ದಕ್ಷಿಣ ಕನ್ನಡ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಪೆರ್ನೆ ವಲಯದ ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕೆದಿಲ ಶ್ರೀ ದೇವಿ ಮಂದಿರದಲ್ಲಿ ನಡೆಯಿತು. ಹಿರಿಯ ಸದಸ್ಯೆ ಭಾಗಿರತಿ ಕಾರ್ಯಕ್ರಮ ಉದ್ಘಾಟಿಸಿ ಜ್ಞಾನವಿಕಾಸ ಕೇಂದ್ರಕ್ಕೆ ಶುಭ ಹಾರೈಸಿದರು. ಒಕ್ಕೂಟದ ಉಪಾಧ್ಯಕ್ಷರು ಮಾತನಾಡಿ, ಜ್ಞಾನವಿಕಾಸ ಕೇಂದ್ರದಲ್ಲಿ ಉತ್ತಮ ಮಾಹಿತಿ ದೊರೆಯುತ್ತಿದ್ದು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ತಾಲೂಕು ವಿಚಕ್ಷಣಧಿಕಾರಿ ಭಾಗವಹಿಸಿ ಸಂಸ್ಕಾರ ಸಂಸ್ಕೃತಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನಾಕ್ಷಿ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ Read More »

ಉಪ್ಪಿನಂಗಡಿ : ಕೋಳಿಅಂಕಕ್ಕೆ ಪೊಲೀಸ್‌ ದಾಳಿ, ಓರ್ವನ ಬಂಧನ

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಕಜೆಕ್ಕಾರ್ ಗುಡ್ದ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿಅಂಕ ನಡೆಸುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂರು ಕೋಳಿ, ಮೂರು ದ್ವಿಚಕ್ರವಾಹನಗಳ ಸಹಿತ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಉರುವಾಲು ಗ್ರಾಮದ ನೋಣಯ್ಯ ಮುಗೇರ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ. ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ

ಉಪ್ಪಿನಂಗಡಿ : ಕೋಳಿಅಂಕಕ್ಕೆ ಪೊಲೀಸ್‌ ದಾಳಿ, ಓರ್ವನ ಬಂಧನ Read More »

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ : ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು

ಗೋಮಾಂಸ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಡಿ.27ರಂದು ನಾರ್ಲಪದವು ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್ ಮಾಡಿದ ಕುರಿತು ಬಜಪೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬವರು ಮಗಳನ್ನು ಸ್ಕೂಟರ್‌ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದ ಕುರಿತು ಒಂದು ಪ್ರಕರಣ ದಾಖಲಾಗಿದ್ದು, ಇದೇ

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ : ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು Read More »

ಸುಳ್ಯ : ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ

ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ಭಾನುವಾರ ಬೆಳಗ್ಗೆ ಕಾಣೆಯಾಗಿದ್ದರು. ಹುಡುಕಾಡಿದಾಗ

ಸುಳ್ಯ : ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ Read More »

ಕಾರಿನಲ್ಲಿ ಅಡಗಿಸಿಟ್ಟಿದ್ದ 21 ಕೆ.ಜಿ. ಗಾಂಜಾ ವಶ : ಇಬ್ಬರ ಬಂಧನ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಾರಾಟ ಮಾಡಲು ತಂದಿದ್ದ ಡ್ರಗ್ಸ್‌ ಮಂಗಳೂರು: ಹೊಸ ವರ್ಷಾಚರಣೆಗೆಂದು ಮಾರಾಟ ಮಾಡಲು ತಂದಿದ್ದ 21.450 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಮಂಗಳೂರು ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಶನಿವಾರ ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಗ್ರಾಮದ ಪರಮೇಶ್ವರಿ ನಗರದ 2ನೇ ಕ್ರಾಸ್‌ನಲ್ಲಿರುವ ಬೆನಕ ಎಂಬ ಮನೆಯ ಬಳಿ ಮಾರಾಟಕ್ಕಾಗಿ ಕಾರಿನಲ್ಲಿ ಗಾಂಜಾ ಸಂಗ್ರಹಿಸಲಾಗಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ

ಕಾರಿನಲ್ಲಿ ಅಡಗಿಸಿಟ್ಟಿದ್ದ 21 ಕೆ.ಜಿ. ಗಾಂಜಾ ವಶ : ಇಬ್ಬರ ಬಂಧನ Read More »

ಧರ್ಮಸ್ಥಳ ಕೇಸ್‌ : ಪೂರ್ಣ ತನಿಖಾ ವರದಿ ಸಲ್ಲಿಸಲು ಕೋರ್ಟ್‌ ಆದೇಶ

ಮಂಗಳೂರು: ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಪೂರ್ಣ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿದ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ನ.20ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸಿತ್ತು. ಶನಿವಾರ ನಡೆದ ವಿಚಾರಣೆ ವೇಳೆ ಆದಷ್ಟು ಶೀಘ್ರವಾಗಿ ತನಿಖೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸಬೇಕೆಂದು ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ

ಧರ್ಮಸ್ಥಳ ಕೇಸ್‌ : ಪೂರ್ಣ ತನಿಖಾ ವರದಿ ಸಲ್ಲಿಸಲು ಕೋರ್ಟ್‌ ಆದೇಶ Read More »

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ

ಎಟಿಎಂಗೆ ಕಡಿಮೆ ಹಣ ತುಂಬಿ, ಲಾಕರ್‌ನಲ್ಲಿದ್ದ ಚಿನ್ನ ಕದ್ದು ಪಲಾಯನ ಮಾಡಿದ ಮ್ಯಾನೇಜರ್‌ ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ Read More »

ಮೂಲ್ಕಿ : ಹಲ್ಲೆ ಕೃತ್ಯದಿಂದ ಪ್ರಕ್ಷುಬ್ಧ ಪರಿಸ್ಥಿತಿ

ಹಣ ಸುಲಿಯಲು ಯತ್ನಿಸಿ ಕಂಬಳ ಕೋಣಗಳ ಮಾಲೀಕನ ಮೇಲೆ ಹಲ್ಲೆ ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಕೃತ್ಯ ಪರಿಸ್ಥಿತಿ ಸೂಕ್ಷ್ಮವಾಗುವಂತೆ ಮಾಡಿದೆ. ಹೈನುಗಾರಿಕೆ ಮತ್ತು ಕಂಬಳದ ಕೋಣಗಳನ್ನು ಸಾಕಿರುವ ಅಂಗಾರಗುಡ್ಡೆಯ ನಿವಾಸಿ ಅಬೂಬಕ್ಕರ್ ಎಂಬವರಿಂದ ಹಣ ಸುಲಿಗೆಗೆ ಯತ್ನಿಸಿಮೂವರು ಪುಡಿ ರೌಡಿಗಳು ಈ ಕೃತ್ಯ ಎಸಗಿದ್ದಸರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಅಂಗಾರಗುಡ್ಡೆಯ ಅಬೂಬಕ್ಕರ್ ಅವರ

ಮೂಲ್ಕಿ : ಹಲ್ಲೆ ಕೃತ್ಯದಿಂದ ಪ್ರಕ್ಷುಬ್ಧ ಪರಿಸ್ಥಿತಿ Read More »

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17ರಿಂದ ನಾಪತ್ತೆಯಾಗಿರುವ ಕುರಿತು ಅವರ ಸಹೋದರ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಕಾಣೆಯಾಗಿದ್ದಾರೆ. ರೂಮ್‌ಮೇಟ್‌ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದೆ. ಆದರೆ ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ.

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ Read More »

ವಿಟ್ಲ: ಭೀಕರ ಅಗ್ನಿ ಅವಘಡದಲ್ಲಿ ಆರಕ್ಕೂ ಅಧಿಕ ಅಂಗಡಿಗಳು ಭಸ್ಮ

ಇಲೆಕ್ಟ್ರಾನಿಕ್ಸ್‌ ಅಂಗಡಿಯಿಂದ ವ್ಯಾಪಿಸಿದ ಬೆಂಕಿಯಿಂದ ಅಪಾರ ನಾಶ ನಷ್ಟ ವಿಟ್ಲ : ನಗರದ ಮಂಗಳೂರು ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಆರು ಅಂಗಡಿಗಳು ಸುಟ್ಟುಹೋಗಿವೆ. ಕ್ಷಣಾರ್ಧದಲ್ಲಿ ಐದಾರು ಮಳಿಗೆಗಳಿಗೆಬೆಂಕಿ ಹಬ್ಬಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸಂತೋಷ್ ಕುಮಾರ್ ಕೊಡಂಗೆ ಎಂಬವರ ಮಾಲಕತ್ವದ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯೊಳಗಿದ್ದ ಇಲೆಕ್ಟ್ರಾನಿಕ್ ಉಪಕರಣಗಳು ಮತ್ತು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ವಸ್ತುಗಳಿದ್ದ ಕಾರಣ ಜ್ವಾಲೆಯ ತೀವ್ರತೆ ಏಕಾಏಕಿ ಹೆಚ್ಚಾಗಿದೆ.

ವಿಟ್ಲ: ಭೀಕರ ಅಗ್ನಿ ಅವಘಡದಲ್ಲಿ ಆರಕ್ಕೂ ಅಧಿಕ ಅಂಗಡಿಗಳು ಭಸ್ಮ Read More »

error: Content is protected !!
Scroll to Top