ದಕ್ಷಿಣ ಕನ್ನಡ

ಬೆಂಕಿ ತಗುಲಿ ಹಿರಿಯ ನಾಗರಿಕೆ ಸಾವು!!

ಮಂಗಳೂರು: ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಹಿರಿಯ ನಾಗರಿಕರೋರ್ವರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೂಳೂರು ಪೊಯ್ಯೇಲು ನಿವಾಸಿ ದಿ. ಮದನಪ್ಪ ಶೆಟ್ಟಿ ಅವರ ಪತ್ನಿ ಸುನೀತಾ ಎಂ. (84) ಮೃತಪಟ್ಟವರು. ನವಂಬರ್ 14ರಂದು ದೇವರ ಕೋಣೆಯಲ್ಲಿಟ್ಟಿದ್ದ ದೀಪದಿಂದ ಸೀರೆಗೆ ಬೆಂಕಿ ಹತ್ತಿಕೊಂಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬೆಂಕಿ ತಗುಲಿ ಹಿರಿಯ ನಾಗರಿಕೆ ಸಾವು!! Read More »

ಸುರಕ್ಷತಾ ವೈಫಲ್ಯ: ಪ್ಯಾರಾ ಸೈಲಿಂಗ್’ನಿಂದ ಬಿದ್ದು ಗಾಯಗೊಂಡ ಬಾಲಕ

ಮಲ್ಪೆ: ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಮಲ್ಪೆ ಬೀಚ್ನಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಇಕ್ಯಾನ್ ಚೌಧರಿ (12) ಗಾಯಗೊಂಡ ಬಾಲಕ. 10 ಮೀಟರ್ ಎತ್ತರದಿಂದ ಬೋಟಿಗೆ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿದೆ. ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಸುರಕ್ಷತಾ ವೈಫಲ್ಯ: ಪ್ಯಾರಾ ಸೈಲಿಂಗ್’ನಿಂದ ಬಿದ್ದು ಗಾಯಗೊಂಡ ಬಾಲಕ Read More »

ಖ್ಯಾತ ಯೂರಾಲಜಿಸ್ಟ್ ಡಾ. ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನ

ಮಂಗಳೂರು: ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ (ಮೂತ್ರಶಾಸ್ತ್ರ ವಿಭಾಗ) ತಜ್ಞರಾಗಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಜಿ.ಜಿ. ಲಕ್ಷ್ಮಣ ಪ್ರಭು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. 61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ. ಮೂರು ದಶಕಕ್ಕೂ ಹೆಚ್ಚು ಅನುಭವ ಹೊಂದಿದ್ದ ಡಾ. ಜಿ.ಜಿ. ಲಕ್ಷ್ಮಣ ಪ್ರಭು ಹಲವು ವರ್ಷಗಳ ಕಾಲ ಕೆಎಂಸಿ

ಖ್ಯಾತ ಯೂರಾಲಜಿಸ್ಟ್ ಡಾ. ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನ Read More »

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ರೀಮಾ ಕೆ.ಎಚ್‍. ಅವರನ್ನು ಸನ್ಮಾನಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍. ಹುದೇರಿ ಅವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ಶ್ರೀಮಾ ಕೆ.ಎಚ್‍. ಅವರನ್ನು ಶಾಲು ಹೊದಿಸಿ, ಪೇಟ ತೊಡಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅಧ್ಯಕ್ಷ ವಸಂತ ನಡುಬೈಲು, ಮುರುಳ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಾನಕಿ ಮುರುಳ್ಯ, ಗ್ರಾಮ

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ರೀಮಾ ಕೆ.ಎಚ್‍. ಅವರನ್ನು ಸನ್ಮಾನಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ Read More »

ನ.16: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ಗುರುವಾರ ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಪರಮಪೂಜ್ಯ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ರಾಜ್ಯ ಸರಕಾರ ಸಭಾಪತಿ ಯು.ಟಿ.ಖಾದರ್ ಕಚೇರಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ

ನ.16: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ Read More »

ಸುಬ್ರಹ್ಮಣ್ಯ ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರದಾನ | ಪ್ರಶಸ್ತಿ ಸ್ವೀಕರಿಸಿದ ಎಸ್‍ ಆರ್‍ ಕೆ ಲ್ಯಾಡರ್ಸ್ ಮಾಲಕ ಕೇಶವ                             

ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರತಿವರ್ಷದಂತೆ ಅತ್ಯುತ್ತಮ ಸಾಧಕರಿಗೆ ನೀಡುವ  ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ನಡೆಯಿತು. ಈ ಬಾರಿಯ ಪ್ರಶಸ್ತಿಯನ್ನು ಸಾಧಕ ಉದ್ಯಮಿ ಮೂಲತ ಬಿಳಿ ನೆಲೆಯ ನೋಣಯ್ಯ ಉಗ್ರಾಣಿಯವರ ಸುಪುತ್ರ ಎಸ್. ಆರ್. ಕೆ .ಲ್ಯಾಡರ್ಸ್ ನ ಮಾಲಕರಾದ ಕೇಶವ ಅವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಕೇಶವ ರವರು, ದಿವಂಗತ ಕುಮಾರ ನಾಯರ್ ಅವರ ದೂರ ದೃಷ್ಟಿಯಿಂದ ಸಾವಿರಾರು ಮಕ್ಕಳಿಗೆ ಇಂದು ಉನ್ನತ ಮಟ್ಟದ

ಸುಬ್ರಹ್ಮಣ್ಯ ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರದಾನ | ಪ್ರಶಸ್ತಿ ಸ್ವೀಕರಿಸಿದ ಎಸ್‍ ಆರ್‍ ಕೆ ಲ್ಯಾಡರ್ಸ್ ಮಾಲಕ ಕೇಶವ                              Read More »

ಚೆನ್ನಾಗಿ ಕಾಣುತ್ತಿಲ್ಲವೆಂದು 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೈದರೇ ವೈದ್ಯಕೀಯ ವಿದ್ಯಾರ್ಥಿನಿ?

ಮಂಗಳೂರು: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ಕಲಿಯುವ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೈದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೈದ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿನಿಯು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್‌ನಲ್ಲಿದ್ದರು‌‌‌. “ತಾನು ತುಂಬಾ ತೋರ ಇದ್ದು, ಚೆನ್ನಾಗಿ ಕಾಣುತ್ತಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಡೆತ್ ನೋಟಿನಲ್ಲಿ ಬರೆದಿದ್ದಾರೆ. ಸೋಮವಾರ ಮುಂಜಾನೆ ಸುಮಾರು 3 ಗಂಟೆಗೆ ಹಾಸ್ಟೆಲ್ ಕಟ್ಟಡದ 6ನೆ ಮಹಡಿಯಿಂದ ಹಾರಿ

ಚೆನ್ನಾಗಿ ಕಾಣುತ್ತಿಲ್ಲವೆಂದು 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೈದರೇ ವೈದ್ಯಕೀಯ ವಿದ್ಯಾರ್ಥಿನಿ? Read More »

ನ.14: ಕುಕ್ಕೆ ದೇವಳದಲ್ಲಿ ಗೋಪೂಜೆ

ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ ಗೋಪೂಜೆಯನ್ನು ನ.14 ಮಂಗಳವಾರ ನೆರವೇರಲಿದೆ. ಶ್ರೀ ದೇವಳದ ಮುಂಭಾಗದಲ್ಲಿ ಸಂಜೆ 5.30ರಿಂದ 6.30ರ ನಡುವಿನ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸರ್ವ ಭಕ್ತರು ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ನ.14: ಕುಕ್ಕೆ ದೇವಳದಲ್ಲಿ ಗೋಪೂಜೆ Read More »

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ

ಸುಬ್ರಹ್ಮಣ್ಯ: ದೀನ ದಲಿತರ ಮತ್ತು ಬಡವರ ಮುಖದಲ್ಲಿ ನಗು ತರುವ ನಮ್ಮ ಅಂತರಾಷ್ಟ್ರೀಯ ಲಯನ್ಸ್ ನ ಉದ್ದೇಶದೊಂದಿಗೆ ಬಡವರ ಸೇವೆಯನ್ನು ನಿರಂತರವಾಗಿ ಮುಂದುವರಿಸೋಣ. ಹಾಗೆಯೇ ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನು ಅರ್ಥೈಸಿಕೊಂಡು ಅವುಗಳಿಗೆ ಬೇಕಾದ ಆಹಾರವನ್ನು ಕಾಡಿನ ಅಂಚಿನಲ್ಲಿ ಸುಲಭವಾಗಿ ಸಿಗುವ ಹಾಗೆ ಬೀಜ ಬಿತ್ತನೆ ಹಾಗೂ ಹಣ್ಣಿನ ಗಿಡಗಳನ್ನು ಹೆಚ್ಚಾಗಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಎಂದು ಅಂತರಾಷ್ಟ್ರೀಯ ಲಯನ್ಸ್  ಜಿಲ್ಲೆಯ 317 ಡಿ ಪ್ರಾಂತೀಯ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ Read More »

ಜಾಲ್ಸೂರು-ಕಾಸರಗೋಡು ರಸ್ತೆಯಲ್ಲಿ ಆನೆ ಪ್ರತ್ಯಕ್ಷ | ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡ ಬೈಕ್ ಸವಾರ

ಜಾಲ್ಸೂರು: ಜಾಲ್ಲೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಸುಳ್ಯ ಸಮೀಪದ ಪಂಜಿಕಲ್ಲಿನಲ್ಲಿ ಶನಿವಾರ ನಡೆದಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ  ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿವೆ. ಕಾಸರಗೋಡು

ಜಾಲ್ಸೂರು-ಕಾಸರಗೋಡು ರಸ್ತೆಯಲ್ಲಿ ಆನೆ ಪ್ರತ್ಯಕ್ಷ | ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡ ಬೈಕ್ ಸವಾರ Read More »

error: Content is protected !!
Scroll to Top