ದಕ್ಷಿಣ ಕನ್ನಡ

ಸೌಜನ್ಯ ಪ್ರಕರಣ : ಎಲ್ಲಿಯಾದರೂ ನನ್ನನ್ನು ಕೊಂದರೆ ಮುಗಿಯಿತು : ಸಂಚಲನ ಮೂಡಿಸಿದ ವಸಂತ ಬಂಗೇರ ಹೇಳಿಕೆ

ಬೆಳ್ತಂಗಡಿ : ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದ ನ್ಯಾಯ ಸಿಗಬಹುದು ಎಂಬ ನಂಬಿಕೆಯಿತ್ತು. ಆದರೆ ಸತ್ಯ ಹೊರಬಂದಿಲ್ಲ, ಸಿಬಿಐ ತನಿಖೆ ಹಳಿ ತಪ್ಪಿದ ವಿಚಾರ ಆಗಲೇ ಗೊತ್ತಾಗಿತ್ತು. ತನಿಖೆಯಲ್ಲಿ ಏನಾಯಿತು ಎಂಬುದು ಗೊತ್ತಿದೆ. ಅದನ್ನು ಈಗ ಹೇಳುವುದಿಲ್ಲ. ಆದರೆ ಒಂದಲ್ಲ ಒಂದು ದಿನ ಅದಕ್ಕೆ ಕಾಲ ಬರುತ್ತೆ. ಯಾರು ಇದನ್ನು ತಪ್ಪಿಸಿದ್ದಾರೆ, ಯಾರು ಅನ್ಯಾಯ ಮಾಡಿದ್ದಾರೆ, ಯಾರು ತೊಂದರೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸುತ್ತೇನೆ. ಎಲ್ಲಿಯಾದರೂ ನನ್ನನ್ನು ಕೊಂದರೆ ಮುಗಿಯಿತು. ಇಲ್ಲವೆಂದರೆ ಎಲ್ಲವನ್ನೂ ಹೇಳುತ್ತೇನೆ, ನನ್ನ ಜೀವನದ ಅಂತ್ಯದೊಳಗೆ […]

ಸೌಜನ್ಯ ಪ್ರಕರಣ : ಎಲ್ಲಿಯಾದರೂ ನನ್ನನ್ನು ಕೊಂದರೆ ಮುಗಿಯಿತು : ಸಂಚಲನ ಮೂಡಿಸಿದ ವಸಂತ ಬಂಗೇರ ಹೇಳಿಕೆ Read More »

ಸೌಜನ್ಯ ನೈಜ ಕೊಲೆ ಆರೋಪಿಗಳ ಪತ್ತೆಗಾಗಿ ಕಾರಿಂಜೇಶ್ವರ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ

ಬಂಟ್ವಾಳ : ಸೌಜನ್ಯರನ್ನು ಕ್ರೂರವಾಗಿ ಅತ್ಯಾಚಾರ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆಯಾಗಲೆಂದು ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಕಾರಣಿಕ ಕ್ಷೇತ್ರ ಕಾರಿಂಜೇಶ್ವರ ಸನ್ನಿದಿಯಲ್ಲಿ ಸೋಮವಾರ ಸಾಮೂಹಿಕ  ಪ್ರಾರ್ಥನೆ ಮಾಡಲಾಯಿತು. ನೈಜ ಆರೋಪಿಗಳಿಗೆ  ಕಾನೂನು ಶಿಕ್ಷೆ ಆಗಲಿ  ಆದರೂ ದೈವ ದೇವರ ಮೇಲೆ ನಂಬಿಕೆ ಇರಿಸಿದವರು ನಾವು ತಪ್ಪು ಮಾಡಿದವರಿಗೆ ಕಾನೂನಿನಲ್ಲಿ ತಪ್ಪಿಸಿಕೊಂಡರು ಕಾರ್ಣಿಕ ಕ್ಷೇತ್ರವಾದ ಕಾರಿಂಜೇಶ್ವರ ದೇವರ ಅನುಗ್ರಹದಿಂದ ನಿಜವಾದ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಹುಚ್ಚು ಹಿಡಿದು ಅವರೇ ಆರೋಪಿಗಲೆಂದು ಸಮಾಜಕ್ಕೆ ಆದಷ್ಟು ಬೇಗ

ಸೌಜನ್ಯ ನೈಜ ಕೊಲೆ ಆರೋಪಿಗಳ ಪತ್ತೆಗಾಗಿ ಕಾರಿಂಜೇಶ್ವರ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ Read More »

ಬಹುಮಹಡಿಯಿಂದ ಹಾರಿ ಉದ್ಯಮಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಉದ್ಯಮಿಯೊಬ್ಬರು ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರಿನ ಬೆಂದೂರುವೆಲ್‍ ನಲ್ಲಿ ಈ ಘಟನೆ ನಡೆದಿದ್ದು, ಮೋಹನ್ ಅಮೀನ್ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಹುಮಹಡಿಯಿಂದ ಹಾರಿ ಉದ್ಯಮಿ ಆತ್ಮಹತ್ಯೆ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳನ್ನ ಪತ್ತೆ ಹಚ್ಚುವಂತೆ ಆಗ್ರಹ | ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದಿಂದ ಪತ್ರಿಕಾಗೋಷ್ಠಿ

ಮಂಗಳೂರು : ಉಜಿರೆಯಲ್ಲಿ 2011ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಮಂಗಳೂರಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಎಚ್ಚರಿಸಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಒಕ್ಕಲಿಗರ ಯಾನೆ  ಗೌಡರ ಸೇವಾ ಸಂಘದ ಅಧ್ಯಕ್ಷ ಗುರುದೇವ್ ಯು.ಬಿ. ಮಾತನಾಡಿ, ಸೌಜನ್ಯ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿ ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ. ಪ್ರಕರಣದ ನೈಜ ಆರೋಪಿಗಳು ಯಾರು

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳನ್ನ ಪತ್ತೆ ಹಚ್ಚುವಂತೆ ಆಗ್ರಹ | ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದಿಂದ ಪತ್ರಿಕಾಗೋಷ್ಠಿ Read More »

ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ ನಡೆಯಿತು. ದ.ಕ.ಜಿಲ್ಲಾ ಪಂಚಾಯಿತಿ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಪನ್ನೆ, ಶಿಕ್ಷಣ ಇಲಾಖೆ ಅಧಿಕಾರಿ ಶ್ರೀನಾಥ್ ರೈ

ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ Read More »

ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ | ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ಸಂಘಟನೆಯಿಂದ ಹಕ್ಕೊತ್ತಾಯ ಸಭೆ

ಉಜಿರೆ: ಸೌಜನ್ಯ ಸಾವಿಗೆ ನ್ಯಾಯ ಕೊಡಿ, ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ ಶ್ಲೋಗನ್‍ ನೊಂದಿಗೆ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ಸಂಘಟನೆ ಮೂಲಕ ಶ್ರೀ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ಬೃಹತ್ ಹಕ್ಕೊತ್ತಾಯ ಸಭೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ವಿವಿಧ ರೀತಿಯಲ್ಲಿ ಸುಳ್ಳು ಆರೋಪಗಳನ್ನು ಮಾಡಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಹಿನ್ನಲೆಯಲ್ಲಿ ಈ ಬೃಹತ್ ಹಕ್ಕೊತ್ತಾಯ ಸಭೆಯನ್ನು

ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ | ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ಸಂಘಟನೆಯಿಂದ ಹಕ್ಕೊತ್ತಾಯ ಸಭೆ Read More »

ವಿದ್ಯಾರ್ಥಿನಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕೆ ತಂಡದಿಂದ ಹಲ್ಲೆ

ಬೆಳ್ತಂಗಡಿ : ವಿದ್ಯಾರ್ಥಿನಿಯೋರ್ವಳನ್ನು ಅನ್ಯ ಕೋಮಿನ ಯುವಕನೊಬ್ಬ ಆಟೋ ರಿಕ್ಷಾದಲ್ಲಿ ಡ್ರಾಪ್ ಮಾಡದ್ದಕ್ಕೆ ತಂಡವೊಂದು ಆತನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು. ಬುಧವಾರ ರಾತ್ರಿ ಬೆಂಗಳೂರಿಗೆ ತೆರಳಲು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕ ಆಟೋ ಮೊಹಮ್ಮದ್ ಆಶೀಕ್ ಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ

ವಿದ್ಯಾರ್ಥಿನಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕೆ ತಂಡದಿಂದ ಹಲ್ಲೆ Read More »

ಜು.6 : ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ | ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರಿಂದ ಶಿಲಾನ್ಯಾಸ

ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.6 ಭಾನುವಾರ ನಡೆಯಲಿದೆ. ವಿಡಿಯೋ ಕಾನ್ಸೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶೀಲಾನ್ಯಾಸ ನೆರವೇರಿಸಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವು ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಪ್ರಧಾನಿ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ಅವರನ್ನು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್

ಜು.6 : ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ | ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರಿಂದ ಶಿಲಾನ್ಯಾಸ Read More »

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ

ಮಂಗಳೂರು: ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಿಎಂ ಹೇಳಿಕೆಗೆ ಕರಾವಳಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮತ್ತಿತರರು ಈ ಬಗ್ಗೆ ಅಂಕಿಅಂಶ ಸಹಿತ ಹೇಳಿಕೆಗಳನ್ನು ನೀಡಿದ್ದಾರೆ. ನಿನ್ನೆ ಉಡುಪಿ ಮತ್ತು ಮಂಗಳೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ Read More »

ಸೌಜನ್ಯ ಕೊಲೆ ಪ್ರಕರಣ | ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಂಡುವಂತೆ ಡಾ.ಹೆಗ್ಗಡೆಯವರಿಂದ ಮನವಿ

ಬೆಳ್ತಂಗಡಿ : ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿ ಸರಕಾರ ಮತ್ತು ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು  ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸರಕಾರವನ್ನು ಒತ್ತಾಯಿಸಿದ್ದಾರೆ. ಪ್ರಸ್ತುತ ಸೌಜನ್ಯ ಸಾವು ಪ್ರಕರಣ ನ್ಯಾಯಾಲಯ, ಸರಕಾರ ಹಾಗೂ ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸುತ್ತೇನೆ ಹಾಗೂ ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ,

ಸೌಜನ್ಯ ಕೊಲೆ ಪ್ರಕರಣ | ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಂಡುವಂತೆ ಡಾ.ಹೆಗ್ಗಡೆಯವರಿಂದ ಮನವಿ Read More »

error: Content is protected !!
Scroll to Top