ಸೆ. 25: ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ವೇದಿಕೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25ರಂದು ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 25: ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ವೇದಿಕೆ Read More »









