ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಘಟಾನುಘಟಿ ವಕೀಲರ ಎಂಟ್ರಿ

ದೇವಸ್ಥಾನದ ಪರವಾಗಿ ವಾದ ಮಾಡಲು ನಾಡಿನ ಖ್ಯಾತ ವಕೀಲರಿಂದ ವಕಾಲತ್ತು ಸಲ್ಲಿಕೆ ಬೆಳ್ತಂಗಡಿ: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ದಿಢೀರ್‌ ಎಂದು ತಿರುವು ಸಿಕ್ಕಿದ್ದು, ಧರ್ಮಸ್ಥಳ ದೇವಸ್ಥಾನದ ಪರವಾಗಿ ವಾದಿಸಲು ನಾಡಿನ ಖ್ಯಾತ ವಕೀಲರು ಮುಂದೆ ಬಂದಿದ್ದಾರೆ. ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ […]

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಘಟಾನುಘಟಿ ವಕೀಲರ ಎಂಟ್ರಿ Read More »

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ

40ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಶಿಕ್ಷಣ ತಜ್ಞ ಮಂಗಳೂರು : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಗುರುವಾರ (ಜ.1) ಮುಂಜಾನೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರ, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ Read More »

ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ

ಸುಳ್ಯ: ಆಟೋರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಎಂಬವರನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಮತ್ತು ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ.ಎಸ್ ಯಾನೆ ಮನು (42)ಬಂದಿತ ಆರೋಪಿಗಳು. ಅಬ್ದುಲ್ ಜಬ್ಬಾರ್ ಎಂಬವರನ್ನು 2025ರ ಅಕ್ಟೋಬರ್‌ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ

ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ Read More »

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಂಧನ ವಾರಂಟ್‌ ಜಾರಿ

ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್‌ ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಯಾಗಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಇಂದಬೆಟ್ಟುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ವಿಚಾರವಾಗಿ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ ದೂರಿನಂತೆ

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಂಧನ ವಾರಂಟ್‌ ಜಾರಿ Read More »

ಕಡಬ : ಟೆಂಪೊ ಡಿಕ್ಕಿ ಹೊಡೆದು ಶಿಕ್ಷಕ ಸಾವು

ಕಡಬ: ಗೂಡ್ಸ್ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಕಡಬ ಠಾಣಾ ವ್ಯಾಪ್ತಿಯ ಆತೂರಿನಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಅಬ್ದುಲ್ ಖಾದರ್ ಸಖಾಫಿ ಕಾಸರಗೋಡಿನ ಮುಹಿಮ್ಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದ ಅವರು ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದರು. ಬಳಿಕ ಕಾರ್ಯಕ್ರಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಗೂಡ್ಸ್ ಟೆಂಪೊ ಢಿಕ್ಕಿ

ಕಡಬ : ಟೆಂಪೊ ಡಿಕ್ಕಿ ಹೊಡೆದು ಶಿಕ್ಷಕ ಸಾವು Read More »

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಬಂಟ್ವಾಳ: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಪೂಂಜಾಲಕಟ್ಟೆ ಸಮೀಪದ ಕಟ್ಟೆಮನೆ ಎಂಬಲ್ಲಿ ಸಂಭವಿಸಿದೆ. ಕುಕ್ಕಾಜೆ ನಿವಾಸಿ ಇಮ್ರಾನ್ ಯಾನೆ ಎಸ್.ಎ.ಮುಹಮ್ಮದ್ ತ್ವಾಹಾ ಮೃತಪಟ್ಟವರು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಇಮ್ರಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಡಿಸಿಆರ್‌ಇ ಘಟಕದ ಸಿಬ್ಬಂದಿ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು Read More »

ಬ್ರಹ್ಮರಕೂಟ್ಲು ಟೋಲ್‌ ಸಿಬ್ಬಂದಿ ಮೇಲೆ ಹಲ್ಲೆ : ಇಬ್ಬರ ಬಂಧನ

ಟೋಲ್‌ ಹಣ ಪಾವತಿಸಲು ನಿರಾಕರಿಸಿ ಹಲ್ಲೆ ಮಾಡಿದ್ದ ಲಾರಿ ಚಾಲಕ, ಕ್ಲೀನರ್‌ ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್‌ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕ ಹಾಗೂ ಕ್ಲೀನರ್‌ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು. ಡಿ.29ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ದ ದಿಕ್ಕಿನಿಂದ ಬಂದ್ದಿದ್ದು, ಟೋಲ್ ಸಿಬ್ಬಂದಿ ಟೋಲ್ ಹಣ

ಬ್ರಹ್ಮರಕೂಟ್ಲು ಟೋಲ್‌ ಸಿಬ್ಬಂದಿ ಮೇಲೆ ಹಲ್ಲೆ : ಇಬ್ಬರ ಬಂಧನ Read More »

ಧರ್ಮಸ್ಥಳ ಬುರುಡೆ ಪ್ರಕರಣದ ಇನ್ನಷ್ಟು ರಹಸ್ಯಗಳು ಬಯಲು

ಆರೋಪಿಯ ಹೇಳಿಕೆಯಲ್ಲಿದೆ ಬುರುಡೆ ಷಡ್ಯಂತ್ರದ ಭಯಾನಕ ಸತ್ಯ ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಗಳು ಎಸ್‌ಐಟಿಗೆ ನೀಡಿದ ಹೇಳಿಕೆಯ ಕೆಲವು ಅಂಶಗಳು ಬಯಲಾಗಿದ್ದು, ಇದರಲ್ಲಿ ಯಾವ ರೀತಿ ಷಟ್ಯಂತ್ರ ರೂಪಿಸಲಾಗಿತ್ತು ಎಂಬುದರ ಬಗ್ಗೆ ಇಂಚಿಂಚು ಮಾಹಿತಿ ಇದೆ. ಬುರುಡೆ ನೋಡಿ ನಾನು ಹೆದರಿ ಹೋಗಿದ್ದೆ ಎಂದು ಬುರುಡೆ ಗ್ಯಾಂಗ್‌ನ ಸದಸ್ಯ, ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಜಯಂತ್ ಟಿ. ವಿಶೇಷ ತನಿಖಾ ತಂಡಕ್ಕೆ ಹೇಳಿಕೆ ನೀಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ರೈಲಿನಲ್ಲಿ ದೆಹಲಿಗೆ ಜಯಂತ್‌ ಬುರುಡೆಯನ್ನು ತೆಗೆದುಕೊಂಡು

ಧರ್ಮಸ್ಥಳ ಬುರುಡೆ ಪ್ರಕರಣದ ಇನ್ನಷ್ಟು ರಹಸ್ಯಗಳು ಬಯಲು Read More »

ಮಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ

ಹೆಂಡತಿ, ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಕೃತ್ಯ ಮಂಗಳೂರು: ಪಾಂಡೇಶ್ವರ ಠಾಣೆಯ ಎಎಸ್‌ಐ ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿಯ ವ್ಯಾಸ ನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕಾಸರಗೋಡು ಜಿಲ್ಲೆಯ ಮುಳ್ಳೇರಿಯದವರಾದ ಹರಿಶ್ಚಂದ್ರ ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್‌ಐ ಆಗಿ ಭಡ್ತಿ ಪಡೆದಿದ್ದರು. ಹಿಂದೆ

ಮಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ Read More »

ಮಹಿಳೆಯ ಕತ್ತಿನಿಂದ ಸರ ಕಿತ್ತ ಕಳ್ಳನ ಬಂಧನ

ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ರೋಹಿತ್ (25) ಬಂಧಿತ ಆರೋಪಿಯಾಗಿದ್ದಾನೆ. ಡಿ.25ರಂದು ಸಂಜೆ 6.30ಕ್ಕೆ ಕೊಂಚಾಡಿ ಗುರುನಗರದ ನಿವಾಸಿಗಳಾದ ರತ್ನಾವತಿ ಮತ್ತವರ ಮಗಳು ರಶ್ಮಿ ಯೆಯ್ಯಾಡಿಯಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಕೊಪ್ಪಳಕಾಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿ ರತ್ನಾವತಿಯ ಕುತ್ತಿಗೆಗೆ ಕೈ ಹಾಕಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದ. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು

ಮಹಿಳೆಯ ಕತ್ತಿನಿಂದ ಸರ ಕಿತ್ತ ಕಳ್ಳನ ಬಂಧನ Read More »

error: Content is protected !!
Scroll to Top