ಕೋವಿಡ್ ಮುನ್ನೆಚ್ಚರಿಕೆ ಪಾಲಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಕೋವಿಡ್ ಸೋಂಕಿನ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಚೀನಾ, ಅಮೆರಿಕ ಮೊದಲಾದ ದೇಶಗಳಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದ್ದರಿಂದ ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಇದರಂತೆ ದ.ಕ. ಜಿಲ್ಲೆಯಲ್ಲೂ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಕೋವಿಡ್ ಮುನ್ನೆಚ್ಚರಿಕೆ ಪಾಲಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ Read More »










