ದಕ್ಷಿಣ ಕನ್ನಡ

ಧರ್ಮಸ್ಥಳ ನಿಂದನೆ : ವಿಠಲ ಗೌಡಗೆ 30 ದಿನಗಳ ಸಿವಿಲ್ ಬಂಧನ

ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಅವಹೇಳನ ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮತ್ತು ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಮಾಡಬಾರದು ಎಂಬ ನ್ಯಾಯಾಲಯದ ಆದೇಶವನ್ನು ಪದೇ ಪದೇ ಉಲ್ಲಂಘಿಸಿದ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಸೌಜನ್ಯ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಸಿವಿಲ್ ಬಂಧನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಆರೋಪಿಯಾಗಿರುವ ಸೌಜನ್ಯಳ ಮಾವ ವಿಠ್ಠಲ ಗೌಡಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ.ವೀರೇಂದ್ರ ಹೆಗ್ಗಡೆ […]

ಧರ್ಮಸ್ಥಳ ನಿಂದನೆ : ವಿಠಲ ಗೌಡಗೆ 30 ದಿನಗಳ ಸಿವಿಲ್ ಬಂಧನ Read More »

ಮಂಗಳೂರು ಕಾರಾಗೃಹದಲ್ಲಿ ಮೊಬೈಲ್‌ಗಳು, ಸಿಮ್, ಚಾರ್ಜರ್ ಪತ್ತೆ

ಮಂಗಳೂರು: ಬೆಂಗಳೂರಿನಲ್ಲಿ ಬಂಧೀಖಾನೆ ಡಿಜಿಪಿಯಾಗಿ ಅಲೋಕ್ ‌ಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ‌ಬಂಧೀಖಾನೆ ಭದ್ರತೆ ಹೆಚ್ಚಿಸಲಾಗಿದೆ. ಅವರು ಮಂಗಳೂರಿನ ಕಾರಾಗೃಹಕ್ಕೂ ‌ತೆರಳಿ ಪರಿಶೀಲನೆ ನಡೆಸಿ, ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಂಗಳೂರು ಬಂಧೀಖಾನೆಯಲ್ಲಿ ಮೂರು ಮೊಬೈಲ್ ಫೋನ್, ಸಿಮ್ ಪತ್ತೆಯಾಗಿದೆ. ಜೈಲಧಿಕಾರಿಗಳು ಜ. 14 ರಂದು ಕಾರಾಗೃಹದಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ A ವಿಭಾಗದ ಮೂರನೇ ಕೊಠಡಿಯಲ್ಲಿ ಸಿಮ್ ಸಹಿತ ಮೊಬೈಲ್ ಫೋನ್, ಕೀ ಪ್ಯಾಡ್ ಫೋನ್, ಸಿನ್, ಚಾರ್ಜರ್, ಅಡಾಪ್ಟರ್, ಚಾರ್ಜರ್ ಕೇಬಲ್

ಮಂಗಳೂರು ಕಾರಾಗೃಹದಲ್ಲಿ ಮೊಬೈಲ್‌ಗಳು, ಸಿಮ್, ಚಾರ್ಜರ್ ಪತ್ತೆ Read More »

ಇಂದು, ನಾಳೆ ತಣ್ಣೀರುಬಾವಿ ಬೀಚ್‌ನಲ್ಲಿ ವಿಶ್ವವಿಖ್ಯಾತ ಗಾಳಿಪಟ ಉತ್ಸವ

15 ದೇಶಗಳ 30 ಅಂತಾರಾಷ್ಟ್ರೀಯ ತಂಡಗಳಿಂದ ಆಕರ್ಷಕ ಗಾಳಿಪಟಗಳ ಹಾರಾಟ ಮಂಗಳೂರು : ಕರಾವಳಿ ಉತ್ಸವದ ಅಂಗವಾದ ಮಂಗಳೂರಿನ ವಿಶ್ವವಿಖ್ಯಾತ ಗಾಳಿಪಟ ಉತ್ಸವ ಇಂದು ಮತ್ತು ನಾಳೆ ತಣ್ಣೀರುಬಾವಿ ಬ್ಲೂ ಬೇ ಬೀಚ್‌ಲ್ಲಿ ನಡೆಯಲಿದೆ. 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸಂಜೆ 3 ಗಂಟೆಗೆ ಆರಂಭವಾಗಲಿದ್ದು, ಇದರಲ್ಲಿ 15 ದೇಶಗಳ 30 ಅಂತಾರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ

ಇಂದು, ನಾಳೆ ತಣ್ಣೀರುಬಾವಿ ಬೀಚ್‌ನಲ್ಲಿ ವಿಶ್ವವಿಖ್ಯಾತ ಗಾಳಿಪಟ ಉತ್ಸವ Read More »

ಮಂಗಳೂರಿಗೆ ಬೈಪಾಸ್, ತಲಪಾಡಿಯಿಂದ ಕುಂದಾಪುರದವರೆಗೆ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ಸಂಸದ ಕ್ಯಾ.ಬ್ರಿಜೇಶ್‌ ಚೌಟ ಪ್ರಯತ್ನಕ್ಕೆ ಸಿಕ್ಕಿದ ಯಶಸ್ಸು ಮಂಗಳೂರು : ಮಂಗಳೂರು ಬೈಪಾಸ್ ಮೂಲಕ ಹಾದು ಹೋಗುವ ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ಅಗಲೀಕರಣ ಹಾಗೂ ತಲಪಾಡಿಯಿಂದ ಕುಂದಾಪುರದವರೆಗಿನ ಎನ್‌ಹೆಚ್-66ರ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಆ ಮೂಲಕ ಕರಾವಳಿ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪರಿಶ್ರಮದಿಂದಾಗಿ ಕರಾವಳಿಯಲ್ಲಿ ಹಾದುಹೋಗುವ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಪ್ರಯತ್ನಕ್ಕೆ ಮೊದಲ ಹಂತದ

ಮಂಗಳೂರಿಗೆ ಬೈಪಾಸ್, ತಲಪಾಡಿಯಿಂದ ಕುಂದಾಪುರದವರೆಗೆ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಕ್ರಾಂತಿ ಹಬ್ಬ ಇಂದು ರಜೆ ನಾಳೆ

ಜ.15ರಂದು ಸರ್ಕಾರಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಘೋಷಿಸಲಾದ ಸರ್ಕಾರಿ ರಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಜನವರಿ 15ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಜಿಲ್ಲೆಯಲ್ಲಿ ಜನವರಿ 14ರಂದು ಮಕರ ಸಂಕ್ರಾಂತಿ ಆಚರಿಸಲಾಗುತ್ತಿದ್ದು, ಜನವರಿ 15ರಂದು ಸರ್ಕಾರಿ ರಜೆ ನಿಗದಿಪಡಿಸಿರುವುದಕ್ಕೆ ಆಕ್ಷೇಪಣೆಗಳು ವ್ಯಕ್ತವಾಗಿದ್ದವು. ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ವಿಷಯವನ್ನು ಸರ್ಕಾರದ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಕ್ರಾಂತಿ ಹಬ್ಬ ಇಂದು ರಜೆ ನಾಳೆ Read More »

ರಬ್ಬರ್‌ ತೋಟದಲ್ಲಿ ಮೂರು ಮರಿಗಳೊಂದಿಗೆ ಚಿರತೆ ಠಿಕಾಣಿ

ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಮಚ್ಚಿಮಲೆ ಅನಂತ ಭಟ್ ಎಂಬವರ ರಬ್ಬರ್ ತೋಟದಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಟ್ಯಾಪಿಂಗ್ ಕೆಲಸದವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕೆಲಸದವರು ಬೆಳಗ್ಗೆ ತೋಟಕ್ಕೆ ಹೋದಾಗ ಚಿರತೆಗಳು ಕಾಣಿಸಿರುವುದಾಗಿ ತಿಳಿದು ಬಂದಿದೆ. ಅವರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಮುಂಡಾಜೆ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಓಡಾಟದ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದರು.‌ ಇಲ್ಲೇ ಸಮೀಪದ ಕಾಯರ್ತೋಡಿಯಲ್ಲಿ ನದಿಬದಿಯಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಸ್ಥಳೀಯ ಜನರು ಮಾಹಿತಿ ನೀಡಿದ್ದಾರೆ. ಮರಿಗಳೊಂದಿಗೆ

ರಬ್ಬರ್‌ ತೋಟದಲ್ಲಿ ಮೂರು ಮರಿಗಳೊಂದಿಗೆ ಚಿರತೆ ಠಿಕಾಣಿ Read More »

ಟ್ಯಾಂಕರ್‌ಗೆ ಗೂಡ್ಸ್ ವಾಹನ ಢಿಕ್ಕಿ

ಕಲ್ಲಡ್ಕ: ಗೂಡ್ಸ್ ವಾಹನವೊಂದು ನಿಲ್ಲಿಸಿದ್ದ ಟ್ಯಾಂಕರ್‌ಗೆ ಗುದ್ದಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಹೊಟೇಲ್ ಸಮುದ್ರ ಬಳಿ ಈ ಘಟನೆ ನಡೆದಿದೆ. ಪರಿಣಾಮ ಗೂಡ್ಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ದೊಡ್ಡ ಮಟ್ಟದ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಟ್ಯಾಂಕರ್‌ಗೆ ಗೂಡ್ಸ್ ವಾಹನ ಢಿಕ್ಕಿ Read More »

ಜಾರ್ಖಂಡ್ ವ್ಯಕ್ತಿಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಸೆರೆ

ಬಾಂಗ್ಲಾದೇಶದವನು ಎಂದು ಭಾವಿಸಿ ಹಲ್ಲೆ ಮಂಗಳೂರು: ಬಾಂಗ್ಲಾದೇಶದ ಪ್ರಜೆ ಎಂದು ಭಾವಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೂಳೂರು ಗ್ರಾಮ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ.11ರಂದು ಸಂಜೆ ನಾಲ್ವರು ಆರೋಪಿಗಳು ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಎಂಬವರನ್ನು ತಡೆದು ನಿಲ್ಲಿಸಿ, ನೀನು

ಜಾರ್ಖಂಡ್ ವ್ಯಕ್ತಿಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಸೆರೆ Read More »

ಶಬರಿಮಲೆಯಲ್ಲಿ ಹೃದಯಾಘಾತದಿಂದ ಉಳ್ಳಾಲದ ಉದ್ಯಮಿ ಸಾವು

ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದ ಉದ್ಯಮಿ ಮಂಗಳೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲದ ಅಯ್ಯಪ್ಪ ವ್ರತಧಾರಿಯೋರ್ವರು ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತ ವ್ಯಕ್ತಿ. ಚಂದ್ರಹಾಸ್ ಅವರು ಅಯ್ಯಪ್ಪ ವ್ರತಾಧಾರಿಗಳ ಜೊತೆ ಶನಿವಾರ ಅರ್ಕುಳ ತುಪ್ಪೆಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಗ್ಗೆ ಚಂದ್ರಹಾಸ್ ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ

ಶಬರಿಮಲೆಯಲ್ಲಿ ಹೃದಯಾಘಾತದಿಂದ ಉಳ್ಳಾಲದ ಉದ್ಯಮಿ ಸಾವು Read More »

4 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಉಗಾಂಡದ ಮಹಿಳೆ ಬಂಧನ

ಬೆಂಗಳೂರಿನಿಂದ ಮಂಗಳೂರಿಗೆ ಮಾದಕವಸ್ತು ಪೂರೈಸುತ್ತಿದ್ದ ಜಾಲದ ಪ್ರಮುಖ ಸೂತ್ರಧಾರಿ ಮಹಿಳೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ವ್ಯವಸ್ಥಿತ ರೀತಿಯಲ್ಲಿ ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಅವಳಿಂದ ಸುಮಾರು 4 ಕೋ. ರೂ. ಮೌಲ್ಯದ 4 ಕೆಜಿ ಡ್ರಗ್ಸ್‌ ವಸ್ತು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಹೊರವಲಯದ ಜಿಗಾನಿಯಲ್ಲಿ 4 ಕೆಜಿ ಎಂಡಿಎಂಎ ಜೊತೆ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಆರೋಪಿಯನ್ನು ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದ್ದು, ವಶಪಡಿಸಿಕೊಂಡ ಅಕ್ರಮ ವಸ್ತುಗಳ ಮೌಲ್ಯ

4 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಉಗಾಂಡದ ಮಹಿಳೆ ಬಂಧನ Read More »

error: Content is protected !!
Scroll to Top