಟ್ಟಿ ನಾಳೆ ಸೇವೆಯಿಂದ ನಿವೃತ್ತಿ

ನೆಲ್ಯಾಡಿ: ಅಂಚೆ ಇಲಾಖೆಯಲ್ಲಿ 41 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ನೆಲ್ಯಾಡಿ ಉಪ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿರುವ ಡಿ. ರಾಮಣ್ಣ ಶೆಟ್ಟಿ ಅವರು ಮಾ.31 ರಂದು ನಿವೃತ್ತಿಯಾಗಲಿದ್ದಾರೆ. 1983, ಮಾ.14 ರಂದು ಕೊಕ್ಕಡ ಅಂಚೆ ಕಚೇರಿಯಲ್ಲಿ ಇಲಾಖೇತರ ನೌಕರರಾಗಿ ಸೇವೆ ಆರಂಭಿಸಿದ ರಾಮಣ್ಣ ಶೆಟ್ಟಿಯವರು ಬಳಿಕ ಇಲಾಖಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 1991, ನ.16 ರಂದು ಕಾರ್ಕಳ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ನೌಕರರಾಗಿ ಸೇವೆಗೆ ಸೇರ್ಪಡೆಗೊಂಡಿದ್ದರು. 1997, ಏ.26ರಂದು ಗ್ರೂಫ್ ಸಿ ನೌಕರರಾಗಿ

ನೆಲ್ಯಾಡಿ ಉಪ ಅಂಚೆ ಕಚೇರಿಯ ಅಂಚೆ ಪಾಲಕ ಡಿ.ರಾಮಣ್ಣ ಶೆಟ್ಟಿ ನಾಳೆ ಸೇವೆಯಿಂದ ನಿವೃತ್ತಿ Read More »

ಕಾಪು ಠಾಣಾ ಮಹಿಳಾ ಪೇದೆ ಆತ್ಮಹತ್ಯೆ !

ಕಾಪು : ಮಹಿಳಾ ಪೇದೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾವು ಠಾಣೆಯ ಪೇದೆ ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಬಾಗಲಕೋಟೆಯವರಾಗಿರುವ ಜ್ಯೋತಿ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ಕ್ವಾಟ್ರಸ್‍ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ಮೃತ ಪೊಲೀಸ್ ಸಿಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಿದ್ದರು.

ಕಾಪು ಠಾಣಾ ಮಹಿಳಾ ಪೇದೆ ಆತ್ಮಹತ್ಯೆ ! Read More »

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

ಸುಳ್ಯ: ಚುನಾವಣಾ ಪ್ರಚಾರಕ್ಕಾಗಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಾ. 30ರಂದು ಸುಳ್ಯಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಪ್ರಚಾರ ಆರಂಭಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಕಿರಣ್ ಬುಡ್ಲೆಗುತ್ತು, ವಿಜಯ ಕುಮಾರ್ ಸೊರಕೆ, ಡಾ. ಎನ್.ಎ.

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ Read More »

error: Content is protected !!
Scroll to Top