ಪುತ್ತೂರಿನಲ್ಲಿ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸುವ ಮೂಲಕ ಸಮಗ್ರ ಆರೋಗ್ಯ ಪದ್ಧತಿಗಳನ್ನು ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದಿಂದ ಸರಕಾರಕ್ಕೆ ಆಗ್ರಹ
ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಸಮಗ್ರ ಆರೋಗ್ಯ ಪದ್ಧತಿಗಳನ್ನು ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕಾಗಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ. ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿರುವ ಸಂಘ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪ್ರಸ್ತುತ ಅಡಿಕೆ ಪ್ರಧಾನ ಬೆಳೆಯಾಗುತ್ತಿದ್ದು, ಪಾರಂಪರಿಕ ಕೃಷಿಯಾದ ಅಡಿಕೆಯನ್ನೇ ನಂಬಿ ಕೃಷಿಕರು ಬದುಕುತ್ತಿದ್ದಾರೆ. ಅಡಿಕೆಯನ್ನು ವಿವಿಧ ಆಯುರ್ವೇದ ಔಷಧಗಳಿಗೂ ಉಪಯೋಗ ಮಾಡಬಹುದು ಎಂದು ಹಲವು ಸಂಶೋಧನೆಗಳಿಂದ ದೃಢವಾಗಿದೆ. ಈಗಾಗಲೇ ಕೃಷಿಕ ಸಂಶೋಧಕ ಬದನಾಜೆ […]