ಅಪರಿಚಿತನಿಂದ ಆ್ಯಸಿಡ್ ದಾಳಿ | ಮೂವರು ವಿದ್ಯಾರ್ಥಿನಿಯರು ಗಂಭೀರ
ಕಡಬ: ಅಪರಿಚಿತ ವ್ಯಕ್ತಿಯೋರ್ವ ಆ್ಯಸಿಡ್ ಎರಚಿದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಂಭಿರ ಗಾಯಗೊಂಡ ಘಟನೆ ಕಡಬ ಸರಕಾರಿ ಕಾಲೇಜು ಆವರಣದಲ್ಲಿ ನಡೆಯಿತು. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲಿನ ಸಿಬಿ, ಅರ್ಚನ, ಅಮೃತ ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಅಬೀನ್ ರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಅಪರಿಚಿತನಿಂದ ಆ್ಯಸಿಡ್ ದಾಳಿ | ಮೂವರು ವಿದ್ಯಾರ್ಥಿನಿಯರು ಗಂಭೀರ Read More »










