ದಕ್ಷಿಣ ಕನ್ನಡ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಕ್ರಮ ಬುಧವಾರ ನಡೆಯಿತು. ಮಂಗಳೂರು ಸರ್ವಜ್ಞ ಅಕಾಡೆಮಿ ನಿರ್ದೇಶಕ ಸುರೇಶ್ ಎಂ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಆರತಿ ಕೆ. ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ಸಂಯೋಜಕ ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಕ್ಷಿತ್ ಸ್ವಾಗತಿಸಿದರು. ವಿದ್ಯಾರ್ಥಿ ವಿಜ್ಞೇಶ್ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ Read More »

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ

ಮಂಗಳೂರು: ತುಳುವೆರೆ ಆಯನೊ ಕೂಟದ ವತಿಯಿಂದ ಪ್ರಥಮ ಬಾರಿಗೆ ತುಳು ಭಾಷೆಯಲ್ಲಿ ಭಾಗವತಿಕೆ ಸಹಿತ ಶ್ರೀದೇವಿ ಮಹಾತ್ಮೆ ಯಕ್ಷಗಾನವು ‘ಸಿರಿ ದೇವಿ ಮೈಮೆ’ ಎಂಬ ಹೆಸರಿನಲ್ಲಿ ಸೆ. 30ರಂದು ನಗರದ ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಕೂಟದ ಅಧ್ಯಕ್ಷೆ ಶಮಿನಾ ಆಳ್ವ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಪರಾಹ್ನ 2 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೂಟದ 2023-24ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ನಡೆಯಲಿದೆ. ಕಾರ್ಯಕ್ರಮದಲ್ಲಿ

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ Read More »

ಸೆ. 28ರಿಂದ ಅ. 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿಯಿಂದ ಉದ್ಘಾಟನೆ

ಧರ್ಮಸ್ಥಳ: 25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅ.4 ರ ವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಸೆ.28 ಗುರುವಾರ ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು. ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು. ಅ. 4ರಂದು ನಡೆಯುವ ಸಮಾರೋಪ ಸಮಾರಂಭ ಬೆಳಿಗ್ಗೆ

ಸೆ. 28ರಿಂದ ಅ. 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿಯಿಂದ ಉದ್ಘಾಟನೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಾಗಾರ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ಸಿಡಿಎಸ್ಇ (ಯು.ಪಿ.ಎಸ್.ಸಿ) ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಸೇನೆಯ ಪ್ರಶಿಕ್ಷಣಾರ್ಥಿ ಅಜಿತೇಶ್ ಪಿ.ಎಸ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಭಾರತೀಯ ಸೇನೆಯಲ್ಲಿ ಸಿಡಿಎಸ್ಇ ಪರೀಕ್ಷೆ ತೇರ್ಗಡೆಯಾದವರಿಗೆ ಇರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲ ಡಾ. ದಿನೇಶ್ ಪಿಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸೇನೆಯ ಉದ್ಯೋಗಾವಕಾಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್.ಆರ್. ಪ್ಲೇಸ್ಮೆಂಟ್ ಘಟಕದ ಸಂಯೋಜಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಾಗಾರ Read More »

ಎಸ್‌ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್‌ ಜೈನ್‌

ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ನೂತನ ಅಧ್ಯಕ್ಷರಾಗಿ ಕಾರ್ಕಳ ಶಿಲ್ಪಾ ಡಿಜಿಟಲ್ ಸ್ಟುಡಿಯೋ ಮಾಲಕ‌ ನೆಲ್ಲಿಕಾರು ಪದ್ಮಪ್ರಸಾದ್‌ ಜೈನ್‌ ಆಯ್ಕೆಯಾಗಿದ್ದಾರೆ.  ಸೆ. 26ರಂದು ಮಂಗಳೂರು ಸೆಬಾಸ್ಟಿಯನ್‌ ಹಾಲ್‌ನಲ್ಲಿ ಎಸ್‌ಕೆಪಿಎ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನ್ಯೂಸ್‌ ಕಾರ್ಕಳ ಸಲಹಾ ಸಮಿತಿ ಸದಸ್ಯರಾಗಿ, ಜೇಸಿಸ್‌ ಶಾಲಾ ಉಪಾಧ್ಯಕ್ಷರೂ ಆಗಿರುವ ಪದ್ಮಪ್ರಸಾದ್‌ ಜೈನ್‌ ಅವರು ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಓಶಿಯನಿಕ್‌ ಇನ್‌ಫ್ರಾ ಸಂಸ್ಥೆಯ ಪಾಲುದಾರರಾಗಿರುವ ಪದ್ಮಪ್ರಸಾದ್‌ ಅವರು ಯಶಸ್ವಿ ಉದ್ಯಮಿಯೂ

ಎಸ್‌ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್‌ ಜೈನ್‌ Read More »

ಶಾಸಕಿ ಮನೆಯಿಂದಲೇ ಆರಂಭವಾದ ಕಾಲುಬಾಯಿ ಲಸಿಕಾ ಅಭಿಯಾನ

ಸುಳ್ಯ: ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಅವರ ಮನೆಯಲ್ಲಿ ಚಾಲನೆ ನೀಡಲಾಯಿತು. ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ ನಡೆದ ಅಭಿಯಾನವನ್ನು ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಹರ್ಷನ್ ಕೆ.ವಿ., ಜಾನಕಿ ಮುರುಳ್ಯ, ವಸಂತ ನಡುಬೈಲು, ಸೀತಾರಾಮ ಗೌಡ, ಭುವನೇಶ್ವರ ಗೌಡ, ವಸಂತ ಹುದೇರಿ, ನಿತಿನ್ ಪ್ರಭು, ಅಜಿತ್ ಕೆ ವಿ, ಸಿಬ್ಬಂದಿಗಳು ಹಾಗೂ

ಶಾಸಕಿ ಮನೆಯಿಂದಲೇ ಆರಂಭವಾದ ಕಾಲುಬಾಯಿ ಲಸಿಕಾ ಅಭಿಯಾನ Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023” ಪ್ರದಾನ

ಸುಳ್ಯ: ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ, ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಬೆಳಗಾವಿ ಗೋಕಾಕ ನಾಡಿನ ಸಮಾಚಾರ ಸೇವಾ ಸಂಘ ಶಿಕ್ಷಕರ ದಿನಾಚರಣೆ ನಿಮಿತ್ಯ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ನ್ನು ಪ್ರದಾನ ಮಾಡಲಾಯಿತು. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಸೆ.24 ಭಾನುವಾರ ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023” ಪ್ರದಾನ Read More »

ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬಿನಿಂದ ಮಹಿಳೆಯರಿಗೆ ಪೌಷ್ಟಿಕ ಆಹಾರ ಶಿಬಿರ, ಸ್ಪರ್ಧೆ

ಸುಬ್ರಹ್ಮಣ್ಯ: ಇಲ್ಲಿನ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಏನೇಕಲ್ಲು ಅಂಗನವಾಡಿ ಶಾಲೆಯಲ್ಲಿ ಮಹಿಳೆಯರಿಗಾಗಿ ಪೌಷ್ಟಿಕ ಆಹಾರ ತಯಾರಿ ಹಾಗೂ ಸ್ಪರ್ಧೆ ನಡೆಯಿತು.  ಏನೆಕಲ್ಲು ಅಂಗನವಾಡಿಯ ಪೋಷಕರು ಹಾಗೂ ಆಸುಪಾಸಿನ ಸುಮಾರು 50 ಮಹಿಳೆಯರು ಈ ಪೌಷ್ಟಿಕ ಆಹಾರ ತಯಾರಿ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆಯನ್ನು ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಭಾನುಮತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ 25 ಮಕ್ಕಳ ಕುರ್ಚಿಗಳನ್ನು ಹಾಗೂ 20 ನೀರಿನ

ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬಿನಿಂದ ಮಹಿಳೆಯರಿಗೆ ಪೌಷ್ಟಿಕ ಆಹಾರ ಶಿಬಿರ, ಸ್ಪರ್ಧೆ Read More »

ಕಾರು ಢಿಕ್ಕಿಯಾಗಿ ಆಟೋ ಚಾಲಕ ವಿನಾಯಕ ಪೈ ಮೃತ್ಯು!

ಬಂಟ್ವಾಳ: ಕಾರು ಢಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ. ಕೆಂಪುಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿ. ವಿನಾಯಕ ಪೈ ತಮ್ಮ ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಗ್ಗಿನ ಉಪಹಾರ ತರಲೆಂದು ವಗ್ಗದ ಹೊಟೇಲೊಂದಕ್ಕೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ವಿನಾಯಕ ಪೈ ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ

ಕಾರು ಢಿಕ್ಕಿಯಾಗಿ ಆಟೋ ಚಾಲಕ ವಿನಾಯಕ ಪೈ ಮೃತ್ಯು! Read More »

ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದ ಮರ: ಸಾವು

ಬೆಳ್ತಂಗಡಿ : ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂದರ್ಭ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ಸೆ. 23ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಂಜಲ್ಪಳಿಕೆ ನಿವಾಸಿ ರಾಮಣ್ಣ ಗೌಡ (58) ಸಾವನ್ನಪ್ಪಿದ ವ್ಯಕ್ತಿ. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಪ್ರಯೋಜವಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದೆ.

ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದ ಮರ: ಸಾವು Read More »

error: Content is protected !!
Scroll to Top