ದಕ್ಷಿಣ ಕನ್ನಡ

ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್

ಪುತ್ತೂರು: ಮತ ಎಣಿಕೆ ಕಾರ್ಯ ನಡೆಯುವ ಮೇ 13ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಆದೇಶಿಸಿದ್ದಾರೆ. ಮೇ 13ರ ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು […]

ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್ Read More »

ಪುರುಷರಕಟ್ಟೆ ವ್ಯಕ್ತಿಯ ಕಾರು ಸೋಮೇಶ್ವರ ಸಮುದ್ರದ ರುದ್ರಪಾದೆಯಲ್ಲಿ ಪತ್ತೆ | ವ್ಯಕ್ತಿಗಾಗಿ ಪೊಲೀಸರಿಂದ ಶೋಧ ಕಾರ್ಯ

ಉಳ್ಳಾಲ: ನಾಪತ್ತೆಯಾದ ವ್ಯಕ್ತಿಯೊಬ್ಬರ ಕಾರು ಹಾಗೂ ಚಪ್ಪಲಿ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಪತ್ತೆಯಾಗಿದ್ದು, ಸಂಶಯಕ್ಕೆ ಎಡೆಮಾಡಿದೆ. ಪುರುಷರಕಟ್ಟೆ ನಿವಾಸಿ ವಸಂತ ಎಂಬವರೇ ನಾಪತ್ತೆಯಾಗಿದ್ದ ವ್ಯಕಿಯಾಗಿದ್ದು, ಬುಧವಾರ ಮುಂಜಾನೆ ಮನೆಯಿಂದ ಕಾರಿನಲ್ಲಿ ಸೋಮೇಶ್ವರ ಕಡೆ ತೆರಳಿದ್ದರು. ಬೆಳಿಗ್ಗೆಯಿಂದ ಅವರ ಕಾರು ಸೋಮೇಶ್ವರದ ಸಮುದ್ರದ ಬಳಿ  ಕಂಡು ಬಂದಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಕಾರನ್ನು ಪರಿಶೀಲನೆ ನಡೆಸಿದ್ದು, ಕಾರಿನಲ್ಲಿ ಮೊಬೈಲ್, ಶೂ, ಆಧಾರ್ ಕಾಡ ಪತ್ತೆಯಾಗಿದೆ. ವಸಂತರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು

ಪುರುಷರಕಟ್ಟೆ ವ್ಯಕ್ತಿಯ ಕಾರು ಸೋಮೇಶ್ವರ ಸಮುದ್ರದ ರುದ್ರಪಾದೆಯಲ್ಲಿ ಪತ್ತೆ | ವ್ಯಕ್ತಿಗಾಗಿ ಪೊಲೀಸರಿಂದ ಶೋಧ ಕಾರ್ಯ Read More »

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ

ಏ. 29 ರಂದು ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಮೂಲ್ಕಿಯಲ್ಲಿ ಪ್ರಧಾನಿಯ ಬೃಹತ್‌ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೆಣವ ಹೇಳಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸೇರಿಸಿ ಒಂದೇ ಸಾರ್ವಜನಿಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯದಲ್ಲಿರುವ ಮೂಲ್ಕಿಯನ್ನು ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದೆ

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ Read More »

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ

ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದು, ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾವು 150 ಸೀಟ್ ಗೆಲ್ಲಬೇಕಾಗಿದೆ. ಕಡಿಮೆ ಸೀಟ್‌ ಗೆದ್ದಲ್ಲಿ ಶಾಸಕರನ್ನು ಬಿಜೆಪಿಯವರು ಆಪರೇಷನ್‌ ಕಮಲ ಮಾಡಿ ಕಳ್ಳ ಮಾರ್ಗದಲ್ಲಿ ಸರ್ಕಾರ ರಚಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಕಾಂಗ್ರೆಸ್‌ ಪಡೆಯುವುದು ಅಗತ್ಯ ಎಂದರು. ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಣಿಪುರಾ, ಉತ್ತರಖಂಡದಲ್ಲಿ ಶಾಸಕರ ಕಳ್ಳತನದಿಂದ ಸರಕಾರ ರಚನೆಯಾಗಿದೆ. ಆಮದು ಮಾಡಿಕೊಂಡ ಶಾಸಕರನ್ನ ಬಿಜೆಪಿ ವಾಷಿಂಗ್ ಮೆಷೀನ್ ಗೆ ಹಾಕಿದ್ರೆ

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆರಿಯಾ ಗ್ರಾಮದ ಸಿಯೊನ್ ಆಶ್ರಮದಲ್ಲಿ ಏ.23 ರಂದು ಸಂಭವಿಸಿದೆ.ಕಿಶೋರ್ ಕುಮಾರ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದು, ಮಧ್ಯಾಹ್ನದ ಊಟಕ್ಕೆ ಬಾರದೇ ಇರುವುದನ್ನು ಗಮನಿಸಿ ಆಶ್ರಮದ ಸಿಬ್ಬಂಧಿ ಜಿಬಿನ್ ಎಂಬವರು ಹೋಗಿ ನೋಡಿದಾಗ, ಹಾಲ್‌ನ ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಕಾರು ಬೈಕ್‌ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು

ಸುಳ್ಯ : ಬೆಂಗಳೂರಿನಲ್ಲಿ ನಡೆದ ಕಾರು ಬೈಕ್‌ ಡಿಕ್ಕಿ ಅಪಘಾತದಲ್ಲಿ ಕೊಲ್ಲಮೊಗ್ರ ನಿವಾಸಿಯೋರ್ವರು ಸಾವನಪ್ಪಿರುವ ಘಟನೆ ಏ.25 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿಯ ಪುತ್ರ ಯತೀಶ್ ಬಾಳೆಬೈಲು(30) ಮೃತಪಟ್ಟವರು. ಸೋಮವಾರ ಬೆಳಗ್ಗೆ ಯತೀಶ್ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು

ಕಾರು ಬೈಕ್‌ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು Read More »

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ ಭೇಟಿ

ಪುತ್ತೂರು : ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯಲಿರುವ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಪಾಲ್ಗೊಂಡಿದ್ದಾರೆ‌. ಸುಳ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ ಭೇಟಿ Read More »

ರೈಲಿನ ಟಾಯ್ಲೆಟ್‌ನಲ್ಲಿ ಮೃತದೇಹ ಪತ್ತೆ : ಹೊರಜಗತ್ತಿಗೆ ವಿಷಯ ತಿಳಿದದ್ದು 24 ತಾಸು ಬಳಿಕ

ಮುಂಬಯಿ-ಮಂಗಳೂರು ರೈಲಿನಲ್ಲಿ ನಡೆದ ಮನಕಲಕುವ ಘಟನೆ ಮಂಗಳೂರು : ರೈಲಿನಲ್ಲಿ ಮೃತಪಟ್ಟ ವ್ಯಕ್ತಿಯ ಶವ ಮುಂಬಯಿಯಿಂದ ಮಂಗಳೂರು ತನಕ ಬಂದು ವಾಪಸು ಮುಂಬಯಿಗೆ ಹೋದ ಘಟನೆ ಮುಂಬಯಿ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಂಭವಿಸಿದೆ. ರೈಲಿನಲ್ಲಿ ಪ್ರಯಾಣಿಸುವಾಗ ನಾಪತ್ತೆಯಾಗಿದ್ದಾರೆಂದು ಭಾವಿಸಿ ಈ ವ್ಯಕ್ತಿಯ ಮನೆಯವರು ಮಂಗಳೂರು ಮತ್ತು ಮುಂಬಯಿಯಲ್ಲಿ ಹಲವು ನಿಲ್ದಾಣಗಳಲ್ಲಿ ಹುಡುಕಾಡಿದ್ದರು. ರೈಲಿನ ಸಿಬ್ಬಂದಿ ಕೂಡ ಇಡೀ ರೈಲನ್ನು ಹುಡುಕಾಡಿ ರೈಲಿನಲ್ಲಿ ಪತ್ತೆಯಾಗಿಲ್ಲ ಎಂದು ವರದಿ ನೀಡಿದ್ದರು. ಆದರೆ ಶವ ಭರ್ತಿ 24 ತಾಸು ಶೌಚಾಲಯದ ಒಳಗೆ

ರೈಲಿನ ಟಾಯ್ಲೆಟ್‌ನಲ್ಲಿ ಮೃತದೇಹ ಪತ್ತೆ : ಹೊರಜಗತ್ತಿಗೆ ವಿಷಯ ತಿಳಿದದ್ದು 24 ತಾಸು ಬಳಿಕ Read More »

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್

ಮಂಗಳೂರು : ಕಾಂಗ್ರೆಸ್​​ನವರು ಧಮ್ಕಿ ಹಾಕಿ ನಾಮಪತ್ರ ವಾಪಸ್​ ಪಡೆಸಿದರು ಎಂದು ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದೆ. ಆ ಸಂದರ್ಭ ಕಾಂಗ್ರೆಸ್​ನ ಉಸ್ಮಾನ್ ಕಲ್ಲಾಪು ಸೇರಿದಂತೆ ಹಲವರು ನನ್ನನ್ನು ಕರೆದುಕೊಂಡು ಹೋದರು. ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ತೆಗೆಯುವಂತೆ ಸಹಿ ಹಾಕಿಸಿಕೊಂಡಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಕೇವಲ ಒತ್ತಡದಿಂದ ನಾಮಪತ್ರ

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್ Read More »

ಮಂಗಳೂರು : ಜಿಲ್ಲಾಧಿಕಾರಿ ರವಿಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ, ದೂರು ದಾಖಲು

ಮಂಗಳೂರು : ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಏ. 24 ರಂದು ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಎ. 20ರಂದು ಅಪರಾಹ್ನ 3:28 ಸುಮಾರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವೀಕ್ಷಕರೊಂದಿಗೆ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ತನ್ನ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ

ಮಂಗಳೂರು : ಜಿಲ್ಲಾಧಿಕಾರಿ ರವಿಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ, ದೂರು ದಾಖಲು Read More »

error: Content is protected !!
Scroll to Top