ದಕ್ಷಿಣ ಕನ್ನಡ

ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಲಕ್ಷಗಟ್ಟಲೆ ಹಣ ಉಳಿಸಿದ ಬ್ಯಾಂಕ್‌ ಮ್ಯಾನೇಜರ್‌

ವೃದ್ಧ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಹಣ ದೋಚಲು ಯತ್ನಿಸಿದ್ದ ಸೈಬರ್‌ ಚೋರರು ಮಂಗಳೂರು : ಬ್ಯಾಂಕ್‌ ಮ್ಯಾನೇಜರ್‌ ಒಬ್ಬರ ಸಮಯಪ್ರಜ್ಞೆಯಿಂದಾಗಿ ಸೈಬರ್‌ ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಬರೋಬ್ಬರಿ 84 ಲ.ರೂ. ಉಳಿದಿದೆ. ಕಿನ್ನಿಗೋಳಿಯ ಸಮೀಪದ ದಾಮಸ್‌ಕಟ್ಟೆ ವೃದ್ಧ ದಂಪತಿಯನ್ನು ಸೈಬರ್‌ ವಂಚಕರು ಡಿಜಿಟಲ್‌ ಅರೆಸ್ಟ್‌ ಮಾಎಡಿ ಬೆದರಿಸಿ ಹಣ ಲೂಟಿ ಮಾಡಲು ಯತ್ನಿಸಿದ್ದರು. ಡಿಸೆಂಬರ್ 1ರಂದು ಸಂಜೆ ವಂಚಕರ ತಂಡವೊಂದು ಕಿನ್ನಿಗೋಳಿಯ ದಾಮಸ್ ಕಟ್ಟೆಯ ವೃದ್ಧ ದಂಪತಿಗೆ ಕರೆ ಮಾಡಿ ನೀವು ಯಾರದ್ದೋ ಖಾತೆಯಿಂದ […]

ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಲಕ್ಷಗಟ್ಟಲೆ ಹಣ ಉಳಿಸಿದ ಬ್ಯಾಂಕ್‌ ಮ್ಯಾನೇಜರ್‌ Read More »

ಮಂಗಳೂರಿನಲ್ಲಿ ದೈವದ ಹರಕೆ ತೀರಿಸಿದ ಕಾಂತಾರ ಚಿತ್ರತಂಡ

ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ, ಬಂಟ ದೈವಸ್ಥಾನದಲ್ಲಿ ಹರಕೆ ನೇಮ ಮಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾದ ಭರ್ಜರಿ ಯಶಸ್ಸಿಯಾದ ಹಿನ್ನೆಲೆಯಲ್ಲಿ ಚಿತ್ರತಂಡದವರು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ನೇತೃತ್ವದಲ್ಲಿ ಗುರುವಾರ ಮಂಗಳೂರಿಗೆ ಬಂದು ದೈವಕ್ಕೆ ಹೇಳಿಕೊಂಡಿದ್ದ ಹರಕೆ ತೀರಿಸಿದ್ದಾರೆ. ಮಂಗಳೂರಿನಲ್ಲಿ ಕಾಂತಾರ ತಂಡದಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಮಂಗಳೂರಿನ ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ. ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ.

ಮಂಗಳೂರಿನಲ್ಲಿ ದೈವದ ಹರಕೆ ತೀರಿಸಿದ ಕಾಂತಾರ ಚಿತ್ರತಂಡ Read More »

ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿ ಬಂಧನ

ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಓರ್ವನನ್ನು ಪೋಕ್ಸೊ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರಿಯಡ್ಕ ನಿವಾಸಿ ಮುಹಮ್ಮದ್ ಮುಸ್ತಫ (40) ಬಂಧಿತ ಆರೋಪಿ. ಈತ ಎರಡು ತಿಂಗಳಿಂದ ಬಾಲಕಿಯನ್ನು ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದು, ನ.29ರಂದು ಮನೆಗೆ ಕರೆದಿದ್ದಾನೆ ಎಂದು ಬಾಲಕಿಯ ಸಹೋದರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು

ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿ ಬಂಧನ Read More »

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಣಾಜೆಯ ಸರ್ವಮತ ಸಮ್ಮೇಳನ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮಂಗಳೂರು: ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮತ್ತು ಮಕ್ಕಳ ಕಲ್ಯಾಣ ಸಚಿವೆ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ದಿಬ್ಬಣದ ಬಸ್ಸಿನೊಳಗಿತ್ತು ಭಾರಿ ಗಾತ್ರದ ಹೆಬ್ಬಾವು

ಪುತ್ತೂರಿನಿಂದ ಮೂಡುಬಿದಿರೆ ತನಕ ಪ್ರಯಾಣಿಸಿ ಬಂದಿದ್ದ ಹೆಬ್ಬಾವು ಮೂಡುಬಿದಿರೆ : ಭಾರಿ ಗಾತ್ರದ ಹೆಬ್ಬಾವೊಂದು ಮದುವೆ ದಿಬ್ಬಣದ ಬಸ್ಸಿನಲ್ಲಿ ಪುತ್ತೂರಿನಿಂದ ಮೂಡುಬಿದಿರೆಯ ತನಕ ಪ್ರಯಾಣಿಸಿ ಬಂದ ಘಟನೆ ಮಂಗಳವಾರ ಸಂಭವಿಸಿದೆ. ಮೂಡುಬಿದಿರೆಯ ಜೈನ್ ಪೇಟೆಯ ಗೋಳಿಬಜೆ ಸೆಂಟರ್ ಹೋಟೆಲ್ ಬಳಿ ಉಪಾಹಾರ ಸೇವಿಸಲು ಬಸ್‌ ನಿಲ್ಲಿಸಿದಾಗ ಬಸ್ಸಿನೊಳಗೆ ಆರು ಅಡಿಗೂ ಉದ್ದ ಇರುವ ಹಾವು ಸುರುಳಿ ಸುತ್ತಿಕೊಂಡು ಮಲಗಿರುವುದು ಕಂಡುಬಂದಿದೆ. ಮದುವೆಯ ಬೆಂಗಾವಲು ಬಸ್ಸಿನೊಳಗೆ ಈ ಹಾವು ಇತ್ತು. ಪುತ್ತೂರಿನಿಂದ ಹೆಬ್ರಿ ಕಡೆಗೆ ಈ ಬಸ್‌ ಹೋಗುತ್ತಿತ್ತು.

ದಿಬ್ಬಣದ ಬಸ್ಸಿನೊಳಗಿತ್ತು ಭಾರಿ ಗಾತ್ರದ ಹೆಬ್ಬಾವು Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ವರದಿ ಮೇಲಿನ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

ಆರು ಮಂದಿಯ ವಿರುದ್ಧ ಎಸ್‌ಐಟಿ ಸಲ್ಲಿಸಿರುವ ವರದಿ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿ ಮುಂದಿನ ಶನಿವಾರಕ್ಕೆ ವಿಚಾರಣೆ ಮುಂದೂಡಿದೆ‌. ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20ರಂದು ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ವರದಿ ಮೇಲಿನ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ Read More »

ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ : ಮರು ತನಿಖೆಗೆ ತಾಯಿ ಒತ್ತಾಯ

ಪ್ರೀತಿಸುತ್ತಿದ್ದ ಹುಡುಗಿಯ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ಬಂಟ್ವಾಳ : ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ರಮಾನಂದ ಎಂಬ ಯುವಕನ ಸಾವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದು, ಮರು ತನಿಖೆ ಆಗ್ರಹಿಸಿ ದೂರು ನೀಡಿದ್ದಾರೆ. ಇದು ಆತ್ಮಹತ್ಯೆ ಅಲ್ಲ ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜೂರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳದ ಬರಿಮಾರು

ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ : ಮರು ತನಿಖೆಗೆ ತಾಯಿ ಒತ್ತಾಯ Read More »

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ

ಬಂಟ್ವಾಳ : ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಮೂವರನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ಇಡ್ಕಿದು ನಿವಾಸಿ ಉಮೇಶ (38), ಅನಂತಾಡಿ ನಿವಾಸಿ ಅಣ್ಣು (38), ವೀರಕಂಭ ನಿವಾಸಿ ಉಮೇಶ್ (30) ಎಂಬವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಅಕ್ರಮವಾಗಿ ಕೋಳಿಅಂಕದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಬಿ.ಎಸ್ ನಾಯಕ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ Read More »

ದೈವದ ಅಣಕ : ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ದೈವಾರಾಧಕರ ಆಕ್ರೋಶ

ಹೊಗಳುವ ಭರದಲ್ಲಿ ಅಣಕಿಸಿ ವಿವಾದ ಮೈಮೇಲೆ ಎಳೆದುಕೊಂಡ ನಟ ಮಂಗಳೂರು: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ – ಚಾಪ್ಟರ್‌ 1 ಸಿನೆಮಾವನ್ನು ಹೊಗಳುವ ಭರದಲ್ಲಿ ದೈವವನ್ನು ದೆವ್ವ ಎಂದು ಕರೆದಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಕರಾವಳಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಕೆಲವರು ಇದಕ್ಕೆಲ್ಲ ಅವಕಾಶ ಮಾಡಿಕೊಟ್ಟದ್ದು ರಿಷಬ್‌ ಶೆಟ್ಟಿ ಎಂದು ದೂಷಿಸುತ್ತಿದ್ದಾರೆ. ವೇದಿಕೆಯಲ್ಲಿ ದೈವಗಳನ್ನು ವಿಕೃತವಾಗಿ ಅನುಕರಣೆ ಮಾಡಿದ ನಟ ರಣ್‍ವೀರ್ ಸಿಂಗ್ ವಿರುದ್ಧ ದೈವಾರಾಧಕರು

ದೈವದ ಅಣಕ : ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ದೈವಾರಾಧಕರ ಆಕ್ರೋಶ Read More »

ತಾಯಿಯನ್ನು ತಳ್ಳಿ ಚಪ್ಪಲಿಯಿಂದ ಹಲ್ಲೆ ಮಾಡಿದ ಮಗಳು : ವಿಡಿಯೋ ವೈರಲ್‌

ದೂರು ನೀಡಲು ಬಂದ ತಾಯಿಯ ಮೇಲೆ ಪಂಚಾಯತ್‌ ಕಚೇರಿಯಲ್ಲೇ ದೌರ್ಜನ್ಯ ಮಂಗಳೂರು : ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ಮಗಳೇ ತನ್ನ ತಾಯಿಗೆ ಮನಬಂದಂತೆ ಥಳಿಸಿ, ಚಪ್ಪಲಿಯಿಂದ ಹೊಡೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಮೂಡುಶೆಡ್ಡೆಯ ಶಿವನಗರದಲ್ಲಿ ವಾಸಿಸುವ ತಾಯಿ ಮತ್ತು ಮಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿಂದೆ, ತಾಯಿ ಈ ವಿವಾದಗಳ ಕುರಿತು ಕಾವೂರು ಪೊಲೀಸ್

ತಾಯಿಯನ್ನು ತಳ್ಳಿ ಚಪ್ಪಲಿಯಿಂದ ಹಲ್ಲೆ ಮಾಡಿದ ಮಗಳು : ವಿಡಿಯೋ ವೈರಲ್‌ Read More »

error: Content is protected !!
Scroll to Top