ದಕ್ಷಿಣ ಕನ್ನಡ

ಕಾಲೇಜು ವಿದ್ಯಾರ್ಥಿ ವಿಘ್ನೇಶ್ ಆತ್ಮಹತ್ಯೆ !

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ಬಳಿಯ ಕಜೋಡಿ ಎಂಬಲ್ಲಿ ನಡೆದಿದೆ. ಕಜೋಡಿ ನಿವಾಸಿ ವಿಘ್ನೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಮಣ್ಣ ಹಾಗೂ ಗೀತಾ ದಂಪತಿ ಪುತ್ರನಾಗಿರುವ ವಿಘ್ನೇಶ್ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜು ವಿದ್ಯಾರ್ಥಿ ವಿಘ್ನೇಶ್ ಆತ್ಮಹತ್ಯೆ ! Read More »

ಜಿಲ್ಲೆಯ ಭವಿಷ್ಯದ ಹಿತದೃಷ್ಟಿಗೆ ಪೂರಕವಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಿಸಲಾಗಿದೆ : ನಳಿನ್ ಕುಮಾರ್ ಕಟೀಲ್ | ನೂತನ ಆಟೋರಿಕ್ಷಾ ತಂಗುದಾಣ ಲೋಕಾರ್ಪಣೆ

ಬೆಳ್ಳಾರೆ : ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ವೆಚ್ಚದಲ್ಲಿ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ನಿರ್ಮಿಸಲಾದ ಆಟೋರಿಕ್ಷಾ ತಂಗುದಾಣದ ಉದ್ಘಾಟನೆ ಶನಿವಾರ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ತಂಗುದಾಣ ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ದ.ಕ.ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಕಳೆದ ಹದಿನೈದು ವರ್ಷಗಳಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದ ಅವರು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣಗಳ ಅಭಿವೃದ್ಧಿ

ಜಿಲ್ಲೆಯ ಭವಿಷ್ಯದ ಹಿತದೃಷ್ಟಿಗೆ ಪೂರಕವಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಿಸಲಾಗಿದೆ : ನಳಿನ್ ಕುಮಾರ್ ಕಟೀಲ್ | ನೂತನ ಆಟೋರಿಕ್ಷಾ ತಂಗುದಾಣ ಲೋಕಾರ್ಪಣೆ Read More »

ಖಾಸಗಿ ಬಸ್-ಕಂಟೈನರ್ ಲಾರಿ ಡಿಕ್ಕಿ : ಲಾರಿ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ಖಾಸಗಿ ಬಸ್ ಹಾಗೂ ಕಂಟೈನರ್ ಲಾರಿ ಡಿಕ್ಕಿ ಹೊಡೆದುಕೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಿಂದ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಬಿ.ಸಿ.ರೋಡಿನಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಂಟೈನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಬಸ್-ಕಂಟೈನರ್ ಲಾರಿ ಡಿಕ್ಕಿ : ಲಾರಿ ಚಾಲಕನಿಗೆ ಗಂಭೀರ ಗಾಯ Read More »

ಕೆಎಸ್ ಆರ್‍ ಟಿಸಿ ಬಸ್ ಬ್ರೇಕ್‍ ಫೇಲ್ | ಸಮಯಪ್ರಜ್ಞೆ ಮೆರೆದ ಚಾಲಕ | ಪ್ರಯಾಣಿಕರು ಅಪಾಯದಿಂದ ಪಾರು

ಚಾರ್ಮಾಡಿ: ಬ್ರೇಕ್‍ ಫೇಲ್ ಆದ ಕೆಎಸ್‍ ಆರ್ ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್‍ ನಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಕಡಿದಾದ ರಸ್ತೆಯ ತಿರುವಿನಲ್ಲಿ ಬ್ರೇಕ್‍ ಫೇಲ್‍ ಆಗಿದೆ. ಇದು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಸಂತೋಷ್ ತಡೆಗೋಡೆಗೆ ಗುದ್ದುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಈ ಸಂದರ್ಭ ಚಾಲಕ ಪ್ರಯಾಣಿಕರಿಗೆ ಧೈರ್ಯ ತುಂಬಿದ್ದಾರೆ. ಚಾರ್ಮಾಡಿ ಘಾಟ್‍ ನ 6ನೇ ತಿರುವಿನಲ್ಲಿದ್ದ ಕಿರು ಸೇತುವೆಗೆ ಡಿಕ್ಕಿ ಹೊಡೆಸಿ

ಕೆಎಸ್ ಆರ್‍ ಟಿಸಿ ಬಸ್ ಬ್ರೇಕ್‍ ಫೇಲ್ | ಸಮಯಪ್ರಜ್ಞೆ ಮೆರೆದ ಚಾಲಕ | ಪ್ರಯಾಣಿಕರು ಅಪಾಯದಿಂದ ಪಾರು Read More »

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್‍ ಬುಡ್ಲೆಗುತ್ತು ಆಯ್ಕೆ

ಮಂಗಳೂರು: 2024 ರ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಕಾಂಕ್ಷಿ ಕಿರಣ್ ಬುಡ್ಲೆಗುತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕಿರಣ್ ಬುಡ್ಲೆಗುತ್ತು ಅವರು ದ.ಕ. ಜಿಲ್ಲಾ ಕಾಂಗ್ರೆಸ್‍ ನಿಂದ ಸಂಸದ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು, ಒಕ್ಕಲಿಗ ಸಮುದಾಯದ ಯುವ ನಾಯಕರೂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್‍ ಬುಡ್ಲೆಗುತ್ತು ಆಯ್ಕೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಹೃದಯಾಘಾತದಿಂದ ಮೃತ್ಯು

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಶಿವರಾತ್ರಿ ದಿನವಾದ ಶುಕ್ರವಾರ ಮೃತಪಟ್ಟಿದೆ. 60ವರ್ಷ ಪ್ರಾಯದ ಲತಾ ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ 50 ವರ್ಷಗಳಿಂದ ಧರ್ಮಸ್ಥಳದ ಜಾತ್ರಾ ಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಎಲ್ಲರ ಚಿತ್ತ ಸೆಳೆಯುತ್ತಿದ್ದಳು. ವಿಶೇಷವೆಂದರೆ ಲತಾ ಆನೆ ಶಿವಾನಗೆ ತಾಯಿಯಾಗಿ ಪ್ರೀತಿಯಿಂದ ವರ್ತಿಸುತ್ತಿತ್ತು. ಲತಾ ಆನೆಯನ್ನು ಕಳೆದುಕೊಂಡಿರುವ ಶಿವಾನಿ ಹಾಗೂ ಲಕ್ಷ್ಮಿ ಇಬ್ಬರು ಮಂಕಾಗಿದ್ದಾರೆ. ಆನೆ ಸಾವಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಹೃದಯಾಘಾತದಿಂದ ಮೃತ್ಯು Read More »

ಲೋಕಸಭೆ ಚುನಾವಣೆ | ಕಾಂಗ್ರೆಸ್‍ ನಿಂದ ಮುಂಚೂಣಿಯಲ್ಲಿರುವ ಕಿರಣ್ ಬುಡ್ಲೆಗುತ್ತು ಹೆಸರು ಪಟ್ಟಿಯಿಂದ ಕೈಬಿಡುವಂತೆ ಹುನ್ನಾರ | ಕಾಂಗ್ರೆಸ್‍ಗೆ  ಮುಳುವಾಗಲಿದೆಯೇ ಈ ಹುನ್ನಾರ

ಮಂಗಳೂರು: ಇನ್ನೇನು ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರಾವಳಿ ಭಾಗದಲ್ಲಿ ದೊಡ್ಡ ಮಟ್ಟದ ರಾಜಕೀಯ ಸ್ತಿತ್ಯಂತರಗಳು ಗೋಚರವಾಗುತ್ತಿವೆ. ಒಂದೆಡೆ ಕಳೆದ ವಿಧಾನಸಭಾ ಸಂದರ್ಭ ಹೊರಡಿಸಿದ ಗ್ಯಾರಂಟಿ ಯೋಜನೆ ಕರಾವಳಿಯ ಪ್ರಜ್ಞಾವಂತ ಜನರಲ್ಲಿ ಆಶಾಭಾವನೆ ಮೂಡಿಸಿರುವುದು ಕಾಂಗ್ರೆಸ್ ಸಣ್ಣ ಪ್ರಯತ್ನದಲ್ಲಿ ಈ ಬಾರಿ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎನ್ನುವುದು. ಮತ್ತೊಂದೆಡೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಬಗ್ಗೆ ಜನರಿಗಿರುವ ಕೋಪದ ಜತೆ ಒಟ್ಟಾರೆಯಾಗಿ ಕರಾವಳಿಯಲ್ಲಿ ಬಿಜೆಪಿ ಕುರಿತು ಇರುವ ಅಸಮಾಧಾನ. ಈ ಹಿನ್ನಲೆಯಲ್ಲಿ ಕಾಂಗ್ರೆಸ್‍ ಕರಾವಳಿಯಲ್ಲಿ ಗೆಲ್ಲುವ

ಲೋಕಸಭೆ ಚುನಾವಣೆ | ಕಾಂಗ್ರೆಸ್‍ ನಿಂದ ಮುಂಚೂಣಿಯಲ್ಲಿರುವ ಕಿರಣ್ ಬುಡ್ಲೆಗುತ್ತು ಹೆಸರು ಪಟ್ಟಿಯಿಂದ ಕೈಬಿಡುವಂತೆ ಹುನ್ನಾರ | ಕಾಂಗ್ರೆಸ್‍ಗೆ  ಮುಳುವಾಗಲಿದೆಯೇ ಈ ಹುನ್ನಾರ Read More »

ಜಮೀನಿನ ನಕ್ಷೆ ನೀಡಲು ಸರ್ವೆಯರ್‍ ನಿಂದ ಲಂಚ ಸ್ವೀಕಾರ : ಲೋಕಾಯುಕ್ತರ ಬಲೆಗೆ

ಮಂಗಳೂರು: ಲಂಚ ಸ್ವೀಕರಿಸುತ್ತಿರುವ ಸಂದರ್ಭ ಸರ್ವೆಯರ್ ಶೀತಲ್ ರಾಜ್ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಜಮೀನಿನ ನಕ್ಷೆ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ನೀರುಮಾರ್ಗದ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಅವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್‌ಲೈನ್ ಮುಖಾಂತರ ಜಮೀನಿನ ತತ್ಕಾಲ್ ಪೋಡಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಸಮಯ ಸರಕಾರಿ ಶುಲ್ಕ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು.

ಜಮೀನಿನ ನಕ್ಷೆ ನೀಡಲು ಸರ್ವೆಯರ್‍ ನಿಂದ ಲಂಚ ಸ್ವೀಕಾರ : ಲೋಕಾಯುಕ್ತರ ಬಲೆಗೆ Read More »

ವೈಜ್ಞಾನಿಕ ಜೇನು ಕೃಷಿ ತರಬೇತಿ ಹಾಗೂ ಜೇನು ಪೆಟ್ಟಿಗೆ, ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮ

ಸುಳ್ಯ: ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ವೈಜ್ಞಾನಿಕ ಜೇನು ಕೃಷಿ ಕುರಿತು ತರಬೇತಿ ಕಾರ್ಯಕ್ರಮ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಹರೀಶ್ ಉಬರಡ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರಿಗೆ ಜೇನು ಕೃಷಿಯ ಕುರಿತು ವೈಜ್ಞಾನಿಕ ಮಾಹಿತಿಯನ್ನು ಪಡೆದುಕೊಳ್ಳಲು ತಿಳಿಸಿದರು. ಡಾ. ಟಿ. ಜೆ. ರಮೇಶ ರವರು ವೈಜ್ಞಾನಿಕ ಜೇನು ಕೃಷಿಯ ಮಹತ್ವದ ಕುರಿತು ರೈತರಿಗೆ ಮಾಹಿತಿ ನೀಡಿದರು. ಡಾ. ಕೇದಾರನಾಥ ಹಾಗೂ ಗಿರಿಧರ ದಾಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವೈಜ್ಞಾನಿಕ ಜೇನು

ವೈಜ್ಞಾನಿಕ ಜೇನು ಕೃಷಿ ತರಬೇತಿ ಹಾಗೂ ಜೇನು ಪೆಟ್ಟಿಗೆ, ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮ Read More »

ಸಮುದ್ರ ಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ಉಪ್ಪಳ: ಸಮುದ್ರಪಾಲಾಗಿದ್ದ ವಿದ್ಯಾರ್ಥಿಯೊಬ್ಬನ ಮೃತದೇಹ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿ ಬಳಿಯ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಮೂರು ದಿನಗಳ ಬಳಿಕ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಕುತ್ತಿಗೆಯಲ್ಲಿ ಚೈನ್, ಒಳ ಉಡುಪು ಆಧಾರದಲ್ಲಿ ಲಿಖಿತ್ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರು ಮಂಗಲ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಸಂಬಂಧಪಟ್ಟ ಪಣಂಬೂರು ಠಾಣೆಗೆ ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ ಪೊರ್ಕೋಡಿಯ ಸ್ನೇಹಿತರಾದ ನಾಗರಾಜ್‌ (24), ಮಿಲನ್‌ (20) ಹಾಗೂ

ಸಮುದ್ರ ಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

error: Content is protected !!
Scroll to Top