ದಕ್ಷಿಣ ಕನ್ನಡ

ಪಾಂಬಾರು ಷಣ್ಮುಖ ಫ್ರೆಂಡ್ಸ್ ನಿಂದ ಶ್ರಮದಾನ, ಅಂಗನವಾಡಿ ಮಕ್ಕಳಿಗೆ ಬಹುಮಾನ ವಿತರಣೆ

ಪಾಂಬಾರು ಷಣ್ಮುಖ ಫ್ರೆಂಡ್ಸ್ ವತಿಯಿಂದ ಶ್ರಮದಾನ ಹಾಗೂ ಅಂಗನವಾಡಿ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಪಾಂಬಾರು ಅಮಲ ರಸ್ತೆಯ ಬದಿಯ ಬಲ್ಲೆಗಳನ್ನು ತಂಡದ ಸದಸ್ಯರು ಶ್ರಮದಾನದ ಮೂಲಕ ತೆರೆವುಗೊಳಿಸಿರುತ್ತಾರೆ. ಈ ಸಂದರ್ಭದಲ್ಲಿ ಷಣ್ಮುಖ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಪಾಂಬಾರು ಷಣ್ಮುಖ ಫ್ರೆಂಡ್ಸ್ ನಿಂದ ಶ್ರಮದಾನ, ಅಂಗನವಾಡಿ ಮಕ್ಕಳಿಗೆ ಬಹುಮಾನ ವಿತರಣೆ Read More »

ಸುಪ್ರೀಂ ಕೋರ್ಟ್ ವಕೀಲರಾಗಿ ಶೇಖರ್ ದೇವಸ ಆಯ್ಕೆ

ಪುತ್ತೂರು : ಬೆಳ್ತಂಗಡಿ ತಾಲೂಕಿನ ಸವಣಾಲ್ ಗ್ರಾಮದ ದೇವಸ ಮನೆಯ ಶೇಖರ್ ದೇವಸ ಸುಪ್ರೀಂ ಕೋರ್ಟ್ ವಕೀಲರಾಗಿ ನೇಮಕಗೊಂಡಿದ್ದಾರೆ. ಹಿರಿಯ ವಕೀಲರಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದಿದೆ.  ಒಕ್ಕಲಿಗ ಸಮುದಾಯದಲ್ಲಿ ವಿವಿಧ ಕ್ಷೇತ್ರದಲ್ಲಿ ಹಲವಾರು ಮಂದಿ ಸಾಧಕರಿದ್ದಾರೆ. ಅನೇಕ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇದೀಗ ಈ ಸಾಲಿಗೆ ಶೇಖರ್ ದೇವಸ ಕೂಡ ಸೇರಿಕೊಂಡಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲರಾಗಿ ಶೇಖರ್ ದೇವಸ ಆಯ್ಕೆ Read More »

ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪುತ್ಥಳಿ ಎದುರು 78ನೇ ಸ್ವಾತಂತ್ರ್ಯೋತ್ಸವ

ಮಂಗಳೂರು : ವೀರ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪುತ್ಥಳಿ ಎದುರು 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು ಧ್ವಜಾರೋಹಣವನ್ನು ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗಿಶ್ ಶೆಟ್ಟಿ ಆಗಮಿಸಿದ್ದರು. ಅಲ್ಲದೆ ಡಿ.ಬಿ. ಬಾಲಕೃಷ್ಣ, ಪೂರ್ಣಿಮಾ ಕೆ.ಎಂ, ಸುಂದರ್ ಗೌಡ, ಕೇಶವ ಗೌಡ, ಗರುದೇವ ಯು.ಬಿ, ಡಾ. ಸಚಿನ್ ನಡ್ಕ, ಕುಸುಮಾಧರ, ಸಾರಿಕಾ ಸುರೇಶ್, ನವೀನ್ ಚಿಲ್ಪಾರ್, ರಾಮಚಂದ್ರ ಕೆ,

ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪುತ್ಥಳಿ ಎದುರು 78ನೇ ಸ್ವಾತಂತ್ರ್ಯೋತ್ಸವ Read More »

ಬೆಳಂದೂರು ಗ್ರಾಮ ಪಂಚಾಯತ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಮರಕ್ಕಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ, ಪಿಡಿಓ ನಾರಾಯಣ, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೆಳಂದೂರು ಗ್ರಾಮ ಪಂಚಾಯತ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ 78 ನೇ  ಸ್ವಾತಂತ್ರ್ಯೋತ್ಸವ

ಸುಳ್ಯ : ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿದರು. ಅವರು ಸ್ವಾತ್ರಂತ್ರ್ಯದ ಮಹತ್ವ ಮತ್ತುಪ್ರಜಾಪ್ರಭುತ್ವದಿಂದಾಗಿ ಭಾರತ ವಿವಿಧ ಕ್ಷೇತ್ರಗಳಲ್ಲಿ ಮುಂದುವರಿದು ಈಗ ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಹೇಳಿದರು. ದ.ಕ. ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ರವರು ಉಪಸ್ಥಿತರಿದ್ದರು .ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಭಾರತಿ ಸ್ವಾಗತಿಸಿ, ಪದವಿ ಪೂರ್ವ ಕಾಲೇಜು ವಿಭಾಗದ ಪ್ರಾಂಶುಪಾಲರಾದ

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ 78 ನೇ  ಸ್ವಾತಂತ್ರ್ಯೋತ್ಸವ Read More »

ಎಣ್ಮೂರು ಸ.ಹಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ  ಸಂಭ್ರಮ

ನಿಂತಿಕಲ್ಲು : ಎಣ್ಮೂರು ಸರಕಾರಿ  ಹಿರಿಯ ಪ್ರಾಥಮಿಕ   ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶರೀಪ್ ಅವರು ಧ್ವಜಾರೋಹಣಗೈದರು. ಪಂಚಾಯಿತ್  ಅಧ್ಯಕ್ಷ ಮಾಯಿಲಪ್ಪ ಗೌಡ ಹಾಗೂ ಶಾಲಾ ಪೋಷಕರು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ಮೆರವಣಿಗೆ, ಸಭಾ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ  ಶಿಕ್ಷಕಿ ಭುವನೇಶ್ವರಿ  ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

ಎಣ್ಮೂರು ಸ.ಹಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ  ಸಂಭ್ರಮ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ

ಸವಣೂರು: ದೇಶದ ವಿಚಾರ ಬಂದಾಗ ಸ್ವಾರ್ಥವನ್ನು ಮರೆತು ಇಡೀ ಸಮಾಜವನ್ನು ಒಂದಾಗಿ ಕೊಂಡೊಯ್ಯುವ ಮನೋಭಾವ ಸೈನಿಕರದ್ದಾಗಿದೆ. ಒಮ್ಮೆ ಸೈನಿಕನಾದಲ್ಲಿ ಜೀವನಪೂರ್ತಿ ಆತ ಅಂತಹ ಮನೋಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾನೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಮಾಜ ವಿಫಲವಾಗಿದೆ. ಭಾರತಕ್ಕೆ ಸೈನಿಕನ ಮನಸ್ಥಿತಿಯ ಚಿಂತನೆಯ ಅವಶ್ಯಕತೆಯಿದೆ ಎಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಇಂದು ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸವಣೂರು ವಿದ್ಯಾರಶ್ಮಿ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ Read More »

ಸತತ 3 ನೇ ಬಾರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಕ್ಕೆ ಚಿನ್ನದ ಪದಕ

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ 3ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನ ಪ್ರಶಸ್ತಿ ಪಡೆದು ಕೊಂಡ ಪುತ್ತೂರು, ಕಡಬ, ಬಂಟ್ವಾಳ ತಾಲೂಕು ಸಹಿತ 10 ಶಾಖೆಗಳನ್ನು ಹೊಂದಿರುವ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು ಈ ಭಾರಿ ಸಾಧನ ಪ್ರಶಸ್ತಿಯೊಂದಿಗೆ ಪ್ರಥಮ ಬಾರಿಗೆ ಚಿನ್ನದ ಪದಕವನ್ನೂ ಪಡೆದುಕೊಂಡಿದೆ. ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆ ‘ಸಾಧನ ಪ್ರಶಸ್ತಿ’ಯನ್ನು ಪಡೆದು ಕೊಂಡರೆ ಸಂಘವು ರೂ.103 ಕೋಟಿ ಡೆಪೋಸಿಟ್‌ ಮತ್ತು ರೂ. 542 ಕೋಟಿ ದಾಖಲೆಯ

ಸತತ 3 ನೇ ಬಾರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಕ್ಕೆ ಚಿನ್ನದ ಪದಕ Read More »

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸನ್ಮಾನ

ಕೆದಿಲ : ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಬಿ. ಪೆರ್ನಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಕಾಂತುಕೋಡಿ ಅವರನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರಿನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿದರು. 2023-24ರ ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘದ ಸದಸ್ಯರು 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಿ

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸನ್ಮಾನ Read More »

ಎಸ್ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರದ ಕುರಿತು ಯಾವುದೇ ಪ್ರಸ್ತಾಪ ಇಲ್ಲ | ಖಡಾಖಂಡಿತವಾಗಿ ಹೇಳಿದ ಗೃಹ ಸಚಿವ ಜಿ.ಪರಮೇಶ್ವರ್

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಮಂಗಳೂರಿನಿಂದ ಪುತ್ತೂರಿಗೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸ್ಥಳಾಂತರಿಸುವ ಪ್ರಸ್ತಾವನೆಯನ್ನು ಕೈಬಿಟ್ಟಿದೆ. ಬಿಜೆಪಿಯ ಅಂದಿನ ಪುತ್ತೂರು ಶಾಸಕ ಸಂಜೀವ ಮಠಂದೂರುರವರು 2020ರಲ್ಲಿ ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಮುಂದಾಗಿದ್ದರು. ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾಗಿ ತಿಳಿಸಿದ್ದರು. ಪುತ್ತೂರು ಪೇಟೆಯ ಮೂರು ಭಾಗಗಳಲ್ಲಿ 19 ಎಕರೆಗೂ ಹೆಚ್ಚ ಭೂಮಿಯನ್ನು ಎಸ್ಪಿ ಮತ್ತು ಡಿಎಆರ್ ಕಚೇರಿಗಳನ್ನು ಸ್ಥಳಾಂತರಿಸಲು ಮತ್ತು ಪೊಲೀಸ್ ಕ್ವಾರ್ಟಸ್ ಸ್ಥಾಪಿಸಲು ಕಾಯ್ದಿರಿಸಲಾಗಿದೆ ಎಂದು ಅವರು

ಎಸ್ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರದ ಕುರಿತು ಯಾವುದೇ ಪ್ರಸ್ತಾಪ ಇಲ್ಲ | ಖಡಾಖಂಡಿತವಾಗಿ ಹೇಳಿದ ಗೃಹ ಸಚಿವ ಜಿ.ಪರಮೇಶ್ವರ್ Read More »

error: Content is protected !!
Scroll to Top