ದಕ್ಷಿಣ ಕನ್ನಡ

ಆ.10 : ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ “ಸುವರ್ಣ ಸಂಭ್ರಮ” ದ ಪ್ರಯುಕ್ತ ‘ಆಟಿ ಕೂಟ’

ಕಾಣಿಯೂರು: ಕಡಬ ತಾಲೂಕಿನ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ, ಸುವರ್ಣ ಮಹೋತ್ಸವ ಸಮಿತಿ -2024 ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ “ಸುವರ್ಣ ಸಂಭ್ರಮ” ದ ಪ್ರಯುಕ್ತ ‘ಆಟಿ ಕೂಟ’ ಕಾರ್ಯಕ್ರಮ ಆ10 ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ 9-30 ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಲಕ್ಷ್ಮೀನರಸಿಂಹ ಭಜಾನ ಮಂಡಳಿ ಸ್ಥಾಪಕ ಸದಸ್ಯ ದೇವಣ್ಣ ಗೌಡ ಮಿತ್ತಟ್ಟ ನೆರವೇರಿಸಲಿದ್ದು, ಶ್ರೀ ಲಕ್ಷ್ಮೀನರಸಿಂಹ ಭಜಾನ ಮಂಡಳಿ ಮಾಜಿ ಅಧ್ಯಕ್ಷ ಪರಮೇಶ್ವರ […]

ಆ.10 : ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ “ಸುವರ್ಣ ಸಂಭ್ರಮ” ದ ಪ್ರಯುಕ್ತ ‘ಆಟಿ ಕೂಟ’ Read More »

ದರೋಡೆ ಪ್ರಕರಣ : ಆರೋಪಿಗಳ ಬಂಧನ

ಮಡಿಕೇರಿ : ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಹಾಗೂ  ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ಪಡೂರು ಗ್ರಾಮದ ಕೆ.ಗಣೇಶ(28), ವೀರಕಂಬ ಗ್ರಾಮದ ಕುಸುಮಕರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾ‌ರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಿ.ಮೋಹನ್ ಕುಮಾರ್(45) ಬಂಧಿತರು. ಆರೋಪಿಗಳ ಬಳಿಯಿಂದ 3.2

ದರೋಡೆ ಪ್ರಕರಣ : ಆರೋಪಿಗಳ ಬಂಧನ Read More »

ಅಕ್ರಮ ಕೋಳಿ ಅಂಕಕ್ಕೆ ದಾಳಿ | ಐದು ಮಂದಿ ಬಂಧನ, ನಗದು, ಕೋಳಿ ವಶ

ಬೆಳ್ತಂಗಡಿ : ಅಕ್ರಮ ಕೋಳಿ ಅಂಕ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ 5 ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪೇರಪಲ್ಕೆ ಗುಡ್ಡದಲ್ಲಿ ನಡೆದಿದೆ. ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ ಬಾಲಕೃಷ್ಣ ಬಂಧಿತರು. ಪೇರಲ್ಲಪಲ್ಕೆ ಎಂಬಲ್ಲಿನ ಗುಡ್ಡೆ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ ಐ ಕಿಶೋರ್ ಪಿ. ನೇತೃತ್ವದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 5,410/- ರೂಪಾಯಿ

ಅಕ್ರಮ ಕೋಳಿ ಅಂಕಕ್ಕೆ ದಾಳಿ | ಐದು ಮಂದಿ ಬಂಧನ, ನಗದು, ಕೋಳಿ ವಶ Read More »

ನಾಪತ್ತೆಯಾಗಿದ್ದ ಬಳ್ಪದ ಯುವಕ ಅಶೋಕ್ ಮೃತದೇಹ ಪತ್ತೆ

ಸುಬ್ರಹ್ಮಣ್ಯ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ. ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತಪಟ್ಟ ರೀತಿಯಲ್ಲಿ ಪತ್ತೆಯಾದವರು. ಆ. 4ರಂದು ಅಶೋಕ್ ಮನೆಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು. ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎನ್ನುವಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು

ನಾಪತ್ತೆಯಾಗಿದ್ದ ಬಳ್ಪದ ಯುವಕ ಅಶೋಕ್ ಮೃತದೇಹ ಪತ್ತೆ Read More »

ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ನಷ್ಟ

ಸುಳ್ಯ: ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ ಅವರ ಮನೆಯ ಸಮೀಪದಲ್ಲಿರುವ ರಬ್ಬರ್ ಸ್ಟೋಕ್ ಹೌಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ರಬ್ಬರ್ ಸ್ಕಾಪ್, ಶೀಟು ಸೇರಿದಂತೆ ಸ್ಟೋಕ್ ಹೌಸ್ ಪೆಟ್ಟಿಗೆಗೆ ಸಂಪೂರ್ಣವಾಗಿ ಹಾನಿಯಾಗಿದೆ. ರಮಾದೇವಿ ಕಳಗಿ ಅವರು  ಕೂಡಲೇ ಈ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದು, ಗ್ರಾ.ಪಂ. ಸದಸ್ಯ ನವೀನ ರಬ್ಬರ್ ಟ್ಯಾಪರ್ ಗಳು ಸೇರಿ ಬೆಂಕಿ

ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ನಷ್ಟ Read More »

ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಳ್ಯದ ಮಾಜಿ ಸಚಿವ ಎಸ್ ಅಂಗಾರ  ಭಾಗಿ

 ಸುಳ್ಯ : ಇಂದು ಮದ್ದೂರಿನಿಂದ ಆರಂಭವಾದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಳ್ಯದ ಮಾಜಿ ಸಚಿವ ಎಸ್ ಅಂಗಾರ ರವರು ಪಾಲ್ಗೊಂಡಿದ್ದಾರೆ.  ಇವರ ಜೊತೆಗೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ  ಭಾಗವಹಿಸಿದರು. ಸುಳ್ಯ ವಿಜೆಪಿಯ ಮಂಡಲ ಸಮಿತಿಯ ನೂರಾರು ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದರು.

ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಳ್ಯದ ಮಾಜಿ ಸಚಿವ ಎಸ್ ಅಂಗಾರ  ಭಾಗಿ Read More »

ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ | ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಗಳೂರು: ದೇಶಾದ್ಯಂತ ಸುದ್ದಿಯಾಗಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದು, ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ. 2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ

ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ | ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ Read More »

ಕಾಣೆಯಾದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ

ಕಾರ್ಕಳ : ವಾರದ ಹಿಂದೆ ಮಂಗಳೂರಿನ ಬಿಜೈಯ ತನ್ನ ಮನೆಯಿಂದ ನಾಪತ್ತೆಯಾಗಿದ್ದ 18ರ ಯುವತಿ, ಉಡುಪಿ ಜಿಲ್ಲೆಯ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆಯಾಗಿದ್ದಾಳೆ .  ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಬರ್ಕೆ ಪೊಲೀಸರು ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಿ ಯುವತಿಯನ್ನು ಪತ್ತೆ ಹಚ್ಚಿದ್ದಾರೆ. ಜುಲೈ 30ರಂದು ಮಧ್ಯಾಹ್ನ ವಿದ್ಯಾರ್ಥಿನಿ ಕಲಿಸ್ತ ಫೆರಾವೋ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು . ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಯುವತಿ ಆಟೋರಿಕ್ಷಾದಲ್ಲಿ ತೆರಳಿರುವುದು ಬೆಳಕಿಗೆ ಬಂದಿತ್ತು. ಬಳಿಕ ತನಿಖೆಯನ್ನು ಇನ್ನಷು ಚುರುಕುಗೊಳಿಸಿದ ಬರ್ಕೆ ಪೊಲೀಸರು, ಕಾಣೆಯಾದ

ಕಾಣೆಯಾದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ Read More »

ಮಂಗಳೂರು ಹೋಮ್‍ ಸ್ಟೇ ದಾಳಿ ಪ್ರಕರಣ | ಜಿಲ್ಲಾ ಸೆಷನ್ಸ್‍ ನ್ಯಾಯಾಲಯದಲ್ಲಿ ಇಂದು ವಿಚಾರಣೆ | ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ

ಮಂಗಳೂರು: ಮಂಗಳೂರಿನ ಹೋಂಸ್ಟೇ ಪ್ರಕರಣ ಕುರಿತು ವಿಚಾರಣೆ ಇಂದು ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಲಿದ್ದು, ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆಯಿದೆ. 2012ರ ಜುಲೈ 28 ರಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇಗೆ ದಾಳಿ ಮಾಡಿ ಅಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ. ಯುವಕ ಯುವತಿಯರು ಹೋಂಸ್ಟೇ ಯಲ್ಲಿ ತಂಗಿದ್ದು, ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ

ಮಂಗಳೂರು ಹೋಮ್‍ ಸ್ಟೇ ದಾಳಿ ಪ್ರಕರಣ | ಜಿಲ್ಲಾ ಸೆಷನ್ಸ್‍ ನ್ಯಾಯಾಲಯದಲ್ಲಿ ಇಂದು ವಿಚಾರಣೆ | ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ Read More »

ಯುವತಿಯ ಮಾನಭಂಗಕ್ಕೆ ಯತ್ನ : ಪುತ್ತೂರಿನ ನಾಲ್ವರ ಬಂಧನ

ಮಂಗಳೂರು: ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಪೊರಮ್‌ ಮಾಲ್‌ನಲ್ಲಿರುವ ಶೆರ್‌ಲಾಕ್ ಪಬ್‌ನಲ್ಲಿ ನಡೆದಿದೆ. ಮಾನಭಂಗಕ್ಕೆ ಯತ್ನಿಸಿದ ಪುತ್ತೂರು ನಿವಾಸಿಗಳಾದ ಮಹೇಶ್, ವಿನಯ್,ನಿತೇಶ್, ಪ್ರೀತೆಶ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 22 ವರ್ಷದ ಯುವತಿ ತನ್ನ ಸ್ನೇಹಿತೆಯೊಂದಿಗೆ ಮಂಗಳೂರು ನಗರದ ಪಾಂಡೇಶ್ವರ ಪೊರಮ್‌ ಮಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಶೆರ್‌ಲಾಕ್ ಪಬ್‌ಗೆ ವೀಕೆಂಡ್ ಪಾರ್ಟಿಗೆ ಬಂದಿದ್ದು, ರಾತ್ರಿ 10.30ರ ಸುಮಾರಿಗೆ ಆರೋಪಿಗಳು ದೂರುದಾರೆ ಯುವತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿ ಮಾನಭಂಗ ಮಾಡಲು ಯತ್ನಿಸಿದ್ದು, ಆಕೆಯ ಸ್ನೇಹಿತೆಗೂ ಅವಾಚ್ಯ ಶಬ್ದಗಳಿಂದ

ಯುವತಿಯ ಮಾನಭಂಗಕ್ಕೆ ಯತ್ನ : ಪುತ್ತೂರಿನ ನಾಲ್ವರ ಬಂಧನ Read More »

error: Content is protected !!
Scroll to Top