ಸಣ್ಣ ನೀರಾವರಿ ಇಲಾಖೆಯಡಿ 3 ಕೋಟಿ ರೂ. ವೆಚ್ಚದಲ್ಲಿ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಸಂಜೀವ ಮಠಂದೂರು ಶಂಕು ಸ್ಥಾಪನೆ
ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಬಳಿಯ ಕುಮಾರಧಾರ ನದಿಗೆ ಸಣ್ಣ ನೀರಾವರಿ ಇಲಾಖೆಯಡಿ 2 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ರಚನೆ ಹಾಗೂ ಸಿ.ಎ.ಬ್ಯಾಂಕ್ ಬಳಿ ನೇತ್ರಾವತಿ ನದಿಗೆ 1 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ರಚನೆ ಕಾಮಗಾರಿಗೆ ಶಂಕು ಸ್ಥಾಪನೆ ಸೋಮವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯಿಂದಾಗಿ ಸಾರ್ವಜನಿಕ ಸೊತ್ತುಗಳಿಗೆ ಯಾವುದೇ ಹಾನಿಯಾಗಬಾರದು ಎಂಬ ನಿಟ್ಟಿನಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ […]








