ದಕ್ಷಿಣ ಕನ್ನಡ

ಉಳ್ಳಾಲ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಪತ್ತೆ | ಆತ್ಮಹತ್ಯೆ ಶಂಕೆ

ಮಂಗಳೂರು:  ರಾಷ್ಟ್ರೀಯ ಹೆದ್ದಾರಿ 67ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರೊಂದು ಇಂದು ಪತ್ತೆಯಾಗಿದ್ದು, ಕಾರು ನಿಲ್ಲಿಸಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.ಕಾರನ್ನು ಪರಿಶೀಲಿಸಿದಾಗ ಚಿಕ್ಕಮಗಳೂರು ಜಿಲ್ಲೆಯ ವ್ಯಕ್ತಿಯೊಬ್ಬರ ಕೆಲವು ಗುರುತಿನ ಕಾರ್ಡ್‌ಗಳು ಕಂಡು ಬಂದಿವೆ. ಅಲ್ಲದೆ ಕಾರಿನ ಕೀ ಕೂಡಾ ಕಾರಿನಲ್ಲೇ ಪತ್ತೆಯಾಗಿದ್ದು, ಏನಾಗಿರಬಹುದು ಎಂಬ ಮಾಹಿತಿ ತಿಳಿದು ಬಂದಿಲ್ಲ.ಕಾರಿನಲ್ಲಿ ಕಂಡು ಬಂದ ಗುರುತಿನ ಚೀಟಿಯ ಆಧಾರದ ಮೇಲೆ ಆ ವ್ಯಕ್ತಿಯ ಮನೆಯವರನ್ನು ಸಂಪರ್ಕಿಸಿ ವಿಷಯ ತಿಳಿಸಲಾಗಿದೆ. ಮನೆ ಮಂದಿ ಬಂದ […]

ಉಳ್ಳಾಲ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಪತ್ತೆ | ಆತ್ಮಹತ್ಯೆ ಶಂಕೆ Read More »

ತಂದೆಯಿಂದ ಮಗನ ಹತ್ಯೆ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ಉಜಿರೆಯಲ್ಲಿ  ಸಂಭವಿಸಿದೆ. ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್ (30) ಮೃತಪಟ್ಟವರು. ಮೃತರ ತಂದೆ ಕೃಷ್ಣಯ್ಯಾಚಾರ್ ಎಂಬವರೇ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಭಾನುವಾರ ರಾತ್ರಿ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆದಿದೆ. ಇದಾದ ಬಳಿಕ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ. ಮಗ ಜಗದೀಶ ಬಾಗಿಲು ತೆಗೆಯಲು ಪ್ರಯತ್ನಿಸಿದಾಗ ಏಕಾಏಕಿ ಬಾಗಿಲು ತೆರೆದ ತಂದೆ ಕೃಷ್ಣಯ್ಯ ಆಚಾರ್ ಕೋಣೆಯ ಒಳಗಿನಿಂದ

ತಂದೆಯಿಂದ ಮಗನ ಹತ್ಯೆ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕೇರಳದಲ್ಲಿ ಬಾಂಬ್ ಸ್ಪೋಟ | ದ.ಕ. ಗಡಿಭಾಗ ಸಹಿತ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್

ಪುತ್ತೂರು: ಕೇರಳದಲ್ಲಿ ಭಾನುವಾರ ನಡೆದ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಗಡಿಭಾಗ ಸಹಿತ ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸರು ಗಡಿಭಾಗದಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಹಿರಿಯ ಅಧಿಕಾರಿಗಳು ಚೆಕ್‍ಪೋಸ್ಟ್ ಗಳಿಗೆ ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸಿದ್ದಾರೆ. ಮಂಗಳೂರು ನಗರ ಕೇಂದ್ರ ಭಾಗ ಸೇರಿದಂತೆ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿನ ಆಯಕಟ್ಟಿನ ಸ್ಥಳಗಳಲ್ಲಿ, ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ  ಬಂದರು, ಧಾರ್ಮಿಕ ಕ್ಷೇತ್ರಗಳು, ಕಡಲ ತೀರ ಪ್ರದೇಶಗಳಲ್ಲಿ ಪೊಲೀಸರು ನಿಗಾ ವಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್

ಕೇರಳದಲ್ಲಿ ಬಾಂಬ್ ಸ್ಪೋಟ | ದ.ಕ. ಗಡಿಭಾಗ ಸಹಿತ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ Read More »

ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ.

ಸುಬ್ರಹ್ಮಣ್ಯ: ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯ ಭಾನುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಟ್ರಸ್ಟ್ ನ ಸುಮಾರು 25 ಸ್ವಯಂಸೇವಕರನ್ನು ಒಳಗೊಂಡ  ತಂಡ ಕುಮಾರಧಾರ ಸ್ಥಾನಘಟ್ಟ, ಮುಖ್ಯ ದ್ವಾರದ ಇಕ್ಕಲಗಳಲ್ಲಿ, ಹಾಗೂ ಮುಖ್ಯ ರಸ್ತೆಯಲ್ಲಿ ಸ್ವಚ್ಛತೆ ಮಾಡಿದರು. ನವರಾತ್ರಿಯ ರಜಾ ದಿನಗಳಂದು ಹಾಗೂ ಶಾಲೆಗಳಿಗೆ ರಜೆ  ಇದ್ದುದ ರಿಂದ  ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿ ಸಿದ್ದರು .ಇದರಿಂದ ಕುಮಾರಧಾರ ಸ್ಥಾನಘಟ್ಟದ ಬಳಿ, ದ್ವಾರದ ಅಕ್ಕ ಪಕ್ಕದಲ್ಲಿ, ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ

ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ. Read More »

ಮರಳು ಪೂರೈಕೆ ಕೊರತೆ ನೀಗಿಸದಿದ್ದಲ್ಲಿ ಪ್ರತಿಭಟನೆ | ದಕ್ಷಿಣ ಕನ್ನಡ ಜಿಲ್ಲಾ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಮರಳು ಪೂರೈಕೆ ಕೊರತೆಯನ್ನು 10 ದಿನಗಳಲ್ಲಿ ನಿವಾರಿಸದಿದ್ದರೆ ನಿರ್ಮಾಣ ಚಟುವಟಿಕೆ ಸ್ಥಗಿತಗೊಳಿಸಿ ಕಾರ್ಮಿಕರನ್ನೂ ಸೇರಿಸಿಕೊಂಡು ಪ್ರತಿಭಟನೆ ನಡೆಸಲಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ. ಎಸೋಸಿಯೇಷನ್‌ ಅಧ್ಯಕ್ಷ ಮಹಾಬಲ ಕೊಟ್ಟಾರಿಯವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನೈಸರ್ಗಿಕ ಮರಳು ಯಥೇಚ್ಚವಾಗಿದೆ. ಆದರೆ ಅದರ ಪೂರೈಕೆ ಸಮರ್ಪಕವಾಗಿ ಆಗದ ಕಾರಣ ಗುತ್ತಿಗೆದಾರರು ಮತ್ತು ಸಾರ್ವಜನಿಕರು ಕಾಳಸಂತೆಯಲ್ಲಿ ದುಬಾರಿ ದರಕ್ಕೆ ಮರಳನ್ನು ಖರೀದಿಸುವ ಸ್ಥಿತಿ ನಿರ್ಮಾಣವಾಗಿದೆ. ಈ

ಮರಳು ಪೂರೈಕೆ ಕೊರತೆ ನೀಗಿಸದಿದ್ದಲ್ಲಿ ಪ್ರತಿಭಟನೆ | ದಕ್ಷಿಣ ಕನ್ನಡ ಜಿಲ್ಲಾ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ Read More »

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ

ಸುಳ್ಯ : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಶುಕ್ರವಾರ ನಡೆದಿದೆ. ಸುಳ್ಯ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬವರ ಮಗ ಸೈಬಿನ್ ಈ ಕೃತ್ಯ ಎಸಗಿದವರು. ನಿನ್ನೆ ಗುತ್ತಿಗಾರು ಪೇಟೆಗೆ ಸೈಬಿನ್  ಆಗಮಿಸಿದ್ದು, ಎಲ್ಲರ ಜೊತೆ ಸಂತೋಷದಿಂದ ಮಾತನಾಡಿದ್ದ ಎನ್ನಲಾಗಿದೆ. ಸೈಬಿನ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಅವರ ಹಳೆ ಮನೆಯ ಪಕ್ಕ ಜಮಾಯಿಸಿದ್ದರು. ಈ ಸಂದರ್ಭ  ಪೊಲೀಸರು ಆಗಮಿಸಿ ಜನರನ್ನು ಚದುರಿಸಿದರು ಎಂದು ತಿಳಿದು ಬಂದಿದೆ.

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ Read More »

ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಂಕಿತಾ ಮೃತ್ಯು

ಉಜಿರೆ: ಬೈಕ್ ಡಿಕ್ಕಿ ಹೊಡೆದ ಪರಿಣಾಮ 3ನೇ ತರಗತಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ಉಜಿರೆಯಲ್ಲಿ ನಡೆದಿದೆ. ದಿ.ಅಶೋಕ್ ಹಾಗೂ ಜಯಶ್ರೀ ದಂಪತಿ ಪುತ್ರಿ ಅಂಕಿತಾ ಮೃತಪಟ್ಟ ವಿದ್ಯಾರ್ಥಿನಿ ಬದನಾಜೆ ಹಿ.ಪ್ರಾ. ಶಾಲೆಯ ಎದುರು ರಸ್ತೆ ದಾಟುತ್ತಿರುವ ಸಂದರ್ಭ ಬೈಕ್‍ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಅಂಕಿತಾ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಂಕಿತಾ ಮೃತ್ಯು Read More »

ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸುಳ್ಯ: ಉದ್ಯಮಿಯೊಬ್ಬರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೈರಿ ರಿಚ್ ಐಸ್‍ ಕ್ರೀಂ ಉದ್ಯಮಿ ಕನಕಮಜಲಿನ ಗಿರಿಯಪ್ಪ ಗೌಡರ ಸೊಸೆ, ರಾಜೇಶ್ ಎಂಬವರ ಪತ್ನಿ ಐಶ್ವರ್ಯ (26) ಈ ಕೃತ್ಯ ಎಸಗಿದವರು. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿ ಪುತ್ರಿಯಾಗಿರುವ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್‍ ಅವರನ್ನು ವಿವಾಹವಾಗಿದ್ದು, ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಪತಿ ರಾಜೇಶ್ ಐಸ್‍ ಕ್ರೀಂ ಪಾರ್ಲರ್ ನಡೆಸಿಕೊಂಡು ಬೆಂಗಳೂರಿನಲ್ಲೇ ವಾಸವಾಗಿದ್ದರು. ಅವರ ತಾಯಿಯೂ

ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ಹುಲಿ ವೇಷದ ತಂಡಗಳ ವಿಚಾರಕ್ಕೆ ಗಲಾಟೆ: ಮೂವರಿಗೆ ಚೂರಿ ಇರಿತ | ಮೆಲ್ಕಾರ್ ನಲ್ಲಿ ಘಟನೆ

ಬಂಟ್ವಾಳ: ಹುಲಿ ವೇಷದ ತಂಡಗಳ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಮೂವರಿಗೆ ಚೂರಿ ಇರಿತವಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು. ಶೋಧನ್, ಯತೀಶ್, ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ತಂಡದವರು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದಿದ್ದ ಜಗಳ ನಡೆದಿತ್ತು. ನಿನ್ನೆ ತಂಡಗಳ ನಡುವೆ ಕಲಹ ಮುಂದುವರಿದು ಮೂವರ ಮೇಲೆ ಮತ್ತೊಂದು

ಹುಲಿ ವೇಷದ ತಂಡಗಳ ವಿಚಾರಕ್ಕೆ ಗಲಾಟೆ: ಮೂವರಿಗೆ ಚೂರಿ ಇರಿತ | ಮೆಲ್ಕಾರ್ ನಲ್ಲಿ ಘಟನೆ Read More »

ಕಾವೇರುತ್ತಿರುವ ಹುಲಿಉಗುರು ಪೆಂಡೆಂಟ್ ಧಾರಣೆ ಪ್ರಕರಣ | ವನ್ಯಜೀವಿ ಅಂಗಗಳ ಸಂಗ್ರಹ ಪ್ರಕರಣ ತನಿಖೆಗೆ ವಿಶೇಷ ತಂಡ ರಚನೆ

ಮಂಗಳೂರು: ಹುಲಿಉಗುರು ಪ್ರಕರಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದಂತೆ ವನ್ಯಜೀವಿ ಹಾಗೂ ಅದರ ಅಂಗಗಳ ಸಂಗ್ರಹ ಪ್ರಕರಣದ ತನಿಖೆಗೆ ವನ್ಯಜೀವಿ ಸಂರಕ್ಷಣಾಧಿಕಾರಿಗಳನ್ನು ಒಳಗೊಂಡ ಮೂರು ಸದಸ್ಯರ ಸಮಿತಿಯನ್ನು ಅರಣ್ಯ ಇಲಾಖೆ ರಚಿಸಿ ಸೂಕ್ತ ಕ್ರಮಕ್ಕೆ ಇದೀಗ ಮುಂದಾಗಿದೆ. ಈ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಸೆಲೆಬ್ರಿಟಿಗಳು ಸೇರಿದಂತೆ ಮತ್ತಿತರರು ಹುಲಿಉಗುರು ಪೆಂಡೆಂಟ್  ಧರಿಸಿರುವುದು ಕಂಡು ಬಂದಿದ್ದು, ಇದು ಕಾನೂನು ಪ್ರಕಾರ ಅಪರಾಧವಾಗಿರುವುದರಿಂದ ಪ್ರಾಣಿಗಳ ವಧೆ ಮಾಡಿ ಅಂಗಾಂಗ ಸಂಗ್ರಹದಂತಹ ಪ್ರಕರಣವನ್ನು ತನಿಖೆಗೊಳಪಡಿಸಿ ಸೂಕ್ತ

ಕಾವೇರುತ್ತಿರುವ ಹುಲಿಉಗುರು ಪೆಂಡೆಂಟ್ ಧಾರಣೆ ಪ್ರಕರಣ | ವನ್ಯಜೀವಿ ಅಂಗಗಳ ಸಂಗ್ರಹ ಪ್ರಕರಣ ತನಿಖೆಗೆ ವಿಶೇಷ ತಂಡ ರಚನೆ Read More »

error: Content is protected !!
Scroll to Top