ದಕ್ಷಿಣ ಕನ್ನಡ

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ […]

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ Read More »

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ Read More »

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ : ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿನಯ್ ಯಾವ ಕಾರಣದಿಂದ ಮೃತಪಟ್ಟಿದ್ಧಾನೆ ಎಂಬುದು ಸ್ಪಷ್ಟವಾಗಿಲ್ಲ.

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ Read More »

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ(95%) ಜಿಲ್ಲೆ ಪ್ರಥಮ ಮತ್ತು ಉಡುಪಿ (95%) ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕೊಡಗು(91%) ತೃತೀಯ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಪತ್ರಿಕಾಗೋಷ್ಠಿಯಿಂದ ಹೊರಗುಳಿಯಲಿದ್ದಾರೆ. ಫಲಿತಾಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷರಾದ ರಾಮಚಂದ್ರನ್ ಆರ್ ಮಾಧ್ಯಮಗಳನ್ನುದ್ದೇಶಿಸಿ ಫಲಿತಾಂಶ ಪ್ರಕಟಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಒದಗಿಸಿದ ಅಂಕಿಅಂಶಗಳ ಪ್ರಕಾರ,

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ

ಮಾಜಿ ಶಾಸಕ ಬಾವಾಗೆ ಕೊನೆಗೂ ಸಿಗಲಿಲ್ಲ ಟಿಕೆಟ್‌-ಬಂಡಾಯದ ಸುಳಿವು ಕಾರ್ಕಳ : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟನ್ನು ಕಾಂಗ್ರೆಸ್‌ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಯಮಿ ಇನಾಯತ್‌ ಅಲಿಗೆ ನೀಡಿದೆ. ಕೊನೆಯ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಹೆಸರನ್ನು ಕಾಂಗ್ರೆಸ್‌ ವರಿಷ್ಠರು ನಿನ್ನೆ ರಾತ್ರೋರಾತ್ರಿ ಘೋಷಿಸಿದ ಪಟ್ಟಿಯಲ್ಲಿ ಪ್ರಕಟಿಸಿದ್ದಾರೆ.ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಮತ್ತು ಇನಾಯತ್‌ ಅಲಿ ನಡುವೆ ತೀವ್ರ ಪೈಪೋಟಿಯಿದ್ದ ಕಾರಣ ಕೊನೆಯವರೆಗೂ ಕಾಂಗ್ರೆಸ್‌ ವರಿಷ್ಠರಿಗೆ ಅಭ್ಯರ್ಥಿ ಆಯ್ಕೆ

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ Read More »

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರನಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ನೀಡಿದರು. ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಿಕ್ಕಿರಿದ ಜನಸ್ತೋಮ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read More »

ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಕೆಲಸದ ಕುರಿತು 1.14 ಲಕ್ಷ ರೂ. ವಂಚನೆ – ದೂರು ದಾಖಲು

ಮಂಗಳೂರು : ಪಾರ್ಟ್‌ಟೈಂ ಕೆಲಸದ ಕುರಿತು ಟೆಲಿಗ್ರಾಂ ಖಾತೆಯಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 1,14,901 ರೂ. ಮೋಸ ಹೋಗಿರುವ ಕುರಿತು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಫಲ್ಗುಣಿ ಎಂಬ ಹೆಸರಿನಿಂದ ಪಾರ್ಟ್‌ ಟೈಂ ಕೆಲಸದ ಬಗ್ಗೆ ಸಂದೇಶ ಬಂದಿದ್ದು, ಈ ಕುರಿತು ವಿಚಾರಿಸಿದಾಗ, ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಉದ್ಯೋಗ ಎಂದು ತಿಳಿಸಿದ್ದಾರೆ. ಇನ್ನು ಲಿಂಕ್‌ ಕಳುಹಿಸಿ ಆ್ಯಪ್‌ ಇನ್‌ಸ್ಟಾಲ್‌ ಮಾಡಿ ಖಾತೆ ತೆರೆದು ಅದರಲ್ಲಿ ಪ್ರಸಾರವಾಗುವ ವೀಡಿಯೋ ನೋಡಿ ರೇಟಿಂಗ್‌ ಹಾಕಿ ಕಮೀಷನ್‌ ಹಣ

ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಕೆಲಸದ ಕುರಿತು 1.14 ಲಕ್ಷ ರೂ. ವಂಚನೆ – ದೂರು ದಾಖಲು Read More »

ಪುಟ್ಟ ಬಾಲಕನ ಚಿಕಿತ್ಸೆಗೆ ನೇರವಾದ ವಿಶ್ವಹಿಂದೂ ಪರಿಷದ್, ಭಜರಂಗದಳ

ಬಂಟ್ವಾಳ: ಕಂಬ್ಳ ಪೋಡಿಕಲ ಹನುಮಾನ್ ನಗರ ಶ್ರೀ ರಾಮ ಭಕ್ತ ಆಂಜನೇಯ ಟ್ರಸ್ಟ್ ಸದಸ್ಯರು  ಒಟ್ಟು ಸೇರಿ ವಿಶ್ವಹಿಂದೂ ಪರಿಷದ್, ಭಜರಂಗದಳ ಹನುಮಾನ್ ಶಾಖೆ ನೇತೃತ್ವದಲ್ಲಿ ಕಾರಣಿಕ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಿಯ ಜಾತ್ರೋತ್ಸವದ ಸಂದರ್ಭದಲ್ಲಿ ಭವತಿ ಬಿಕ್ಷಾಂದೇಹಿ ಸಹಾಯ ಯೋಜನೆಯ0ತೆ ಪುಟ್ಟ ಬಾಲಕನಿಗೆ ಧನ ಸಹಾಯ ಮಾಡಿದರು. ಮಂಗಳೂರು ತಾಲೂಕಿನ ಕುಪ್ಪೆಪದವು ಸಮೀಪದ ಕೊಳವೂರು ಗ್ರಾಮದ ಜಯಶೀಲಾ ಸದಾಶಿವ ಆಚಾರ್ಯ ದಂಪತಿ 2ವರ್ಷ 3ತಿಂಗಳ ಶಮಿತ್  ಎಂಬ ಮಗುವಿಗೆ ಹುಟ್ಟುವಾಗಲೇ ಮಲ ವಿಸರ್ಜನೆ ಮಾಡುವ ಅಂಗವಿರಲಿಲ್ಲ

ಪುಟ್ಟ ಬಾಲಕನ ಚಿಕಿತ್ಸೆಗೆ ನೇರವಾದ ವಿಶ್ವಹಿಂದೂ ಪರಿಷದ್, ಭಜರಂಗದಳ Read More »

error: Content is protected !!
Scroll to Top