ದಕ್ಷಿಣ ಕನ್ನಡ

ಬಾಲಕರಿಗೆ ವಾಹನ ನೀಡಿದ ಮಾಲಕರಿಗೆ ದಂಡ

ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ ಮಾಲೀಕರಿಗೆ ತಲಾ ರೂ 25,000 ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ. ಏಪ್ರಿಲ್‌ 6ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ನಲ್ಲಿ KA-19-HT-9694 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಹಾಗೂ ಏಪ್ರಿಲ್‌ 28 ರಂದು ಬಿ.ಸಿ ರೋಡ್‌ ಬಳಿ KA05KG6785 ನೊಂದಣಿಯ ದ್ವಿಚಕ್ರ ವಾಹನವನ್ನು ಬಾಲಕರು ಚಾಲನೆ ಮಾಡಿರುವುದು ಬಂಟ್ವಾಳ ಸಂಚಾರ ಠಾಣಾ ಪೊಲೀಸರು ವಾಹನ ತಪಾಸಣೆಯ ವೇಳೆ […]

ಬಾಲಕರಿಗೆ ವಾಹನ ನೀಡಿದ ಮಾಲಕರಿಗೆ ದಂಡ Read More »

ಹಗ್ಗ ತುಂಡಾಗಿ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರ ರಕ್ಷಣೆ

ಬಂಟ್ವಾಳ : ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ ಕುಕ್ಕಾಜೆ ಎಂಬಲ್ಲಿ ಭಾನುವಾರ ಸಂಜೆ ವೇಳೆ ನಡೆದಿದೆ. ಕುರಿಯಾಳ ಗ್ರಾಮದ ಕುಕ್ಕಾಜೆ ಕೇಶವ ಪೂಜಾರಿ ಎಂಬವರ ಬಾವಿಯ ಹೂಳೆತ್ತುವುದಕ್ಕೆ ಬಂದ ಬರಿಮಾರು ನಿವಾಸಿಗಳಾದ ಪದ್ಮನಾಭ ಮತ್ತು ರಾಮ ಎಂಬವರು ಬಾವಿಗೆ ಬಿದ್ದಿದ್ದು, ಅದರಲ್ಲಿ ಓರ್ವರ ಕಾಲಿಗೆ ಗಾಯವಾಗಿದೆ. ಇವರು ಬಾವಿಯ ಹೂಳೆತ್ತುವ ಕೆಲಸ ಮುಗಿಸಿ, ಬಾವಿಯೊಳಗಿನಿಂದ ಹಗ್ಗ ಹಿಡಿದು ಮೇಲೆಕ್ಕೆ

ಹಗ್ಗ ತುಂಡಾಗಿ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರ ರಕ್ಷಣೆ Read More »

ಬಂಟ್ವಾಳ : ಗುಜರಿ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಬಂಟ್ವಾಳ: ಚಲಿಸುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್‌ನಲ್ಲಿ ಬೆಂಕಿ ಹತ್ತಿಕೊಂಡಿದೆ. ಗುಜರಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಯ ಒಳಗಿದ್ದ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಲಾರಿಯಲ್ಲಿ ತುಂಬಿಸಿದ್ದ ಗುಜರಿ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬಂಟ್ವಾಳ : ಗುಜರಿ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ Read More »

ಬೆಳ್ತಂಗಡಿ : ಬೈಕ್‌ಗೆ ಕಾರು ಗುದ್ದಿ ಮಹಿಳೆ ಸಾವು

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ಭಾನುವಾರ ರಾತ್ರಿ ನಡೆದಿದೆ. ಬಳಂಜದ ಪ್ರಸಿದ್ಧ ಅನಿಲ್ ಫಾರ್ಮ್‌ನ ಅನಿಲ್ ಭಟ್ ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಸಾವೀಗೀಡಾದ ಮಹಿಳೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ಫಾರ್ಮ್‌ನ ಮಾಲಕ ಪ್ರಗತಿಪರ ಕೃಷಿಕ ಅನಿಲ್ ಭಟ್ (45) ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದು, ಅನಿಲ್ ಭಟ್ ಅವರು ಗಾಯಗೊಂಡಿದ್ದಾರೆ.

ಬೆಳ್ತಂಗಡಿ : ಬೈಕ್‌ಗೆ ಕಾರು ಗುದ್ದಿ ಮಹಿಳೆ ಸಾವು Read More »

ಬಂಟ್ವಾಳ : ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್‌

ಬೆಂಜನಪದವು ಕೊರಗಜ್ಜ ಸನ್ನಿಧಿಗೆ ಭೇಟಿ ಬಂಟ್ವಾಳ : ಕನ್ನಡದ ಜನಪ್ರಿಯ ನಟಿ ರಚಿತಾ ರಾಮ್ ತುಳುನಾಡಿನ‌ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ. ತಾನು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಸೂಪರ್‌ಸ್ಟಾರ್ ನಟರ

ಬಂಟ್ವಾಳ : ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್‌ Read More »

ಲಿಫ್ಟ್‌ ನಡುವೆ ಸಿಲುಕಿ ಯುವಕ ದಾರುಣ ಸಾವು

ಕೆಟ್ಟು ನಿಂತ ಲಿಫ್ಟ್‌ ಹಠಾತ್‌ ಚಲಿಸಿ ಸಂಭವಿಸಿದ ದುರಂತ ಮಂಗಳೂರು : ನಗರದ ಕುಂಟಿಕಾನದ ಮಾರ್ಟ್‌ವೊಂದರಲ್ಲಿ ಶನಿವಾರ ಸಂಜೆ ಸಂಭವಿಸಿದ ಲಿಫ್ಟ್ ಅವಘಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾರೆ. ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ ನೌಫಾಲ್ (28) ಮೃತಪಟ್ಟ ಯುವಕ. ಶನಿವಾರ ಸಂಜೆ ನೌಫಾಲ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ಲಿಫ್ಟ್‌ನಲ್ಲಿ ಅವಘಡ ಸಂಭವಿಸಿದೆ. ತಕ್ಷಣ ಇತರರು ಈತನನ್ನು ಅಪಾಯದಿಂದ ಪಾರು ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಮೃತ ನೌಫಾಲ್ ಅವಿವಾಹಿತ ಎಂದು ತಿಳಿದುಬಂದಿದೆ. ನೌಫಾಲ್‌ ಕಾರ್ಯನಿಮಿತ್ತ ಲಿಫ್ಟ್‌ನಲ್ಲಿ ಮೇಲಕ್ಕೆ ಹೋಗುತ್ತಿರುವಾಗ

ಲಿಫ್ಟ್‌ ನಡುವೆ ಸಿಲುಕಿ ಯುವಕ ದಾರುಣ ಸಾವು Read More »

ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳ ರಕ್ಷಣೆ

ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್‌ ಮಂಗಳೂರು: ಹಾವೇರಿಯಿಂದ ಕೇರಳದ ಕಣ್ಣೂರಿನ ತಳಿಪರಂಬಕ್ಕೆ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಂಕನಾಡಿ ನಗರ ಪೊಲೀಸರು ಪತ್ತೆಹಚ್ಚಿ ನಾಲ್ವರು ಆರೋಪಿಗಳನ್ನು ಬಂಧಿಸಿ 27 ಕೋಣಗಳನ್ನು ರಕ್ಷಿಸಿದ್ದಾರೆ. ಶನಿವಾರ ಬೆಳಗ್ಗೆ 6 ಗಂಟೆಗೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗೇರು ಇಂಡಿಯಾನ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳೂರು ಹೈವೆ ಪೆಟ್ರೋಲ್ ಪೊಲೀಸರು ಹಾಗೂ ಮಾರ್ನಿಂಗ್ ಗಸ್ತು ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಪೊಲೀಸರು ಈಚರ್

ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳ ರಕ್ಷಣೆ Read More »

ದೇವಸ್ಥಾನಕ್ಕೆ ಬಡಿದ ಸಿಡಿಲು : ಅಪಾರ ಹಾನಿ

ನಾಲ್ಕು ವರ್ಷದ ಹಿಂದೆಯಷ್ಟೇ ಬ್ರಹ್ಮಕಲಶವಾಗಿದ್ದ ದೇಗುಲ ಬಂಟ್ವಾಳ: ದೇವಸ್ಥಾನಕ್ಕೆ ಸಿಡಿಲು ಬಡಿದು ಕೋಟ್ಯಾಂತರ ರೂ. ನಷ್ಟ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ಮಣಿ ನಾಲ್ಕೂರು ಗ್ರಾಮದ ಇಳಿಯೂರು ಎಂಬಲ್ಲಿ ಶನಿವಾರ ಸಂಜೆ ವೇಳೆ ನಡೆದಿದೆ. ಮಣಿನಾಲ್ಕೂರು ಗ್ರಾಮದಲ್ಲಿರುವ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಗರ್ಭಗುಡಿಯ ಗೋಪುರಕ್ಕೆ ಸಿಡಿಲು ಬಡಿದು ಸುಮಾರು 1 ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ಸಂಜೆ ಸುಮಾರು 4.30ರ ವೇಳೆಗೆ ಸುರಿದ ಗಾಳಿ ಮಳೆಯ ನಡುವೆ ಸಿಡಿಲು ಬಡಿದಿದೆ. ಸಿಡಿಲಿನ ಬಡಿತಕ್ಕೆ

ದೇವಸ್ಥಾನಕ್ಕೆ ಬಡಿದ ಸಿಡಿಲು : ಅಪಾರ ಹಾನಿ Read More »

ಬೆಳ್ತಂಗಡಿ: ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ 14 ಲ.ರೂ. ಮೌಲ್ಯದ ನಗ-ನಗದು ಕಳ್ಳತನ

ಪೊಲೀಸ್‌ ಸಿಬ್ಬಂದಿ ಮನೆಯಲ್ಲಿರುವಾಗಲೇ ಕೈ ಚಳಕ ತೋರಿಸಿದ ಕಳ್ಳರು ಬೆಳ್ತಂಗಡಿ: ಪದ್ಮುಂಜದ ಗಾಡಕೋಡಿ ಎಂಬಲ್ಲಿ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 15ರಂದು ರಾತ್ರಿ ಕಳವಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುಮಾರು 13 ಲಕ್ಷ ರೂಪಾಯಿ ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ದೂರು ನೀಡಿಲಾಗಿದೆ . ಮನೆಯ ಒಡೆಯ ಕರುಣಾಕರ ಮನೆಯಲ್ಲಿ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ಇದ್ದರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ 14 ಲ.ರೂ. ಮೌಲ್ಯದ ನಗ-ನಗದು ಕಳ್ಳತನ Read More »

ಟಯರ್‌ ಸ್ಫೋಟಗೊಂಡು ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಅದೃಷ್ಟವಶಾತ್‌ ಪಾರು

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‌ ಹಾಸನ : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟಯರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಇಡೀ ಬಸ್‌ ಉರಿದು ಹೋದ ಘಟನೆ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್‌ ಪಾರಾಗಿದ್ದಾರೆ. ಬಸ್‌ನಲ್ಲಿ 36 ಪ್ರಯಾಣಿಕರಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಚಾಲಕ ತಕ್ಷಣ ಜಾಗರೂಕತೆಯಿಂದ ಬಸ್ ನಿಲ್ಲಿಸಿ ಎಲ್ಲರನ್ನೂ ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಪ್ರಯಾಣಿಕರ ಲಗೇಜ್‌ಗಳು,

ಟಯರ್‌ ಸ್ಫೋಟಗೊಂಡು ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಅದೃಷ್ಟವಶಾತ್‌ ಪಾರು Read More »

error: Content is protected !!
Scroll to Top